‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ

Vaishnavi Gowda: ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ
ವೈಷ್ಣವಿ

Updated on: Jul 24, 2023 | 11:47 AM

ನಟಿ ವೈಷ್ಣವಿ ಗೌಡ (Vaishnavi Gowda) ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮಿಲಿಯನ್ ಫಾಲೋವರ್ಸ್ ಇದ್ದಾರೆ. ವೈಷ್ಣವಿ ಗೌಡ ಅವರು ಆಗಾಗ ಅಭಿಮಾನಿಗಳಿಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ. ರೀಲ್ಸ್ ಕೂಡ ಮಾಡಿ ಶೇರ್ ಮಾಡಿಕೊಳ್ಳುತ್ತಾರೆ. ಈಗ ಅವರು ‘ಜೈಲರ್’ ಸಿನಿಮಾದ ‘ಕಾವಾಲಾ..’ ಹಾಡಿಗೆ (Kaavaala Song) ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಕಮೆಂಟ್ ಆಯ್ಕೆ ಆಫ್ ಇದೆ. ಹೀಗಾಗಿ ಅಭಿಮಾನಿಗಳು ಈ ಬಗ್ಗೆ ಕಮೆಂಟ್ ಮಾಡುವಂತಿಲ್ಲ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ಯೂಟ್ಯೂಬ್​ನಲ್ಲಿ ಈ ಸಾಂಗ್ ಧೂಳೆಬ್ಬಿಸಿದೆ. ಕೋಟ್ಯಂತರ ಮಂದಿ ಹಾಡನ್ನು ನೋಡಿದ್ದಾರೆ. ಈ ಹಾಡಿನಲ್ಲಿ ತಮನ್ನಾ ಭಾಟಿಯಾ ಸಖತ್ ಆಗಿ ಸ್ಟೆಪ್ ಹಾಕಿದ್ದರು. ಇದರ ಪರಿ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು, ಫ್ಯಾನ್ಸ್ ರೀಲ್ಸ್ ಮಾಡುತ್ತಿದ್ದಾರೆ.

ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅವರು ಕುಣಿದ ಪರಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ರೀತಿಯ ವಿಡಿಯೋ ಹಾಕಿದಾಗ ನೆಗೆಟಿವ್ ಕಮೆಂಟ್​ಗಳು ಬರುತ್ತವೆ. ಆದರೆ, ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ವೈಷ್ಣವಿ ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ. ಹೀಗಾಗಿ, ಅಭಿಮಾನಿಗಳಿಗೆ ಕಮೆಂಟ್ ಮಾಡೋಕೆ ಸಾಧ್ಯವಾಗುತ್ತಿಲ್ಲ.


ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ಆರಂಭಕ್ಕೂ ಮೊದಲು ಸಖತ್ ಕ್ಯೂಟ್ ಲುಕ್​ನಲ್ಲಿ ಮಿಂಚಿದ ವೈಷ್ಣವಿ ಗೌಡ

ವೈಷ್ಣವಿ ಗೌಡ ಅವರು ಸದ್ಯ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಅವರು ಸೀತಾ ಹೆಸರಿನ ಪಾತ್ರ ಮಾಡಿದರೆ, ರಾಮ್ ಹೆಸರಿನ ಪಾತ್ರದಲ್ಲಿ ಗಗನ್ ಮಿಂಚುತ್ತಿದ್ದಾರೆ. ಸೀತಾ ಮಗಳು ಸಿಹಿ ಪಾತ್ರದಲ್ಲಿ  ರೀತು ಸಿಂಗ್ ಅಭಿನಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Mon, 24 July 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us