Kabzaa Teaser: ಒಂದೂವರೆ ಕೋಟಿ ಬಾರಿ ವೀಕ್ಷಣೆ ಕಂಡ ‘ಕಬ್ಜ’ ಟೀಸರ್​; ಕಮಾಲ್​ ಮಾಡಿದ ಉಪ್ಪಿ-ಆರ್​. ಚಂದ್ರು

Kabzaa Movie: ‘ಕಬ್ಜ’ ಸಿನಿಮಾದ ಟೀಸರ್​ ಕಂಡು ಪರಭಾಷೆ ಸೆಲೆಬ್ರಿಟಿಗಳು ಕೂಡ ವಾವ್​ ಎನ್ನುತ್ತಿದ್ದಾರೆ. ಯೂಟ್ಯೂಬ್​ನಲ್ಲಿ ಇದು ಟ್ರೆಂಡ್​ ಸೃಷ್ಟಿ ಮಾಡಿದೆ.

Kabzaa Teaser: ಒಂದೂವರೆ ಕೋಟಿ ಬಾರಿ ವೀಕ್ಷಣೆ ಕಂಡ ‘ಕಬ್ಜ’ ಟೀಸರ್​; ಕಮಾಲ್​ ಮಾಡಿದ ಉಪ್ಪಿ-ಆರ್​. ಚಂದ್ರು
ಕಬ್ಜ ಸಿನಿಮಾ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Sep 19, 2022 | 7:17 AM

ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಕಬ್ಜ’ ಚಿತ್ರ (Kabzaa Movie) ಸಖತ್​ ನಿರೀಕ್ಷೆ ಹುಟ್ಟುಹಾಕಿದೆ. ಉಪೇಂದ್ರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ. ಶನಿವಾರ (ಸೆ.17) ಈ ಸಿನಿಮಾದ ಟೀಸರ್​ (Kabzaa Movie Teaser) ಬಿಡುಗಡೆ ಆಯಿತು. ಒಂದೇ ದಿನದಲ್ಲಿ ಒಂದು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಇದರ ಹೆಚ್ಚುಗಾರಿಕೆ. ಈಗ ಒಂದೂವರೆ ಕೋಟಿ ವೀವ್ಸ್​ ದಾಟಿ ಮುನ್ನುಗ್ಗುತ್ತಿದೆ. ಆ ಮೂಲಕ ನಿರ್ದೇಶಕ ಆರ್​. ಚಂದ್ರು (R. Chandru) ಅವರ ಕೆಲಸಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಕನ್ನಡದಿಂದ ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾ ಧೂಳೆಬ್ಬಿಸಲು ಬರುತ್ತಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

‘ಕಬ್ಜ’ ಟೀಸರ್​ನಲ್ಲಿ ಅನೇಕ ವಿಷಯಗಳು ಹೈಲೈಟ್ ಆಗಿವೆ. ಪ್ರತಿ ಫೇಮ್​ನಲ್ಲೂ ಶ್ರೀಮಂತಿಕೆ ಕಾಣುತ್ತಿದೆ. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ. ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣಕ್ಕೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಇಡೀ ಸಿನಿಮಾ ಸಖತ್​ ಅದ್ದೂರಿಯಾಗಿ ನಿರ್ಮಾಣ ಆಗಿದೆ ಎಂಬುದಕ್ಕೆ ಈ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಕಿಚ್ಚ ಸುದೀಪ್​ ಅವರ ಗೆಟಪ್​ ಕೂಡ ಇದರಲ್ಲಿ ರಿವೀಲ್​ ಆಗಿದೆ. ಉಪೇಂದ್ರ ಅವರ ಲುಕ್​ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಇದನ್ನೂ ಓದಿ
Image
Kabzaa Teaser: ಹೇಗಿದೆ ನೋಡಿ ‘ಕಬ್ಜ’ ಟೀಸರ್​; ಹೊಸ ಹವಾ ಎಬ್ಬಿಸಿದ ಉಪೇಂದ್ರ-ಸುದೀಪ್​ ಚಿತ್ರದ ಝಲಕ್​
Image
Kabza: ‘ಕಬ್ಜ’ ಟೀಸರ್​ ಬಗ್ಗೆ ಮಾತಾಡಿದ ಕಿಚ್ಚ ಸುದೀಪ್​; ಉಪ್ಪಿ ಅಭಿಮಾನಿಗಳಲ್ಲಿ ಜೋರಾಯ್ತು ಕ್ರೇಜ್​
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ
Image
Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

ಈ ಟೀಸರ್​ ಕಂಡು ಪರಭಾಷೆ ಸೆಲೆಬ್ರಿಟಿಗಳು ಕೂಡ ವಾವ್​ ಎನ್ನುತ್ತಿದ್ದಾರೆ. ಯೂಟ್ಯೂಬ್​ನಲ್ಲಿ ಟ್ರೆಂಡ್​ ಸೃಷ್ಟಿ ಮಾಡಿರುವ ಟೀಸರ್​ ನೋಡಿ ರಾಮ್​ ಗೋಪಾಲ್​ ವರ್ಮಾ ಅವರು ಹೊಗಳಿದ್ದಾರೆ. ‘ಟೀಸರ್​ ನಿಜಕ್ಕೂ ದೊಡ್ಡದಾಗಿದೆ. ಉಪೇಂದ್ರ, ಸುದೀಪ್​ ಮತ್ತು ನಿರ್ದೇಶಕ ಆರ್​. ಚಂದ್ರು ಅವರಿಗೆ ಆಲ್​ ದಿ ಬೆಸ್ಟ್​ ಹೇಳುತ್ತೇನೆ. 24 ಗಂಟೆಗಳಲ್ಲಿ ಒಂದು ಕೋಟಿ ಪ್ಲಸ್​ ವೀವ್ಸ್​ ಪಡೆದುಕೊಂಡಿದೆ. ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ನನ್ನ ಸ್ವಾಗತ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ಯೂಟ್ಯೂಬ್​ನಲ್ಲಿ ನಾಲ್ಕೂವರೆ ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ. 48 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಎಲ್ಲರೂ ಪಾಸಿಟಿವ್​ ಆಗಿ ಪ್ರತಿಕ್ರಿಯೆ ತಿಳಿಸಿದ್ದಾರೆ. ಸಿನಿಮಾ ನೋಡಲು ಕಾಯುತ್ತಿರುವುದಾಗಿ ಪರಭಾಷೆಯ ಸಿನಿಪ್ರೇಮಿಗಳು ಕೂಡ ಕಮೆಂಟ್​ ಮಾಡುತ್ತಿದ್ದಾರೆ.

ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ‘ಕಬ್ಜ’ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರದ ಕಥೆ ಏನು ಎಂದು ಜನರು ತಲೆಗೆ ಹುಳ ಬಿಟ್ಟುಕೊಂಡಿದ್ದಾರೆ. ಒಟ್ಟಿನಲ್ಲಿ ಈ ಟೀಸರ್​ ಭಾರಿ ಹವಾ ಸೃಷ್ಟಿ ಮಾಡಿರುವುದಂತೂ ನಿಜ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:17 am, Mon, 19 September 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ