‘ಕಾಂತಾರ’ ರಿಲೀಸ್ ಆಗಿ ಒಂದು ವರ್ಷ; ಹೊಸ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್

ರಿಷಬ್ ಶೆಟ್ಟಿ ಅವರು ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದವರು. ಅವರು ತಮ್ಮದೇ ಊರಿನ ಕಥೆಯನ್ನು ಜನರ ಮುಂದಿಡುವ ಪ್ರಯತ್ನ ಮಾಡಿದರು. ಈ ಪ್ರಯತ್ನದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ‘ಕಾಂತಾರ’ ಚಿತ್ರದ ಒಟ್ಟಾರೆ ಗಳಿಕೆ 400+ ಕೋಟಿ ರೂಪಾಯಿ ಆಗಿದೆ. ಈಗ ಸಿನಿಮಾ ಬಗ್ಗೆ ಹೊಸ ಘೋಷಣೆ ಆಗಿದೆ.

‘ಕಾಂತಾರ’ ರಿಲೀಸ್ ಆಗಿ ಒಂದು ವರ್ಷ; ಹೊಸ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್
ಕಾಂತಾರ

Updated on: Sep 29, 2023 | 11:28 AM

2022ರ ಸೆಪ್ಟೆಂಬರ್ 30. ಈ ದಿನ ‘ಕಾಂತಾರ’ ಸಿನಿಮಾ (Kanatara Movie) ಕನ್ನಡದಲ್ಲಿ ರಿಲೀಸ್ ಆಯಿತು. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ದೈವದ ಬಗ್ಗೆ ಹೇಳಲಾಯಿತು. ರಿಷಬ್ ಶೆಟ್ಟಿ (Rishab Shetty) , ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಟ್ರೇಲರ್ ನೋಡಿದ ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದರು. ನಿರೀಕ್ಷೆಗೂ ಮೀರಿ ಸಿನಿಮಾ ಮೂಡಿಬಂತು. ಈ ಚಿತ್ರ ರಿಲೀಸ್ ಆಗಿ ಒಂದು ವರ್ಷ ಕಳೆಯಲಿದೆ (ಸೆಪ್ಟೆಂಬರ್ 30). ಇದಕ್ಕೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆ ಆಗಿದೆ.

ರಿಷಬ್ ಶೆಟ್ಟಿ ಅವರು ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದವರು. ಅವರು ತಮ್ಮದೇ ಊರಿನ ಕಥೆಯನ್ನು ಜನರ ಮುಂದಿಡುವ ಪ್ರಯತ್ನ ಮಾಡಿದರು. ಈ ಪ್ರಯತ್ನದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ‘ಕಾಂತಾರ’ ಚಿತ್ರದ ಒಟ್ಟಾರೆ ಗಳಿಕೆ 400+ ಕೋಟಿ ರೂಪಾಯಿ ಆಗಿದೆ. ಈ ಸಿನಿಮಾ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರದ ‘ವರಾಹ ರೂಪಂ..’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಹೊಂಬಾಳೆ ಫಿಲ್ಮ್ಸ್ ಪ್ಲ್ಯಾನ್ ಮಾಡಿಕೊಂಡಿದೆ.

ಅಜನೀಶ್ ಲೋಕನಾಥ್ ‘ಕಾಂತಾರ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ವರಾಹ ರೂಪಂ..’ ಹಾಡಂತೂ ಭರ್ಜರಿ ಜನಪ್ರಿಯತೆ ಪಡೆಯಿತು. ಇದರ ವಿಡಿಯೋ ಸಾಂಗ್ ನೋಡಲು ಅಭಿಮಾನಿಗಳು ಕಾದಿದ್ದರು. ಅದಕ್ಕೆ ಸಮಯ ಬಂದಿದೆ. ಶನಿವಾರ (ಸೆಪ್ಟೆಂಬರ್ 30) ಬೆಳಗ್ಗೆ 10 ಗಂಟೆಗೆ ಸಾಂಗ್ ರಿಲೀಸ್ ಆಗಲಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ‘Kantara 2’: ‘ಕಾಂತಾರ 2’ ಚಿತ್ರಕ್ಕೆ ನವೆಂಬರ್​ನಲ್ಲಿ ಶೂಟಿಂಗ್ ಶುರು? ರಿಲೀಸ್ ಯಾವಾಗ?

ಇನ್ನು, ‘ಕಾಂತಾರ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ರಿಷಬ್ ಅವರು ಕೊನೆಯ ಹಂತದ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ