Kabzaa Title Song: ‘ಕಬ್ಜ’ ಟೈಟಲ್​ ಸಾಂಗ್​ ಬಿಡುಗಡೆಗೆ ದಿನಗಣನೆ ಶುರು; ಉಪ್ಪಿ, ಸುದೀಪ್​ ಅಭಿಮಾನಿಗಳಿಗೆ ಹೆಚ್ಚಿತು ನಿರೀಕ್ಷೆ

Kabzaa Movie Songs | Upendra: ಹೈದರಾಬಾದ್​ನಲ್ಲಿ ‘ಕಬ್ಜ’ ಚಿತ್ರದ ಶೀರ್ಷಿಕೆ ಗೀತೆ​ ರಿಲೀಸ್​ ಆಗಲಿದೆ. ಫೆ.4ರಂದು ನಡೆಯುವ ಅದ್ದೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

Kabzaa Title Song: ‘ಕಬ್ಜ’ ಟೈಟಲ್​ ಸಾಂಗ್​ ಬಿಡುಗಡೆಗೆ ದಿನಗಣನೆ ಶುರು; ಉಪ್ಪಿ, ಸುದೀಪ್​ ಅಭಿಮಾನಿಗಳಿಗೆ ಹೆಚ್ಚಿತು ನಿರೀಕ್ಷೆ
ಉಪೇಂದ್ರ
Follow us
ಮದನ್​ ಕುಮಾರ್​
|

Updated on: Feb 02, 2023 | 2:55 PM

ಆರ್​. ಚಂದ್ರು ಆ್ಯಕ್ಷನ್​-ಕಟ್​ ಹೇಳಿರುವ ‘ಕಬ್ಜ’ (Kabzaa Movie) ಸಿನಿಮಾದ ಮೊದಲ ಸಾಂಗ್​ ಹೊರಬರುತ್ತಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈ ಚಿತ್ರತಂಡದಿಂದ ಬರುವ ಹಾಡು ಯಾವುದು ಎಂಬ ಪ್ರಶ್ನೆಗೂ ಈಗ ಉತ್ತರ ಸಿಕ್ಕಿದೆ. ಮೊದಲಿಗೆ ಶೀರ್ಷಿಕೆ ಗೀತೆ ರಿಲೀಸ್​ ಮಾಡಲು ಆರ್​. ಚಂದ್ರು (R. Chandru) ನಿರ್ಧರಿಸಿದ್ದಾರೆ. ಹೈದರಾಬಾದ್​ನಲ್ಲಿ ಫೆಬ್ರವರಿ 4ರಂದು ಅದ್ದೂರಿಯಾಗಿ ‘ಕಬ್ಜ’ ಟೈಟಲ್​ ಟ್ರ್ಯಾಕ್​ ಅನಾವರಣ ಆಗಲಿದೆ. ಈ ಸಿನಿಮಾದಲ್ಲಿ ಉಪೇಂದ್ರ ಮತ್ತು ಕಿಚ್ಚ ಸುದೀಪ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್​ ನಟಿಸಿದ್ದಾರೆ. ಈ ಸಿನಿಮಾಗೆ ರವಿ ಬಸ್ರೂರು (Ravi Basrur) ಸಂಗೀತ ನಿರ್ದೇಶನ ಮಾಡಿದ್ದು, ಶೀರ್ಷಿಕೆ ಗೀತೆಗೆ ಅವರೇ ಸಾಹಿತ್ಯ ಬರೆದಿದ್ದಾರೆ.

ಮಾರ್ಚ್​ 17ರಂದು ‘ಕಬ್ಜ’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಲು ತಂಡ ಸಜ್ಜಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಪ್ರಮುಖ ನಗರಗಳಲ್ಲಿ ಒಂದೊಂದು ಹಾಡನ್ನು ಬಿಡುಗಡೆ ಮಾಡಲಾಗುವುದು. ಹೈದರಾಬಾದ್​ನಲ್ಲಿ ಫಸ್ಟ್​ ಸಾಂಗ್​ ರಿಲೀಸ್​ ಆಗಲಿದೆ. ತೆಲುಗು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಇದನ್ನೂ ಓದಿ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​
Image
ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
Image
Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್​; ಉಪ್ಪಿ ಸಿನಿಮಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​
Image
‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಎಂದ ಉಪೇಂದ್ರ

ತೆಲುಗು ನೆಲದಲ್ಲಿ ಉಪೇಂದ್ರ, ಸುದೀಪ್​ ಹಾಗೂ ಶ್ರೀಯಾ ಶರಣ್​ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ಬಳಿಕ ಸಂಗೀತ ನಿರ್ದೇಶಕ ರವಿ ಬಸ್ರೂರು ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈ ಎಲ್ಲ ಕಾರಣದಿಂದ ಹೈದರಾಬಾದ್​ನಲ್ಲಿ ನಡೆಯಲಿರುವ ಶೀರ್ಷಿಕೆ ಗೀತೆ ಬಿಡುಗಡೆ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಅಭಿಮಾನಿಗಳಲ್ಲಿ ಬಲವಾಗಿದೆ.

ಇದನ್ನೂ ಓದಿ: Kabzaa Song: ‘ಕಬ್ಜ’ ಲಿರಿಕಲ್​ ಸಾಂಗ್​ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್​ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ

ಮಾರ್ಚ್​ 17ರಂದು ‘ಕಬ್ಜ’ ರಿಲೀಸ್​:

‘ಕಬ್ಜ’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ (ಮಾ.17) ರಿಲೀಸ್​ ಮಾಡಲು ಆರ್​. ಚಂದ್ರು ತೀರ್ಮಾನಿಸಿದ್ದಾರೆ. ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಪುನೀತ್​ ರಾಜ್​ಕುಮಾರ್​ ಅವರು ಅಭಿಮಾನಿಗಳ ಪಾಲಿನ ದೇವರು. ಅನೇಕ ಬಾರಿ ಅವರು ನನ್ನನ್ನು ಹುರಿದುಂಬಿಸಿದ್ದರು. ಹುಷಾರಾಗಿ ಸಿನಿಮಾ ಮಾಡು ಅಂತ ಮಾರ್ಗದರ್ಶನ ನೀಡುತ್ತಿದ್ದರು. ಹಾಗಾಗಿ ಅವರ ಬರ್ತ್​ಡೇ ದಿನವೇ ಕಬ್ಜ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಆರ್. ಚಂದ್ರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು