ವರ್ತೂರು ಸಂತೋಷ್ ಬಂಧನದ ಹಿಂದೆ ಇದೆ ಷಡ್ಯಂತ್ರ?

ವರ್ತೂರು ಸಂತೋಷ್ ಅವರು ಹುಲಿ ಉಗುರಿನಿಂದ ಲಾಕೆಟ್ ಮಾಡಿಕೊಂಡಿದ್ದರು. ಇದನ್ನು ಧರಿಸಿಯೇ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆ ಒಳಗೆ ತೆರಳಿ ವರ್ತೂರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ವರ್ತೂರು ಸಂತೋಷ್ ಬಂಧನದ ಹಿಂದೆ ಇದೆ ಷಡ್ಯಂತ್ರ?
ವರ್ತೂರ್ ಸಂತೋಷ್

Updated on: Oct 23, 2023 | 1:33 PM

ವರ್ತೂರು ಸಂತೋಷ್ ಬಂಧನ ಸೆನ್ಸೇಷನ್ ಸೃಷ್ಟಿ ಮಾಡಿದೆ. ಬಿಗ್ ಬಾಸ್ (Bigg Boss) ಮನೆಯಿಂದಲೇ ಅವರನ್ನು ವಶಕ್ಕೆ ಪಡೆದಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿ ಅವರ ತಾಯಿ ಮಂಜುಳಾ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಮಗನ ತಪ್ಪು ಇಲ್ಲ ಎಂದು ಅವರು ಹೇಳಿದ್ದಾರೆ. ಅಕ್ಟೋಬರ್ 22ರ ಸಂಜೆ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಲ್ಲೇ ವಶಕ್ಕೆ ಪಡೆದರು.

‘ನನ್ನ ಮಗ ವರ್ತೂರು ಸಂತೋಷ್ ಬಂಧನ ಹಿಂದೆ ಷಡ್ಯಂತ್ರ ಇದೆ. ಪುತ್ರ ಸಂತೋಷ್ ಬೆಳವಣಿಗೆ ಸಹಿಸದೇ ಈ ಷಡ್ಯಂತ್ರ ಮಾಡಿದ್ದಾರೆ. ನನ್ನ ಮಗ ಅನೇಕ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದಾನೆ. ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ’ ಎಂದು ಮಂಜುಳಾ ಹೇಳಿದ್ದಾರೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ಹುಲಿ ಉಗುರಿನಿಂದ ಲಾಕೆಟ್ ಮಾಡಿಕೊಂಡಿದ್ದರು. ಇದನ್ನು ಧರಿಸಿಯೇ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆ ಒಳಗೆ ತೆರಳಿ ವರ್ತೂರು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅವರನ್ನು ಬಂಧಿಸಲಾಗಿದೆ. ಸದ್ಯ ಹೆಚ್ಚಿನ ವಿಚಾರಣೆಗೆ ಅವರನ್ನು ಕೋರ್ಟ್ ಎದುರು ಹಾಜರು ಪಡಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ