ವಸಿಷ್ಠ ಅಭಿನಯದ ‘ಕಾಲಚಕ್ರ’ ವಿಭಿನ್ನ ಟೀಸರ್ಗೆ ಭರ್ಜರಿ ಪ್ರಶಂಸೆ
ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ವಸಿಷ್ಠ ಸಿಂಹ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ ಅವರು ಚಿತ್ರದ ಟೀಸರ್ ಬಿಡುಗಡೆ ಮಾಡಿ ಪ್ರಶಂಸೆ ಮಾತುಗಳಾಡಿದ್ದರು. ಸುಮಂತ್ ಕ್ರಾಂತಿ ನಿರ್ಮಾಣ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ […]
ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ವಸಿಷ್ಠ ಸಿಂಹ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ ಅವರು ಚಿತ್ರದ ಟೀಸರ್ ಬಿಡುಗಡೆ ಮಾಡಿ ಪ್ರಶಂಸೆ ಮಾತುಗಳಾಡಿದ್ದರು.
ಸುಮಂತ್ ಕ್ರಾಂತಿ ನಿರ್ಮಾಣ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ. ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿದ್ದಾರೆ. ಸಂಜಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ್ ಜೀವ ಹಾಡಿದ್ದಾರೆ.
LMಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ BA ಮಧು ಸಂಭಾಷಣೆ ಬರೆದಿದ್ದಾರೆ. ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Published On - 1:42 pm, Tue, 6 October 20