Upendra: ‘ಬುದ್ಧಿವಂತ 2’ ರಿಲೀಸ್​ ದಿನಾಂಕ ಘೋಷಿಸಿದ ಚಿತ್ರತಂಡ; ಸೆಪ್ಟೆಂಬರ್​ 15ಕ್ಕೆ ಬಹುನಿರೀಕ್ಷಿತ ಚಿತ್ರದ ಬಿಡುಗಡೆ

Buddhivantha 2: ಸೆಪ್ಟೆಂಬರ್ 18ರಂದು ಉಪೇಂದ್ರ ಅವರ ಹುಟ್ಟುಹಬ್ಬ ಇದೆ. ಅದಕ್ಕೂ ಮೂರು ದಿನ ಮುಂಚೆ ‘ಬುದ್ಧಿವಂತ 2’ ಸಿನಿಮಾ ರಿಲೀಸ್​ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ಮೂಡಿಸಿದೆ.

Upendra: ‘ಬುದ್ಧಿವಂತ 2’ ರಿಲೀಸ್​ ದಿನಾಂಕ ಘೋಷಿಸಿದ ಚಿತ್ರತಂಡ; ಸೆಪ್ಟೆಂಬರ್​ 15ಕ್ಕೆ ಬಹುನಿರೀಕ್ಷಿತ ಚಿತ್ರದ ಬಿಡುಗಡೆ
ಉಪೇಂದ್ರ
Follow us
ಮದನ್​ ಕುಮಾರ್​
|

Updated on: Jul 25, 2023 | 10:46 AM

‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರು ಒಂದಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಜಾಕೀಯದ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅವರು ಸಿನಿಮಾಗಳ ಕಡೆಗೂ ಗಮನ ಹರಿಸಿದ್ದಾರೆ. ‘ಕಬ್ಜ’ ಬಳಿಕ ಉಪೇಂದ್ರ ಅವರನ್ನು ಮತ್ತೆ ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಅಂಥವರಿಗೆಲ್ಲ ಗುಡ್​ ನ್ಯೂಸ್​ ಸಿಕ್ಕಿದೆ. ಉಪೇಂದ್ರ ನಟಿಸಿರುವ ‘ಬುದ್ಧಿವಂತ 2’ (Buddhivantha 2) ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ. ಸೆಪ್ಟೆಂಬರ್​ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪೋಸ್ಟರ್​ಗಳ ಮೂಲಕ ಗಮನ ಸೆಳೆದಿರುವ ‘ಬುದ್ಧಿವಂತ 2’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಉಪೇಂದ್ರ ಅವರಿಗೆ ಜೋಡಿಯಾಗಿ ಸೋನಾಲ್ ಮಾಂಥರೋ ಮತ್ತು ಮೇಘನಾ ರಾಜ್ (Meghana Raj) ನಟಿಸಿದ್ದಾರೆ.

‘ಬುದ್ಧಿವಂತ 2’ ಸಿನಿಮಾ ಬಹಳ ಹಿಂದೆಯೇ ಅನೌನ್ಸ್​ ಆಗಿತ್ತು. ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ವಿಳಂಬ ಆಗಿತ್ತು. ಈ ಸಿನಿಮಾವನ್ನು ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ‘ರಿಲೀಸ್​ ಯಾವಾಗ’ ಎಂದು ಕೇಳುತ್ತಲೇ ಇದ್ದರು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿರುವುದರಿಂದ ಫ್ಯಾನ್ಸ್​ ಖುಷಿಯಾಗಿದ್ದಾರೆ. ಸೆಪ್ಟೆಂಬರ್​ 15ರಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಅಭಿಮಾನಿಗಳಿಗೆ ಡಬಲ್​ ಖುಷಿ ಆಗಿದೆ. ಯಾಕೆಂದರೆ, ಸಿನಿಮಾ ಬಿಡುಗಡೆ ಬೆನ್ನಲ್ಲೇ ಉಪ್ಪಿ ಜನ್ಮದಿನ ಬರಲಿದೆ.

ಇದನ್ನೂ ಓದಿ: ಉಪೇಂದ್ರ ಬಳಿಕ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಕೈ ಹಾಕಿದ ಅಣ್ಣನ ಮಗ ನಿರಂಜನ್

ಗ್ಲಿಂಪ್ಸ್​ ಬಿಡುಗಡೆ ಮಾಡುವ ಮೂಲಕ ‘ಬುದ್ಧಿವಂತ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ತಿಳಿಸಲಾಗಿದೆ. ಸ್ಯಾಂಡಲ್​ವುಡ್​ನಲ್ಲಿ ಉಪೇಂದ್ರ ಅವರು ‘ಬುದ್ಧಿವಂತ’ ಎಂದೇ ಫೇಮಸ್​ ಆಗಿದ್ದಾರೆ. ಸೆಪ್ಟೆಂಬರ್ 18ರಂದು ಅವರ ಹುಟ್ಟುಹಬ್ಬ ಇದೆ. ಪ್ರತಿ ವರ್ಷ ಈ ದಿನವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಉಪ್ಪಿ ಬರ್ತ್​ಡೇ ಬಹಳ ವಿಶೇಷವಾಗಿ ಆಗಲಿದೆ. ‘ಬುದ್ಧಿವಂತ 2’ ಸಿನಿಮಾದ ಜೊತೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಸೆಲೆಬ್ರೇಟ್​ ಮಾಡಲಿದ್ದಾರೆ.

ಇದನ್ನೂ ಓದಿ: Upendra New House: ಉಪೇಂದ್ರ-ಪ್ರಿಯಾಂಕಾ ದಂಪತಿಯ ಹೊಸ ಮನೆ ಹೇಗಿದೆ? ಇಲ್ಲಿದೆ ನೋಡಿ ಫೋಟೋ ಗ್ಯಾಲರಿ

ಜೈದೇವ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗುರುಕಿರಣ್ ಅವರು ಸಂಗೀತ ನೀಡಿದ್ದು, ಎಸ್. ನವೀನ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನ ಮಾಡಿದ್ದಾರೆ. ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ಡಾ. ಟಿ.ಆರ್. ಚಂದ್ರಶೇಖರ್ ಅವರು ‘ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್​ ಮೂಲಕ ‘ಬುದ್ಧಿವಂತ 2’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ಒಂದು ವಿಶೇಷವಾದ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ