ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಟೀಸರ್ (Kabzaa Movie Teaser) ರಿಲೀಸ್ ಆಗಿದೆ. ಈ ಟೀಸರ್ ನೋಡಲು ಅಭಿಮಾನಿಗಳು ಬಹುದಿನಗಳಿಂದ ಕಾದಿದ್ದರು. ಬೆಂಗಳೂರಿನ ಓರಾಯನ್ ಮಾಲ್ನಲ್ಲಿ ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಲಾಗಿದೆ. ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಬಾಟಿ (Rana Daggubati) ಅವರು ಅವರು ಮುಖ್ಯ ಅತಿಥಿಯಾಗಿ ಬಂದು ಟೀಸರ್ ಬಿಡುಗಡೆ ಮಾಡಿದ್ದಾರೆ. ನಾಳೆ (ಸೆ.18) ನಟ ಉಪೇಂದ್ರ (Upendra) ಅವರ ಜನ್ಮದಿನ. ಆ ಪ್ರಯುಕ್ತ ಇಂದು ಸಂಜೆ ಟೀಸರ್ ಹೊರಬಂದಿದೆ. ಈ ಸಿನಿಮಾಗೆ ಆರ್. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ ಜತೆ ಕಿಚ್ಚ ಸುದೀಪ್ ಕೂಡ ನಟಿಸುತ್ತಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್ ನಟಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಟೀಸರ್ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ಈಗಿನದ್ದು ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನಾ. ‘ಕಬ್ಜ’ ಚಿತ್ರದ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ, ತಮಿಳು ಹಾಗೂ ಹಿಂದಿ ವರ್ಷನ್ನ ಟೀಸರ್ ರಿಲೀಸ್ ಮಾಡಲಾಗಿದೆ. ಇನ್ನೂ ಹಲವು ಭಾಷೆಗಳಲ್ಲಿ ಚಿತ್ರ ಮೂಡಿಬರಲಿದೆ. ಬೃಹತ್ ಸೆಟ್ಗಳನ್ನು ನಿರ್ಮಿಸಿ ಶೂಟಿಂಗ್ ಮಾಡಲಾಗಿದೆ.
ಇಡೀ ಸಿನಿಮಾ ಸಖತ್ ಅದ್ದೂರಿಯಾಗಿ ನಿರ್ಮಾಣ ಆಗಿದೆ ಎಂಬುದಕ್ಕೆ ಈ ಟೀಸರ್ನಲ್ಲಿ ಸಾಕ್ಷಿ ಸಿಕ್ಕಿದೆ. ಕಿಚ್ಚ ಸುದೀಪ್ ಅವರ ಗೆಟಪ್ ಕೂಡ ಇದರಲ್ಲಿ ರಿವೀಲ್ ಆಗಿದೆ. ಟೀಸರ್ನ ಪ್ರತಿ ಫೇಮ್ನಲ್ಲೂ ಶ್ರೀಮಂತಿಕೆ ಕಾಣುತ್ತಿದೆ. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ. ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣಕ್ಕೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ.
ಟೀಸರ್ ನೋಡಿ ರಾಣಾ ದಗ್ಗುಬಾಟಿ ಭೇಷ್ ಎಂದಿದ್ದಾರೆ. ‘ಈ ಟೀಸರ್ ರಿಲೀಸ್ ಮಾಡಿದ್ದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ಈ ರೀತಿ ದಕ್ಷಿಣ ಭಾರತದ ಸಿನಿಮಾಗಳ ಶಕ್ತಿ ಇಡೀ ಪ್ರಪಂಚಕ್ಕೆ ತಿಳಿಯಬೇಕು. ಕಬ್ಜ ಚಿತ್ರತಂಡಕ್ಕೆ ಶುಭವಾಗಲಿ. ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ರೀತಿಯ ಕಲಾವಿದರು ಇರುವುದು ಈ ಚಿತ್ರದ ಬಲ. ನಿರ್ದೇಶಕ ಚಂದ್ರು ಎಲ್ಲರ ಪಾತ್ರವನ್ನು ತೋರಿಸಿದ ರೀತಿ ನನ್ನ ಗಮನ ಸೆಳೆಯಿತು. ಹಿನ್ನೆಲೆ ಸಂಗೀತ ನನ್ನ ಕಿವಿಯಲ್ಲಿ ಗುನುಗುಟ್ಟುತ್ತಿದೆ’ ಎಂದು ರಾಣಾ ದಗ್ಗುಬಾಟಿ ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:17 pm, Sat, 17 September 22