AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಬೇಟೆ: ‘ಮಲೆನಾಡ ಗೊಂಬೆಗೆ’ ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ

Kere Bete: ‘ಕೆರೆ ಬೇಟೆ’ ಸಿನಿಮಾ ತಮ್ಮ ಪೋಸ್ಟರ್, ಟೀಸರ್​ಗಳಿಂದ ಸಖತ್ ಗಮನ ಸೆಳೆದಿದೆ. ಇದೀಗ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು ಹಾಡು ನೋಡಿದ ಉಪೇಂದ್ರ ಭೇಷ್ ಎಂದಿದ್ದಾರೆ.

ಕೆರೆ ಬೇಟೆ: 'ಮಲೆನಾಡ ಗೊಂಬೆಗೆ' ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ
ಮಂಜುನಾಥ ಸಿ.
|

Updated on: Feb 03, 2024 | 10:52 PM

Share

‘ಕೆರೆಬೇಟೆ’ ಸ್ಯಾಂಡಲ್ ವುಡ್​ನಲ್ಲಿ (Sandalwood) ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಿದ್ದ ಸಿನಿಮಾ ತಂಡ ಇದೀಗ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ವಿಶೇಷ ಅಂದರೆ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ರಿಲೀಸ್ ಮಾಡಿದ್ದಾರೆ. ‘ಮಲೆನಾಡ ಬೊಂಬೆ’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಹಾಡು ನೋಡಿ ರಿಯಲ್ ಸ್ಟಾರ್ ಉಪೇಂದ್ರ ಕೂಡ ಫಿದಾ ಆಗಿದ್ದಾರೆ. ಮಲೆನಾಡಿನ ಸುತ್ತಮುತ್ತವೇ ಈ ಹಾಡಿನ ಚಿತ್ರೀಕರಣ ಮಾಡಿರುವುದು ವಿಶೇಷ.

‘ಕೆರೆಬೇಟೆ’ ನಿರ್ದೇಶಕ ರಾಜ್ ಗುರು ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ನಾಯಕ ಗೌರಿಶಂಕರ್ ಮತ್ತು ನಾಯಕಿ ಬಿಂಧು ಶಿವರಾಮ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ರೋಮ್ಯಾಂಟಿಕ್ ಹಾಡು ಇದಾಗಿದೆ. ಅಂದಹಾಗೆ ಈ ಸುಂದರ ಹಾಡಿಗೆ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೇ…’ ಹಾಡಿನ ಖ್ಯಾತಿಯ ಪ್ರಮೋದ್ ಮರುವಂತೆ ಸಾಹಿತ್ಯ ರಚಿಸಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಸಾಯಿ ವಿಘ್ನೇಶ್ ಮತ್ತು ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.

ಇದನ್ನೂ ಓದಿ:ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣ ಗಣರಾಜ್ಯೋತ್ಸವ, ಉಪೇಂದ್ರ ವಿಶೇಷ ಅತಿಥಿ

ಈ ಹಾಡಿನ ಚಿತ್ರೀಕರಣದ ಅನುಭವ ತೆರೆದಿಟ್ಟ ಸಿನಿಮಾ ತಂಡ. ‘ಈ ಹಾಡನ್ನು ತುಂಬಾ ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಅತಿಯಾದ ಮಳೆಯಿಂದ ಅನೇಕ ಬಾರಿ ಚಿತ್ರಿಕರಣ ನಿಲ್ಲಿಸಲಾಗಿತ್ತು. ಮನುಷ್ಯರೇ ಓಡಾಡದೇ ಇರುವ ಜಾಗದಲ್ಲಿ ಶೂಟಿಂಗ್ ಮಾಡಿದ್ದೇವೆ. ಪ್ರಾಣಿಗಳ ಭಯ ಕೂಡ ಇತ್ತು. ಮಲೆನಾಡಿನ ತುಂಬಾ ರಿಮೋಟ್ ಏರಿಯಾದಲ್ಲಿ ನಾಲ್ಕು ದಿನಗಳ ಕಾಲ ಈ ಹಾಡನ್ನು ಸೆರೆಹಿಡಿದಿದ್ದೇವೆ. ಈ ಹಾಡಿಗಾಗಿ ಹರಸಾಹಸ ಪಟ್ಟಿದ್ದೇವೆ’ ಎನ್ನುತ್ತಾರೆ.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಇದೀಗ ಹಾಡಿನ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮುಂದಿನ ತಿಂಗಳು ಅಂದರೆ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೀಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?