ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ

‘ಸನ್​ ಪಿಕ್ಚರ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಅವರು ರಜನಿಕಾಂತ್​ ಜೊತೆ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ ಲುಕ್​ ಹೇಗಿರಲಿದೆ ಎಂಬುದು ಈಗ ರಿವೀಲ್​ ಆಗಿದೆ. ‘ಕೂಲಿ’ ಚಿತ್ರತಂಡದವರು ಉಪೇಂದ್ರ ಅವರ ಪಾತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್​ ಹಂಚಿಕೊಂಡು ಉಪೇಂದ್ರ ಫ್ಯಾನ್ಸ್​ ಸಂಭ್ರಮಿಸಿದ್ದಾರೆ.

ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ
ರಜನಿಕಾಂತ್​, ಉಪೇಂದ್ರ
Follow us
ಮದನ್​ ಕುಮಾರ್​
|

Updated on: Sep 01, 2024 | 7:17 PM

‘ಸೂಪರ್​ ಸ್ಟಾರ್​’ ರಜನಿಕಾಂತ್​ ಜೊತೆ ನಟಿಸಬೇಕು ಎಂಬ ಆಸೆ ಬಹುತೇಕ ಎಲ್ಲ ಕಲಾವಿದರಿಗೆ ಇರುತ್ತದೆ. ಉಪೇಂದ್ರ ಅವರಿಗೆ ಆ ಆಸೆ ಈಡೇರುತ್ತಿದೆ. ಬಹುನಿರೀಕ್ಷಿತ ‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸಲು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಬ್ಲ್ಯಾಕ್​ ಆ್ಯಂಡ್​ ವೈಟ್​ ಥೀಮ್​ನಲ್ಲಿ ಮೂಡಿಬಂದ ಈ ಪೋಸ್ಟರ್​ ಕಂಡು ಉಪೇಂದ್ರ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

‘ಕೂಲಿ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ರಜನಿಕಾಂತ್​ ಜೊತೆ ಅನೇಕ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಅಕ್ಕಿನೇನಿ ನಾಗಾರ್ಜುನ, ಶ್ರುತಿ ಹಾಸನ್​, ಸತ್ಯರಾಜ್​, ರಚಿತಾ ರಾಮ್​, ಉಪೇಂದ್ರ ಮುಂತಾದವರು ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಬಾಲಿವುಡ್​ ನಟ ಆಮಿರ್​ ಖಾನ್​ ಕೂಡ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಖಚಿತತೆ ಸಿಗಬೇಕಿದೆ.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಉಪೇಂದ್ರ ಅವರು ‘ಕೂಲಿ’ ಸಿನಿಮಾದಲ್ಲಿ ಕಾಲೇಶ ಎಂಬ ಪಾತ್ರ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಫಸ್ಟ್​ ಲುಕ್​ ಹಂಚಿಕೊಂಡ ಉಪೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಆಶೀರ್ವಾದದಿಂದ ನನ್ನ ಗುರು, ನನ್ನ ಸೂಪರ್ ಸ್ಟಾರ್ ರಜನಿ ಸರ್ ಜೊತೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ನಿರ್ದೇಶಕ ಲೋಕೇಶ್​ ಕನಗರಾಜ್​ ಅವರಿಗೆ ಧನ್ಯವಾದಗಳು’ ಎಂದು ಉಪೇಂದ್ರ ಪೋಸ್ಟ್​ ಮಾಡಿದ್ದಾರೆ. ‘ಸನ್​ ಪಿಕ್ಚರ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಉಪೇಂದ್ರ ಅವರಿಗೆ ಖ್ಯಾತಿ ಇದೆ. ಈಗ ಅವರು ‘ಯುಐ’ ಸಿನಿಮಾದ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಹಲವು ವರ್ಷಗಳ ಬಳಿಕ ಉಪೇಂದ್ರ ಆ್ಯಕ್ಷನ್​-ಕಟ್​ ಹೇಳಿದ ಸಿನಿಮಾ ಎಂಬ ಕಾರಣದಿಂದ ‘ಯುಐ’ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಅಕ್ಟೋಬರ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ