ಜಾತಿ ನಿಂದನೆ ಆರೋಪ: ಬಡತನದ ಬಾಲ್ಯ ನೆನೆದು, ಕ್ಷಮೆ ಸ್ವೀಕರಿಸುವ ದೊಡ್ಡತನವಿಲ್ಲವೇ ಎಂದ ಉಪ್ಪಿ

Upendra: ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಉಪೇಂದ್ರ, ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕಿಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

ಜಾತಿ ನಿಂದನೆ ಆರೋಪ: ಬಡತನದ ಬಾಲ್ಯ ನೆನೆದು, ಕ್ಷಮೆ ಸ್ವೀಕರಿಸುವ ದೊಡ್ಡತನವಿಲ್ಲವೇ ಎಂದ ಉಪ್ಪಿ
ಉಪೇಂದ್ರ
Follow us
ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ

Updated on:Aug 14, 2023 | 10:51 AM

ನಟ ಉಪೇಂದ್ರ (Upendra) ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು, ಬೆಂಗಳೂರಿನಲ್ಲಿಯೇ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ನಿನ್ನೆ (ಆಗಸ್ಟ್ 12) ಸೋಷಿಯಲ್ ಮೀಡಿಯಾದಲ್ಲಿ (Social media) ಲೈವ್ ಬಂದಿದ್ದ ನಟ ಉಪೇಂದ್ರ ಮಾತನಾಡುವಾಗ ಆಕ್ಷೇಪಾರ್ಹ ಶಬ್ದ ಬಳಸಿದ್ದರು. ಈ ಪದ ಬಳಕೆ ಬಗ್ಗೆ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇಂದು (ಆಗಸ್ಟ್ 13) ರಾಮನಗರದಲ್ಲಿ ಉಪ್ಪಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಜೊತೆಗೆ ಎರಡು ಪ್ರತ್ಯೇಕ ದೂರುಗಳು ದಾಖಲಾಗಿ. ಎಫ್​ಐಆರ್ ಸಹ ನೊಂದಣಿಯಾಗಿದೆ.

ಉಪೇಂದ್ರ ಅವರ ಹೇಳಿಕೆ ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಜೊತೆಗೆ ಬಿಆರ್ ಭಾಸ್ಕರ್ ರಾವ್ ಹಾಗೂ ಇನ್ನೂ ಕೆಲವರು ಹೊಸೂರು ಗೇಟ್ ಪೊಲೀಸ್ ಠಾಣೆಯಲ್ಲಿಯೂ ಉಪೇಂದ್ರ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ತಮ್ಮ ಮಾತಿನಿಂದ ಹಲವರಿಗೆ ಆಗಿರುವ ಬೇಸರದ ಬಗ್ಗೆ ಅರಿತು ನಿನ್ನೆಯೇ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಕೇಳಿದ್ದ ನಟ ಉಪೇಂದ್ರ ಇಂದು (ಆಗಸ್ಟ್ 13) ಮತ್ತೊಂದು ಪೋಸ್ಟ್ ಹಾಕಿದ್ದು, ತಮ್ಮ ಬಡತನ ತುಂಬಿದ ಬಾಲ್ಯ ನೆನೆದಿರುವುದಲ್ಲದೆ, ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವಾಯ್ತೆ, ಏಕೆ ಇಷ್ಟೋಂದು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಆಕ್ಷೇಪಾರ್ಹ ಹೇಳಿಕೆ, ನಟ ಉಪೇಂದ್ರ ವಿರುದ್ಧ ದಲಿತಪರ ಸಂಘಟನೆಗಳ ಪ್ರತಿಭಟನೆ, ದೂರು ದಾಖಲು

”ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ, ನಾನು ಎಂಥಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ಥುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ಧ್ವೇಷ?” ಎಂದು ಉಪೇಂದ್ರ ಪ್ರಶ್ನೆ ಮಾಡಿದ್ದಾರೆ. ಉಪೇಂದ್ರ ಪೋಸ್ಟ್​ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಉಪೇಂದ್ರ ಫೇಸ್​ಬುಕ್ ಪೋಸ್ಟ್

ಉಪೇಂದ್ರ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್, ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ, ಫೇಸ್​ಬುಕ್​ನಲ್ಲಿ ಉಪೇಂದ್ರ ಒಂದು ಸ್ಟೇಟ್​​ಮೆಂಟ್ ನೀಡಿದ್ದರು, ಅದು ಕೆಲ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದೆ. ನಟ ಉಪೇಂದ್ರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಏನಿದು ವಿವಾದ?

ಪ್ರಜಾಕೀಯದ ವಾರ್ಷಿಕೋತ್ಸವದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದಿದ್ದಾಗ ಆಕ್ಷೇಪಾರ್ಹ ಶಬ್ದ ಬಳಕೆ ಮಾಡಿದ್ದರು. ಉಪೇಂದ್ರರ ಈ ಮಾತಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಉಪ್ಪಿ, ”ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು, ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ ಮತ್ತು ಈ ಮಾತಿಗೆ ಕ್ಷಮೆಯಿರಲಿ” ಎಂದು ಪೋಸ್ಟ್ ಹಾಕಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Sun, 13 August 23

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ