Budhivanta 2: ‘ಬುದ್ಧಿವಂತ 2’ ಚಿತ್ರದ ಮೂಲಕ ಬರಲಿದ್ದಾರೆ ಉಪೇಂದ್ರ; ಭಿನ್ನ ಗೆಟಪ್​ನಲ್ಲಿ ರಿಯಲ್ ಸ್ಟಾರ್ ಎಂಟ್ರಿ

‘ಬುದ್ಧಿವಂತ 2’ ಚಿತ್ರ ಈ ಮೊದಲು ಅನೌನ್ಸ್ ಆಗಿತ್ತು. ಈಗ ಸಿನಿಮಾ ಯಾವ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನು ತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ.

Budhivanta 2: ‘ಬುದ್ಧಿವಂತ 2’ ಚಿತ್ರದ ಮೂಲಕ ಬರಲಿದ್ದಾರೆ ಉಪೇಂದ್ರ; ಭಿನ್ನ ಗೆಟಪ್​ನಲ್ಲಿ ರಿಯಲ್ ಸ್ಟಾರ್ ಎಂಟ್ರಿ
ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:22 PM

ನಟ ಉಪೇಂದ್ರ (Upendra) ಅವರು ಕನ್ನಡ ಚಿತ್ರರಂಗಕ್ಕೆ ಹಲವು ಭಿನ್ನ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಭಿನ್ನ ಗೆಟಪ್​ನಲ್ಲಿ ಬರುತ್ತಾರೆ. ಈಗ ಉಪೇಂದ್ರ ನಟನೆಯ ‘ಬುದ್ಧಿವಂತ 2’ (Budhivanta 2) ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಉಪೇಂದ್ರ ಅವರ ಲುಕ್ ಇದರಲ್ಲಿ ಗಮನ ಸೆಳೆದಿದೆ. ಈ ಸಿನಿಮಾ ಇದೇ ವರ್ಷ ಸೆಪ್ಟೆಂಬರ್​ನಲ್ಲಿ ರಿಲೀಸ್ ಆಗಲಿದೆ ಎಂದು ತಂಡ ತಿಳಿಸಿದೆ. ಈ ವಿಚಾರ ತಿಳಿದು ಉಪ್ಪಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

2008ರಲ್ಲಿ ‘ಬುದ್ಧಿವಂತ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ಹಲವು ಗೆಟಪ್​ಗಳಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದರು. ಪ್ರೇಕ್ಷಕರಿಗೆ ಈ ಚಿತ್ರ ಹೆಚ್ಚು ಇಷ್ಟ ಆಗಿತ್ತು. ಹಿಟ್ ಸಿನಿಮಾಗಳಿಗೆ ಸೀಕ್ವೆಲ್ ಮಾಡೋದು ಸಹಜ. ಅದೇ ರೀತಿ ‘ಬುದ್ಧಿವಂತ 2’ ಚಿತ್ರ ಈ ಮೊದಲು ಅನೌನ್ಸ್ ಆಗಿತ್ತು. ಈಗ ಸಿನಿಮಾ ಯಾವ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನು ತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ.

ಉಪೇಂದ್ರ ಅವರು ಮುಖಕ್ಕೆ ಶೀಲ್ಡ್ ಧರಿಸಿದ್ದಾರೆ. ಅವರ ಕಣ್ಣುಗಳು ಭಯದಿಂದ ಕೂಡಿದೆ. ಕೂದಲು ಕೆದರಿಕೊಂಡಿದೆ. ‘ಬುದ್ಧಿವಂತ 2’ ಟೈಟಲ್ ಬಳಿ ಬೆಂಕಿ ಇದೆ. ಈ ಕಾರಣಕ್ಕೆ ಈ ಶೀರ್ಷಿಕೆ ಹೆಚ್ಚು ಗಮನ ಸೆಳೆಯುತ್ತಿದೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾ ಥಿಯೇಟರ್​ಗೆ ಬರಲಿದೆ ಎಂದು ತಂಡ ಹೇಳಿಕೊಂಡಿದೆ.

ಟಿಆರ್ ಚಂದ್ರಶೇಖರ್ ಅವರು ‘ಬುದ್ಧಿವಂತ 2’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜಯರಾಮ್ ಮಾಧವನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್, ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ ಇತ್ತೀಚೆಗೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿರುವ ಬಗ್ಗೆ ಚಿತ್ರತಂಡ ಹೇಳಿಕೊಂಡಿದೆ. ‘ಯುಐ’ ಚಿತ್ರದಲ್ಲೂ ಉಪೇಂದ್ರ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 1 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ