In the film Industry, it is you who created the story Upendra, it is you who wrote the screenplay & dialogues for 33 years, it is you who directed through your whistles and claps. I dedicate this film to you the praja prabhu fans 🙏🙏🙏#nimmaupendra #uppidirects #laharifilms pic.twitter.com/h4UsatujyT
— Upendra (@nimmaupendra) March 11, 2022
ಈ ಫಸ್ಟ್ ಲುಕ್ ಪೋಸ್ಟರ್ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆಯುತ್ತಿವೆ. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಪೋಸ್ಟರ್ನಲ್ಲಿ ಉಪೇಂದ್ರ ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಮೆಂಟ್ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸಗೊಂಡಿರುವ ಈ ಪೋಸ್ಟರ್ ಸದ್ಯ ವೈರಲ್ ಆಗುತ್ತಿದೆ. ಹಿನ್ನೆಲೆಯಲ್ಲಿ ಉಪಗ್ರಹ ಕಾಣಿಸಿದೆ. ಈ ಎಲ್ಲ ಕಾರಣದಿಂದ ಸಿನಿಮಾ ಬಗ್ಗೆ ಕೌತುಕ ಹೆಚ್ಚಿದೆ. ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್’ ಮತ್ತು ‘ವೀನಸ್ ಎಂಟರ್ಟೇನರ್ಸ್’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್ ಮತ್ತು ಶ್ರೀಕಾಂತ್ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.
ಇದನ್ನೂ ಓದಿ:
ಏಪ್ರಿಲ್ನಲ್ಲಿ ರಿಲೀಸ್ ಆಗುತ್ತಿದೆ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಸಿನಿಮಾ
‘ಅಲ್ಲಿ ಬೇರೆಯದೇ ಹೋಮ್ ಮಿನಿಸ್ಟರ್ ಇರ್ತಾರೆ, ಅದೇ ಇದರ ಸಸ್ಪೆನ್ಸ್’: ನಟ ಉಪೇಂದ್ರ