AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ಉಪೇಂದ್ರ ನಿರ್ದೇಶನದ ಚಿತ್ರದಲ್ಲಿ ನೀವೂ ನಟಿಸಬಹುದು; ‘ರಿಯಲ್​ ಸ್ಟಾರ್​’ ನೀಡಿದ ಸೂಪರ್​ ಅವಕಾಶ

ಹಲವು ವರ್ಷಗಳ ಗ್ಯಾಪ್​ ಬಳಿಕ ಉಪೇಂದ್ರ ಮತ್ತೆ ನಿರ್ದೇಶಕನ ಕ್ಯಾಪ್​ ಧರಿಸುತ್ತಿದ್ದಾರೆ. ಆ ಚಿತ್ರದಲ್ಲಿ ನಟಿಸಲು ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡುತ್ತಿದ್ದಾರೆ.

Upendra: ಉಪೇಂದ್ರ ನಿರ್ದೇಶನದ ಚಿತ್ರದಲ್ಲಿ ನೀವೂ ನಟಿಸಬಹುದು; ‘ರಿಯಲ್​ ಸ್ಟಾರ್​’ ನೀಡಿದ ಸೂಪರ್​ ಅವಕಾಶ
ಉಪೇಂದ್ರ
TV9 Web
| Edited By: |

Updated on:Feb 09, 2022 | 1:12 PM

Share

‘ರಿಯಲ್​ ಸ್ಟಾರ್​’ ಉಪೇಂದ್ರ (Real Star Upendra) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ನಟನಾಗಿ, ನಿರ್ದೇಶಕನಾಗಿ ಅವರು ಮಾಡಿದ ಮೋಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ನಟನೆಗಿಂತಲೂ ನಿರ್ದೇಶನವೇ ಜನರಿಗೆ ಹೆಚ್ಚು ಇಷ್ಟ ಎಂದರೆ ತಪ್ಪಿಲ್ಲ. ‘ಶ್​’, ‘ಓಂ’, ‘ಎ’, ‘ಉಪೇಂದ್ರ’ ಮುಂತಾದ ಸೂಪರ್​ ಹಿಟ್ (Upendra Direction Movies)​ ಸಿನಿಮಾಗಳನ್ನು ನೀಡಿದ ಖ್ಯಾತ ಉಪ್ಪಿಗೆ ಸಲ್ಲುತ್ತದೆ. ಅವರ ಸಿನಿಮಾದಲ್ಲಿ ಒಮ್ಮೆಯಾದರೂ ನಟಿಸಬೇಕು ಎಂಬ ಆಸೆ ಎಲ್ಲ ಕಲಾವಿದರಿಗೂ ಇರುತ್ತದೆ. ಅಂಥವರ ಆಸೆ ಈಡೇರುವ ಕಾಲ ಈಗ ಬಂದಿದೆ. ಎಲ್ಲರಿಗೂ ಉಪೇಂದ್ರ ಒಂದು ಬಂಪರ್​ ಚಾನ್ಸ್​ ನೀಡುತ್ತಿದ್ದಾರೆ. ತಾವು ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸಲು ಹೊಸ ಕಲಾವಿದರಿಗೆ ಉಪ್ಪಿ ಅವಕಾಶ (Upendra Audition) ನೀಡುತ್ತಿದ್ದಾರೆ. ಆ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಈ ನ್ಯೂಸ್​ ಕೇಳಿ ಆಸಕ್ತರು​ ಥ್ರಿಲ್​ ಆಗಿದ್ದಾರೆ. ಉಪೇಂದ್ರ ನಿರ್ದೇಶನದ ಸಿನಿಮಾದಲ್ಲಿ ನಟನೆಯ ಚಾನ್ಸ್​ ಪಡೆಯಲು ಏನು ಮಾಡಬೇಕು? ಎಷ್ಟು ದಿನದೊಳಗೆ ಪ್ರಯತ್ನಿಸಬೇಕು? ವಯಸ್ಸಿನ ಮಿತಿ ಏನು? ಈ ಎಲ್ಲ ಪ್ರಶ್ನೆಗಳಿಗೂ ಇಲ್ಲಿದೆ ಉತ್ತರ..

ಹಲವು ವರ್ಷಗಳ ಗ್ಯಾಪ್​ ಬಳಿಕ ಉಪೇಂದ್ರ ಮತ್ತೆ ನಿರ್ದೇಶಕನ ಕ್ಯಾಪ್​ ಧರಿಸುತ್ತಾರೆ ಎಂಬ ಮಾತು ಕೆಲವು ದಿನಗಳಿಂದ ಕೇಳಿಬರುತ್ತಿದೆ. ಉಪ್ಪಿ ಹೊಸ ಚಿತ್ರದ ಡೈರೆಕ್ಷನ್​ಗೆ ತಯಾರಿ ಮಾಡಿಕೊಳ್ಳುತ್ತಿರುವುದು ಕೂಡ ನಿಜ. ಆ ಬಗ್ಗೆ ಸ್ವತಃ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಸಿನಿಮಾದಲ್ಲಿ ನಟಿಸಲು ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆ ಮೂಲಕವೇ ಅವರು ಆಡಿಷನ್​ ಬಗ್ಗೆ ವಿವರ ಹಂಚಿಕೊಂಡಿದ್ದಾರೆ.

‘ಉಪೇಂದ್ರ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸಲು ನಟ-ನಟಿಯರು ಬೇಕಾಗಿದ್ದಾರೆ. 14ರಿಂದ 60 ವರ್ಷ ವಯಸ್ಸಿನವರು ಕಲಾವಿದರು ತಾವು ನಟಿಸಿರುವ 2 ನಿಮಿಷದೊಳಗಿನ ವಿಡಿಯೋ ತುಣುಕನ್ನು upendraproductions@gmail.com ಮೇಲ್​ ಐಡಿಗೆ ಕಳಿಸಿಕೊಡಿ. ಕೊನೆಯ ದಿನಾಂಕ 10 ಮಾರ್ಚ್​ 2022’ ಎಂದು ಉಪೇಂದ್ರ ಪೋಸ್ಟ್​ ಮಾಡಿದ್ದಾರೆ.

ಅಭಿಮಾನಿಗಳಿಗೆ ಉಪೇಂದ್ರ ಎಂದರೆ ಎಲ್ಲಿಲ್ಲದ ಕ್ರೇಜ್​. ಅದರಲ್ಲೂ ಅವರ ನಿರ್ದೇಶನದ ಸಿನಿಮಾ ಬಗ್ಗೆ ಜನರು ಸಖತ್​ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಉಪೇಂದ್ರ ಹೆಚ್ಚು ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಲಿ ಎಂಬುದು ಅಭಿಮಾನಿಗಳ ಬಯಕೆ. ಈ ನಡುವೆ ಉಪೇಂದ್ರ ಅವರು ಪ್ರಜಾಕೀಯದ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ವಿಶೇಷ ರೀತಿಯಲ್ಲಿ ರಾಜಕಾರಣಕ್ಕೆ ಅವರು ಎಂಟ್ರಿ ನೀಡಿದ್ದಾರೆ. ನಟನಾಗಿಯೂ ಉಪೇಂದ್ರ ಬ್ಯುಸಿ ಆಗಿದ್ದಾರೆ. ಅವರ ಮುಖ್ಯ ಭೂಮಿಕೆ ನಿಭಾಯಿಸಿರುವ ‘ಕಬ್ಜ’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಆರ್​. ಚಂದ್ರು ನಿರ್ದೇಶನ ಮಾಡುತ್ತಿರುವ ಆ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಕೊವಿಡ್​ ಕಾರಣದಿಂದ ‘ಕಬ್ಜ’ ಚಿತ್ರದ ಕೆಲಸಗಳು ತಡವಾಗಿವೆ. ಈ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ಡಿಫರೆಂಟ್​ ಗೆಟಪ್​ ಇದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳನ್ನು ಕಂಡು ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ:

ಉಪೇಂದ್ರ ಬಗ್ಗೆ ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಸುದೀಪ್​ ಮಾತು; ಉಪ್ಪಿ ಅಂದ್ರೆ ಸ್ಫೂರ್ತಿಯ ಕಿಚ್ಚು

ನನ್ನ ಮತ್ತು ಉಪೇಂದ್ರ ಮದುವೆ ಬಗ್ಗೆ ಯಶ್​ ಯಾವಾಗಲೂ ಆ ಪ್ರಶ್ನೆ ಕೇಳ್ತಾರೆ; ಪ್ರಿಯಾಂಕಾ ಉಪೇಂದ್ರ

Published On - 9:42 am, Wed, 9 February 22

Follow Us
TV9 Web
TV9 Web

TV9 Kannada

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು