ಉಪೇಂದ್ರ ನಿರ್ದೇಶನದ ಚಿತ್ರದ ಮುಹೂರ್ತಕ್ಕೆ ಫಿಕ್ಸ್ ಆಯ್ತು ದಿನಾಂಕ; ಇಲ್ಲಿದೆ ವಿವರ

ಉಪೇಂದ್ರ ನಿರ್ದೇಶನದ ಚಿತ್ರದ ಮುಹೂರ್ತಕ್ಕೆ ಫಿಕ್ಸ್ ಆಯ್ತು ದಿನಾಂಕ; ಇಲ್ಲಿದೆ ವಿವರ
ಉಪೇಂದ್ರ

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ.

TV9kannada Web Team

| Edited By: Rajesh Duggumane

May 23, 2022 | 5:40 PM

ಡೈರೆಕ್ಷನ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ ಉಪೇಂದ್ರ ಅವರು (Upendra) ಇತ್ತೀಚಿನ ವರ್ಷಗಳಲ್ಲಿ ನಟನೆಯಲ್ಲಿ ಬ್ಯುಸಿ ಆದರು. ಈಗ ಅವರು ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಅವರು ಅಭಿನಯಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾದ ಪೋಸ್ಟರ್ ಈ ಮೊದಲು ರಿಲೀಸ್ ಆಗಿತ್ತು. ಈಗ ಸಿನಿಮಾದ ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 3ರಂದು ಸಿನಿಮಾದ ಮುಹೂರ್ತ ನೆರವೇರಲಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಈ ಟೈಟಲ್​ಗೆ ಏನೆಂದು ಕರೆಯಬೇಕು ಎಂಬುದು ಫ್ಯಾನ್ಸ್​ಗೂ ಕೂಡ ಗೊತ್ತಾಗಿಲ್ಲ. ಮುಹೂರ್ತದ ವೇಳೆ ಉಪೇಂದ್ರ ಇದಕ್ಕೆ ಸ್ಪಷ್ಟನೆ ನೀಡಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ.

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಇನ್ನೂ ಬಗೆಹರಿದಿಲ್ಲ. ಮುಹೂರ್ತದ ವೇಳೆ ಉಪೇಂದ್ರ ಇದಕ್ಕೆ ಸ್ಪಷ್ಟನೆ ನೀಡಬಹುದು.

ಫಸ್ಟ್ ಲುಕ್​ನಲ್ಲಿ ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದರು. ಅವರ ಲುಕ್​ ಕೂಡ ಗಮನ ಸೆಳೆದಿತ್ತು. ಉಪೇಂದ್ರ ಅವರ ನಟನೆಗಿಂತಲೂ ಅವರ ನಿರ್ದೇಶನಕ್ಕೆ ಅಭಿಮಾನಿಗಳು ಜಾಸ್ತಿ ಎಂದರೆ ತಪ್ಪಿಲ್ಲ. ‘ಉಪ್ಪಿ 2’ ಸಿನಿಮಾ ಬಳಿಕ ಅವರು ನಿರ್ದೇಶನದಿಂದ ಕೊಂಚ ದೂರ ಉಳಿದುಕೊಂಡಿದ್ದರು. ಹಾಗಾಗಿ ಅವರು ಆದಷ್ಟು ಬೇಗ ಡೈರೆಕ್ಟರ್​ ಕ್ಯಾಪ್​ ಧರಿಸಲಿ ಎಂಬುದು ಎಲ್ಲ ಅಭಿಮಾನಿಗಳ ಆಸೆ ಆಗಿತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಹೊಸ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿ ನಟಿಸುತ್ತಿದ್ದಾರೆ.

ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್​’ ಮತ್ತು ‘ವೀನಸ್​ ಎಂಟರ್​ಟೇನರ್ಸ್​’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್​ ಮತ್ತು ಶ್ರೀಕಾಂತ್​ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.

ಚಿತ್ರ ವಿಚಿತ್ರವಾಗಿ ಬರೆದುಕೊಂಡಿದ್ದ ಉಪೇಂದ್ರ

ಈ ಮೊದಲು ರಿಲೀಸ್ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆದಿತ್ತು. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ

Follow us on

Related Stories

Most Read Stories

Click on your DTH Provider to Add TV9 Kannada