ಕಾವೇರಿ ವಿವಾದ: ಪೂರ್ಣಚಂದ್ರ ತೇಜಸ್ವಿ ಹೇಳಿದ ಅರ್ಥಪೂರ್ಣ ಮಾತು ನೆನಪಿಸಿಕೊಂಡ ಉಪೇಂದ್ರ

|

Updated on: Sep 27, 2023 | 12:49 PM

ನೆಲ, ಭಾಷೆ, ನೀರಿನ ವಿಚಾರದಲ್ಲಿ ಕನ್ನಡ ಚಿತ್ರರಂಗ ಮೊದಲಿನಿಂದಲೂ ಬೆಂಬಲ ಸೂಚಿಸುತ್ತಲೇ ಬರುತ್ತಿದೆ. ಈಗ ಕಾವೇರಿ ಹೋರಾಟದಲ್ಲಿಯೂ ಚಿತ್ರರಂಗದವರು ಬೆಂಬಲ ಸೂಚಿಸಿದ್ದಾರೆ. ಶಿವರಾಜ್​ಕುಮಾರ್, ದರ್ಶನ್, ಉಪೇಂದ್ರ, ಸುದೀಪ್ ಮೊದಲಾದ ಸ್ಟಾರ್ ಹೀರೋಗಳು ಈಗ ಕಾವೇರಿ ಪರವಾಗಿ ಧ್ವನಿ ಎತ್ತಿದ್ದಾರೆ.

ಕಾವೇರಿ ವಿವಾದ: ಪೂರ್ಣಚಂದ್ರ ತೇಜಸ್ವಿ ಹೇಳಿದ ಅರ್ಥಪೂರ್ಣ ಮಾತು ನೆನಪಿಸಿಕೊಂಡ ಉಪೇಂದ್ರ
ಉಪೇಂದ್ರ
Follow us on

ಕಾವೇರಿ ವಿವಾದ ಭುಗಿಲೆದ್ದಿದೆ. ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಬಂದಾಗಿನಿಂದಲೂ ಕರ್ನಾಟಕದಲ್ಲಿ ಪ್ರತಿಭಟನೆ ಹಾಗೂ ಬಂದ್​ಗಳು ನಡೆಯುತ್ತಿವೆ. ಈಗ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರು ಬಂದ್ ಯಶಸ್ವಿ ಆಗಿದ್ದು, ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಲಾಗಿದೆ. ಈಗ ಕಾವೇರಿ ವಿವಾದಕ್ಕೆ ಸಂಬಂಧಿಸಿ ಉಪೇಂದ್ರ (Upendra) ವರು ಹೊಸ ಪೋಸ್ಟ್ ಒಂದನ್ನು ಮಾಡಿದ್ದಾರೆ.

ನೆಲ, ಭಾಷೆ, ನೀರಿನ ವಿಚಾರದಲ್ಲಿ ಕನ್ನಡ ಚಿತ್ರರಂಗ ಮೊದಲಿನಿಂದಲೂ ಬೆಂಬಲ ಸೂಚಿಸುತ್ತಲೇ ಬರುತ್ತಿದೆ. ಈಗ ಕಾವೇರಿ ಹೋರಾಟದಲ್ಲಿಯೂ ಚಿತ್ರರಂಗದವರು ಬೆಂಬಲ ಸೂಚಿಸಿದ್ದಾರೆ. ಶಿವರಾಜ್​ಕುಮಾರ್, ದರ್ಶನ್, ಉಪೇಂದ್ರ, ಸುದೀಪ್ ಮೊದಲಾದ ಸ್ಟಾರ್ ಹೀರೋಗಳು ಈಗ ಕಾವೇರಿ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಹೇಳಿದ ಅರ್ಥಪೂರ್ಣ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.

‘ಯಾವುದೇ ಭೂಭಾಗಕ್ಕೆ ಅದರದ್ದೇ ಆದ ಅನುಕೂಲಗಳು ಮತ್ತು ಅನಾನುಕೂಲಗಳು ಇರುತ್ತವೆ. ಅಲ್ಲಿನ ನೈಸರ್ಗಿಕ ಸಂಪತ್ತಿನ ಒಡೆತನ ಮತ್ತು ಅದರ ಮೊದಲ ಬಳಕೆಯ ಹಕ್ಕು ಆಯಾ ಪ್ರದೇಶದ ಜನಸಮುದಾಯದ್ದಾಗಿರುತ್ತದೆ. ಭೂಮಿಯ ಮೇಲಿನ ಖನಿಜ ಸಂಪತ್ತು, ಭೂಮಿಯ ಮೇಲಿನ ಅರಣ್ಯ ಉತ್ಪನ್ನಗಳು ಹೇಗೆ ಆಯಾ ಸರ್ಕಾರದ ಆಸ್ತಿಯೋ ಹಾಗೆಯೇ ಆ ಪ್ರದೇಶದಲ್ಲಿ ಸುರಿಯುವಮಳೆ ಹಾಗೂ ಹರಿಯುವ ನೀರಿಗೂ ಆ ಪ್ರದೇಶದ ಜೀವ ವೈವಿಧ್ಯವೇ ಪ್ರಥಮ ಹಕ್ಕುದಾರ ಆಗಿರುತ್ತಾನೆ. ಹಾಗಾಗಿ ಕಾವೇರಿ ನೀರಿನ ಮೊದಲ ಹಕ್ಕು ನಿರ್ವಿವಾದವಾಗಿ ಕರ್ನಾಟಕದ್ದೇ ಆಗಿರುತ್ತದೆ. ನಮ್ಮ ಅಗತ್ಯತೆಯನ್ನು ಪೂರೈಸಿದ ನಂತರವಷ್ಟೇ ಇತರರಿಗೆ ನೆರವಾಗುವ ಪ್ರಶ್ನೆ ಉದ್ಭವಿಸುತ್ತದೆ’ ಎಂದು ಕೆಪಿ ಪೂರ್ಣಚಂದ್ರ ತೇಜಸ್ವಿ ಹೇಳಿದ ಮಾತನ್ನು ಉಪೇಂದ್ರ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಶುಕ್ರವಾರದ ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಚಿತ್ರರಂಗ

ಈ ಮಾತು ಅರ್ಥಪೂರ್ಣವಾದುದ್ದು ಎಂದು ಅನೇಕರು ಹೇಳಿದ್ದಾರೆ. ಅವರ ಮಾತನ್ನು ಬೆಂಬಲಿಸಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ. ಇತ್ತೀಚೆಗೆ ಉಪೇಂದ್ರ ಅವರು ಜನ್ಮದಿನ ಆಚರಿಸಿಕೊಂಡರು. ಈ ವೇಳೆ ಅವರ ನಿರ್ದೇಶನದ ‘ಯುಐ’ ಚಿತ್ರದ ಟೀಸರ್ ಲಾಂಚ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ