AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಉಪೇಂದ್ರ ಡಿಸ್ಚಾರ್ಜ್; ರಿಯಲ್ ಸ್ಟಾರ್​ಗೆ ಎದುರಾದ ಆರೋಗ್ಯ ಸಮಸ್ಯೆ ಏನು?

ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಆದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಕೆಲವು ಗಂಟೆಗಳ ಕಾಲ ಚಿಕಿತ್ಸೆ ಪಡೆದ ಅವರು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಉಪೇಂದ್ರ ಈಗ ಚೇತರಿಸಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಉಪೇಂದ್ರ ಡಿಸ್ಚಾರ್ಜ್; ರಿಯಲ್ ಸ್ಟಾರ್​ಗೆ ಎದುರಾದ ಆರೋಗ್ಯ ಸಮಸ್ಯೆ ಏನು?
Upendra
ಮದನ್​ ಕುಮಾರ್​
|

Updated on: May 05, 2025 | 6:17 PM

Share

ನಟ, ನಿರ್ದೇಶಕ ಉಪೇಂದ್ರ (Upendra) ಅವರ ಅಭಿಮಾನಿಗಳಿಗೆ ಸೋಮವಾರ (ಮೇ 5) ಒಂದು ಕ್ಷಣ ಆತಂಕ ಎದುರಾಯಿತು. ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ಮಾಹಿತಿ ಕೇಳಿಬಂತು. ಕೂಡಲೇ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲು (Upendra Hospitalized) ಮಾಡಲಾಯಿತು. ಆದರೆ ಸ್ವಲ್ಪ ಹೊತ್ತು ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹಾಗಾಗಿ ಅವರನ್ನು ಕೆಲವೇ ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಿ, ಮನೆಗೆ ಕಳಿಸಲಾಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಅಷ್ಟಕ್ಕೂ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಎದುರಾದ ಆರೋಗ್ಯ ಸಮಸ್ಯೆ ಏನು? ಅತಿಯಾದ ಆ್ಯಸಿಡಿಟಿ! ಹೌದು, ಓವರ್ ಆ್ಯಸಿಡಿಟಿ ಉಂಟಾಗಿದ್ದರಿಂದ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಂತ ಅವರಿಗೆ ಈ ರೀತಿ ಆಗಿದ್ದು ಇದೇ ಮೊದಲೇನೂ ಅಲ್ಲ. ಈ ಮೊದಲು ‘ಯುಐ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕೂಡ ಉಪೇಂದ್ರ ಅವರು ಇದೇ ಸಮಸ್ಯೆ ಎದುರಿಸಿದ್ದರು.

‘ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಉಪೇಂದ್ರ ಅವರು ಮನೆಗೆ ಮರಳಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದರಿಂದ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ. ಉಪೇಂದ್ರ ಅವರಿಗೆ ಈಗ 56 ವರ್ಷ ವಯಸ್ಸು. ಚಿತ್ರರಂಗದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Image
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
Image
ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ
Image
ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

ನಟನಾಗಿ, ನಿರ್ದೇಶಕನಾಗಿ, ಗಾಯಕನಾಗಿ ಕೂಡ ಉಪೇಂದ್ರ ಅವರಿಗೆ ಬೇಡಿಕೆ ಇದೆ. ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾದಲ್ಲಿ ಉಪೇಂದ್ರ ಅವರು ನಟಿಸಿದ್ದಾರೆ. ಆಗಸ್ಟ್ 15ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ಅದರ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ತೊಡಗಿಕೊಂಡಿದೆ.

ಇದನ್ನೂ ಓದಿ: ಊಟಿಯಲ್ಲಿ ದೆವ್ವದ ಅನುಭವ ಆಗಿದೆ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್

ಇನ್ನು, ಉಪೇಂದ್ರ ಅವರು ಪರಭಾಷೆಯಲ್ಲಿ ಕೂಡ ಫೇಮಸ್ ಆಗಿದ್​ದಾರೆ. ತೆಲುಗು ಚಿತ್ರರಂಗದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ತಮಿಳಿನಲ್ಲಿ ರಜನಿಕಾಂತ್ ಅಭಿನಯದ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಅವರು ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ