ಕಾಯಕವೇ ಕೈಲಾಸ; ವೀಕೆಂಡ್​ನಲ್ಲಿ ರೈತನಾದ ನಟ ಉಪೇಂದ್ರ

ಗುದ್ದಲಿ ಹಿಡಿದು ಉಪೇಂದ್ರ ಕೃಷಿ ಮಾಡುತ್ತಿದ್ದಾರೆ. ನೆಟ್ಟ ತೆಂಗಿನ ಗಿಡಕ್ಕೆ ಮಣ್ಣು ಹಾಕುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಾಯಕವೇ ಕೈಲಾಸ; ವೀಕೆಂಡ್​ನಲ್ಲಿ ರೈತನಾದ ನಟ ಉಪೇಂದ್ರ
ಕೃಷಿ ಕೆಲಸದಲ್ಲಿ ಬ್ಯುಸಿಯಾಗಿರುವ ಉಪೇಂದ್ರ

Updated on: Apr 25, 2021 | 7:17 PM

ನಟ ಉಪೇಂದ್ರ ಸಿನಿಮಾ ಜತೆಗೆ ರಾಜಕೀಯದಲ್ಲೂ ಗುರುತಿಸಿಕೊಂಡವರು. ಪ್ರಜಾಕೀಯ ಪಕ್ಷ ಸ್ಥಾಪಿಸಿರುವ ಉಪೇಂದ್ರ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕುತ್ತಿದ್ದಾರೆ. ಇದರ ಜತೆಗೆ ಉಪೇಂದ್ರ ಕೃಷಿ ಕೆಲಸದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗ ವೀಕೆಂಡ್​ ಕರ್ಫ್ಯೂ ವೇಳೆ ಅವರು ಕೃಷಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ದೇಶದಲ್ಲಿ ಮಿತಿ ಮೀರಿ ಹರಡುತ್ತಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ವರದಿ ಆಗುತ್ತಿವೆ. ಹೀಗಾಗಿ, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹರಸಾಹಸಪಡುತ್ತಿದೆ. ಶನಿವಾರ ಭಾನುವಾರ ಕರ್ಫ್ಯೂ ಹೇರಿದೆ. ಈ ಅವಧಿಯಲ್ಲಿ ಮನೆಯಲ್ಲೇ ಇದ್ದ ಉಪೇಂದ್ರ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.

ಗುದ್ದಲಿ ಹಿಡಿದು ಉಪೇಂದ್ರ ಕೃಷಿ ಮಾಡುತ್ತಿದ್ದಾರೆ. ನೆಟ್ಟ ತೆಂಗಿನ ಗಿಡಕ್ಕೆ ಮಣ್ಣು ಹಾಕುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕಾಯಕವೇ ಕೈಲಾಸ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಉಪೇಂದ್ರ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕಬ್ಜಾ, ಬುದ್ಧಿವಂತ-2 ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗಾಗಲೇ ಕಬ್ಜಾ ಚಿತ್ರದ ಫಸ್ಟ್​ ಪೋಸ್ಟರ್​ ರಿಲೀಸ್​ ಆಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇನ್ನು, ತೆಲುಗಿನ ಘನಿ ಸಿನಿಮಾದಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಕ್ಸರ್​ ಆಗಿ ಉಪೇಂದ್ರ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಬಾಕ್ಸಿಂಗ್​ ಫೋಟೋ ಕೂಡ ಹಂಚಿಕೊಂಡಿದ್ದರು.

ಇದನ್ನೂ ಓದಿ: ತೆಲುಗು ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಜತೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಉಪೇಂದ್ರ?

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Published On - 7:13 pm, Sun, 25 April 21