Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪೇಂದ್ರ ಅಭಿಮಾನಿಗಳಿಗೆ ‘ಕಬ್ಜಾ’ ಕಡೆಯಿಂದ ಸಿಗುತ್ತಿದೆ ವಿಶೇಷ ಗಿಫ್ಟ್​; ಏನದು?

ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಮುಕುಂದ ಮುರಾರಿ ಚಿತ್ರದ ನಂತರ ಈ ಜೋಡಿ ‘ಕಬ್ಜ’ ಚಿತ್ರದಲ್ಲಿ ಒಂದಾಗಿದೆ.

ಸುದೀಪ್​, ಉಪೇಂದ್ರ ಅಭಿಮಾನಿಗಳಿಗೆ ‘ಕಬ್ಜಾ’ ಕಡೆಯಿಂದ ಸಿಗುತ್ತಿದೆ ವಿಶೇಷ ಗಿಫ್ಟ್​; ಏನದು?
ಸುದೀಪ್​, ಉಪೇಂದ್ರ ಅಭಿಮಾನಿಗಳಿಗೆ ಭಾನುವಾರ ಮುಂಜಾನೆ ಸಿಗುತ್ತಿದೆ ವಿಶೇಷ ಗಿಫ್ಟ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 26, 2021 | 10:17 PM

ರಿಲೀಸ್​​ಗೂ ಮೊದಲೇ ಉಪೇಂದ್ರ ಹಾಗೂ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ವಿನೂತನ ಹಾಲಿವುಡ್ ಶೈಲಿಯ ಪೋಸ್ಟರ್ ನಾಳೆ ಮುಂಜಾನೆ 6 ಗಂಟೆಗೆ ಬಿಡುಗಡೆಯಾಗಲಿದೆ. ಈ ಪೋಸ್ಟರ್​ನಿಂದ ಅಭಿಮಾನಿಗಳಿಗೆ ರಸದೌತಣ ಸಿಗುವ ಎಲ್ಲಾ ಲಕ್ಷಣ ಗೋಚರವಾಗಿದೆ.

ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ‘ಮುಕುಂದ ಮುರಾರಿ’ ಚಿತ್ರದ ನಂತರ ಈ ಜೋಡಿ ‘ಕಬ್ಜ’ ಚಿತ್ರದಲ್ಲಿ ಒಂದಾಗಿದೆ. ಖ್ಯಾತ ನಿರ್ದೇಶಕ ಆರ್. ಚಂದ್ರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಸಿನಿಮಾ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕೆನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರಿದ್ದಾರೆ.

ಇದನ್ನೂ ಓದಿ: ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ; ಒಂದು ವರ್ಷಕ್ಕೆ ಆಗುವ ಖರ್ಚು ಎಷ್ಟು?

Published On - 10:05 pm, Sat, 26 June 21

Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ