AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಶುರುವಾಯ್ತು ಉಪೇಂದ್ರ ಹೊಸ ಸಿನಿಮಾ, ಹೆಸರೇನು?

Upendra: ಉಪೇಂದ್ರ ಇತ್ತೀಚೆಗೆ ಪರ ಭಾಷೆಯ ಸಿನಿಮಾಗಳಲ್ಲಿ ಹೆಚ್ಚು ಬ್ಯುಸಿ ಆಗಿಬಿಟ್ಟಿದ್ದಾರೆ. ಉಪೇಂದ್ರ ಅವರ ಕನ್ನಡ ಸಿನಿಮಾಗಳ ಸುದ್ದಿ ಇತ್ತೀಚೆಗೆ ಕೇಳಿದ್ದೇ ಇಲ್ಲ. ಇದೀಗ ಉಪೇಂದ್ರ ನಟನೆಯ ಹೊಸ ಸಿನಿಮಾ ಒಂದು ಸದ್ದಿಲ್ಲದೆ ಮುಹೂರ್ತ ಮುಗಿಸಿಕೊಂಡಿದೆ. ಉಪೇಂದ್ರ ಅವರು ತಮ್ಮ ಲಕ್ಕಿ ನಿರ್ದೇಶಕನ ಜೊತೆಗೆ ಹೊಸ ಸಿನಿಮಾಕ್ಕಾಗಿ ಕೈ ಜೋಡಿಸಿದ್ದಾರೆ. ಯಾರು ಆ ನಿರ್ದೇಶಕ, ಸಿನಿಮಾ ಹೆಸರೇನು?

ಸದ್ದಿಲ್ಲದೆ ಶುರುವಾಯ್ತು ಉಪೇಂದ್ರ ಹೊಸ ಸಿನಿಮಾ, ಹೆಸರೇನು?
Upendra
ಮಂಜುನಾಥ ಸಿ.
|

Updated on:Jun 07, 2025 | 5:53 PM

Share

ನಟ ಉಪೇಂದ್ರ (Upendra) ಇತ್ತೀಚೆಗೆ ತಮ್ಮ ಪರಭಾಷೆ ಸಿನಿಮಾಗಳಿಂದಲೇ ಹೆಚ್ಚಾಗಿ ಸುದ್ದಿಯಲ್ಲಿದ್ದಾರೆ. ಉಪೇಂದ್ರ ಅವರ ಹೊಸ ಕನ್ನಡ ಸಿನಿಮಾ ಇತ್ತೀಚೆಗೆ ಸುದ್ದಿ ಆಗಿದ್ದು ಕಡಿಮೆ. ಉಪೇಂದ್ರ ನಟನೆಯ ‘45’ ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿದೆ. ತೆಲುಗಿನಲ್ಲಿ ಒಂದು ಹಾಗೂ ತಮಿಳಿನಲ್ಲಿ ಒಂದು ಭಾರಿ ಬಜೆಟ್ ಸಿನಿಮಾಗಳಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಇದೆಲ್ಲದರ ನಡುವೆ ಇದೀಗ ಉಪ್ಪಿ ನಟನೆಯ ಹೊಸ ಕನ್ನಡ ಸಿನಿಮಾ ಸದ್ದಿಲ್ಲದೆ ಸೆಟ್ಟೇರಿದೆ.

ಉಪೇಂದ್ರ ನಟನೆಯ ನಾಲ್ಕು ಸಿನಿಮಾಗಳನ್ನು ಈ ವರೆಗೆ ನಿರ್ದೇಶನ ಮಾಡಿರುವ ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶಿಸುತ್ತಿರುವ ‘ಭಾರ್ಗವ’ ಹೆಸರಿನ ಸಿನಿಮಾನಲ್ಲಿ ಉಪ್ಪಿ ನಟಿಸುತ್ತಿದ್ದಾರೆ. ‘ದಿ ವೈಲೆಂಟ್ ಫ್ಯಾಮಿಲಿ ಮ್ಯಾನ್’ ಎಂಬುದು ಸಿನಿಮಾದ ಟೈಟಲ್​ನ ಅಡಿಬರಹ. ಇದೊಂದು ಪಕ್ಕಾ ಮಾಸ್ ಸಿನಿಮಾ ಆಗಿದ್ದು, ಮಾಸ್ ಅಂಶದ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್ ಸಹ ಇರಲಿದೆ.

ಹಲಸೂರಿನ ಸೋಮನಾಥೇಶ್ವರ ದೇವಾಲಯದಲ್ಲಿ ಸರಳವಾಗಿ ಸಿನಿಮಾದ ಮುಹೂರ್ತ ಮಾಡಲಾಗಿದೆ. ಸಿನಿಮಾದ ಚಿತ್ರೀಕರಣ ಇದೇ ತಿಂಗಳು 23ನೇ ತಾರೀಖಿನಿಂದ ಪ್ರಾರಂಭ ಆಗುತ್ತಿದೆ. ಸಿನಿಮಾಕ್ಕಾಗಿ ಕಂಠೀರವ ಸ್ಟುಡಿಯೋನಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತಿದೆ. ಸೆಟ್​ನ ಜೊತೆಗೆ ಹೊರಾಂಗಣ ಚಿತ್ರೀಕರಣವೂ ಇರಲಿದ್ದು, ಮಂಗಳೂರು ಮತ್ತು ರಾಜ್ಯದ ಇನ್ನೂ ಕೆಲವೆಡೆ ಸಿನಿಮಾದ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ:ಆಂಧ್ರ ಕಿಂಗ್ ಆಗಿದ್ದಾರೆ ಉಪೇಂದ್ರ, ಚಿತ್ರೀಕರಣ ಶುರು, ಆದರೆ…

ಕಿರುತೆರೆ ನಟಿಯಾಗಿ ಹೆಸರು ಮಾಡಿರುವ ಅಂಕಿತಾ ಅಮರ್, ಈ ಸಿನಿಮಾನಲ್ಲಿ ಉಪೇಂದ್ರ ಜೊತೆ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಅವಿನಾಶ್ ಅವರುಗಳು ಸಹ ಸಿನಿಮಾನಲ್ಲಿದ್ದಾರೆ. ‘ವಿಷ್ಣುವರ್ಧನ’, ‘ಕೋಟಿಗೊಬ್ಬ 2’ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳಿಗೆ ಕೆಲಸ ಮಾಡಿರುವ ರಾಜರತ್ನಂ ಅವರು ಕ್ಯಾಮೆರಾ ಕೆಲಸ ನಿರ್ವಹಿಸಲಿದ್ದಾರೆ. ಅರ್ಜುನ್ ಜನ್ಯ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.

ಉಪ್ಪಿ ನಟನೆಯ ‘ಗೋಕರ್ಣ’, ‘ಗೌರಮ್ಮ’, ‘ಕುಟುಂಬ’, ‘ದುಬೈ ಬಾಬು’ ಸಿನಿಮಾಗಳನ್ನು ನಾಗಣ್ಣ ನಿರ್ದೇಶನ ಮಾಡಿದ್ದರು. ಈಗ ‘ಭಾರ್ಗವ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಉಪ್ಪಿ-ನಾಗಣ್ಣ ಕಾಂಬಿನೇಷನ್​ನ ಈ ಹಿಂದಿನ ಸಿನಿಮಾಗಳು ರೀಮೇಕ್ ಸಿನಿಮಾಗಳಾಗಿದ್ದವು. ಆದರೆ ‘ಭಾರ್ಗವ’ ಸ್ವಮೇಕ್ ಸಿನಿಮಾ ಆಗಿರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Sat, 7 June 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ