AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ಗೆ ಉಪೇಂದ್ರ ಅತಿಥಿ; ಸಮಯ, ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ

Vikrant Rona pre-release event: ಹೈದರಾಬಾದ್​ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಕಿಚ್ಚ ಸುದೀಪ್​ ಅವರು ಬೆಂಗಳೂರಿನ ಇವೆಂಟ್​ನಲ್ಲಿ ಭಾಗಿ ಆಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಪೇಂದ್ರ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

Vikrant Rona: ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ಗೆ ಉಪೇಂದ್ರ ಅತಿಥಿ; ಸಮಯ, ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ
ಕಿಚ್ಚ ಸುದೀಪ್, ಉಪೇಂದ್ರ
TV9 Web
| Edited By: |

Updated on:Jul 26, 2022 | 1:22 PM

Share

ಬಿಡುಗಡೆಗೂ ಮುನ್ನವೇ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಧೂಳೆಬ್ಬಿಸುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ. ದೇಶಾದ್ಯಂತ ‘ವಿಕ್ರಾಂತ್​ ರೋಣ’ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಹಲವು ಭಾಷೆಗಳಲ್ಲಿ ಈ ಚಿತ್ರ ರಿಲೀಸ್​ ಆಗಲಿರುವುದರಿಂದ ಕಿಚ್ಚ ಸುದೀಪ್​ (Kichcha Sudeep) ಅವರು ಅನೇಕ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸೋಮವಾರ ಸಂಜೆ (ಜುಲೈ 25) ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯಿತು. ಮಂಗಳವಾರ (ಜುಲೈ 26) ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ​‘ವಿಕ್ರಾಂ​ತ್​ ರೋಣ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯುತ್ತಿದೆ. ಹೈದರಾಬಾದ್​ನಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ಬೆಂಗಳೂರಿನಲ್ಲಿ ‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರು ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರುತ್ತಿರುವುದು ವಿಶೇಷ.

ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ‘ಲುಲು ಗ್ಲೋಬಲ್​ ಮಾಲ್​’ನಲ್ಲಿ ಇಂದು ಸಂಜೆ 6.30ಕ್ಕೆ ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಹೈದರಾಬಾದ್​ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಸುದೀಪ್​ ಅವರು ಬೆಂಗಳೂರಿನ ಇವೆಂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ಉಪೇಂದ್ರ ಏನು ಮಾತನಾಡಲಿದ್ದಾರೆ ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಸುದೀಪ್​ ಮತ್ತು ಉಪೇಂದ್ರ ನಡುವೆ ಉತ್ತಮ ಸ್ನೇಹ ಇದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರಿಬ್ಬರು ನಟಿಸಿದ್ದರು. ಈಗ ‘ಕಬ್ಜ’ ಚಿತ್ರದಲ್ಲೂ ಈ ಸ್ಟಾರ್​ ಕಲಾವಿದರು ಒಂದಾಗುತ್ತಿದ್ದಾರೆ. ಉಪ್ಪಿ ಆಗಮನದಿಂದ ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ ಕಳೆಗಟ್ಟಲಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿ ಆಗಿದ್ದರು.

ನಿರ್ಮಾಪಕ ಜಾಕ್​ ಮಂಜು ಅವರು ‘ವಿಕ್ರಾಂತ್​ ರೋಣ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳನ್ನು ಹಾಕಿ ಶೂಟಿಂಗ್​ ಮಾಡಲಾಗಿದೆ. 3ಡಿ ವರ್ಷನ್​ನಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿರುವುದು ಹೈಪ್​ ಹೆಚ್ಚಲು ಕಾರಣ ಆಗಿದೆ. ಅನೂಪ್​ ಭಂಡಾರಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸುದೀಪ್​ ಜೊತೆ ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​, ನಿರೂಪ್​ ಭಂಡಾರಿ ನಟಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್ ಸಂಗೀತ ನೀಡಿರುವ ಹಾಡುಗಳು ಧೂಳೆಬ್ಬಿಸುತ್ತಿವೆ.

ಎಲ್ಲ ಚಿತ್ರಮಂದಿರಗಳ ಎದುರು ಸುದೀಪ್​ ಅವರ ಕಟೌಟ್​ ರಾರಾಜಿಸುತ್ತಿವೆ. ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯಗಳಲ್ಲೂ ಈ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಲಾಗುತ್ತಿದೆ. ಚೆನ್ನೈನ ‘ಸತ್ಯಂ ಸಿನಿಮಾಸ್​’ ಎದುರು ಕಿಚ್ಚನ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ.

Published On - 1:17 pm, Tue, 26 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ