ನಟ ವಸಿಷ್ಠ ಸಿಂಹಗೆ ಹೊಸ ಬಿರುದು ಕೊಟ್ಟ ಅಭಿಮಾನಿಗಳು

|

Updated on: Jan 16, 2024 | 7:41 PM

Vasishta Simha: ವಸಿಷ್ಠ ಸಿಂಹ ನಟಿಸಿರುವ ಹೊಸ ಸಿನಿಮಾ ಘೋಷಣೆ ಆಗಿದೆ. ಇದರ ಬೆನ್ನಲ್ಲೆ ಅಭಿಮಾನಿಗಳು ವಸಿಷ್ಠಗೆ ಹೊಸ ಬಿರುದು ನೀಡಿದ್ದಾರೆ.

ನಟ ವಸಿಷ್ಠ ಸಿಂಹಗೆ ಹೊಸ ಬಿರುದು ಕೊಟ್ಟ ಅಭಿಮಾನಿಗಳು
Follow us on

ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ವಸಿಷ್ಠ ಸಿಂಹ (Vasishta Simha) ಕನ್ನಡ ಮಾತ್ರವಲ್ಲದೆ ಪರಭಾಷೆಯ ಸಿನಿಮಾಗಳಲ್ಲಿಯೂ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ವಸಿಷ್ಠ ಸಿಂಹ ‘ವಿಐಪಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಹೆಸರು ಘೋಷಿಸಲಾಗಿದ್ದು, ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದೆಲ್ಲದರ ನಡುವೆ ವಸಿಷ್ಠ ಸಿಂಹಗೆ ಹೊಸ ಬಿರುದೊಂದನ್ನು ನೀಡಲಾಗಿದೆ.

ವಸಿಷ್ಠ ಸಿಂಹ ಅವರಿಗೆ ‘ರಾಯಲ್ ಸ್ಟಾರ್’ ಎಂದು ಬಿರುದು ಕೊಡಲಾಗಿದೆ. ‘ವಿಐಪಿ’ ಸಿನಿಮಾದಲ್ಲಿ ವಸಿಷ್ಠ ಸಿಂಹ ಅವರನ್ನು ‘ರಾಯಲ್ ಸ್ಟಾರ್’ ಎಂದೇ ಪರಿಚಯ ಮಾಡಲಾಗುತ್ತದೆ. ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬ್ರಹ್ಮ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ವಿಐಪಿ’ ಸಿನಿಮಾ ವಿಭಿನ್ನ ಕಥಾಹಂದರ ಹೊಂದಿದೆ. ಇದೇ ಹೆಸರಿನಲ್ಲಿ ತಮಿಳಿನಲ್ಲಿ ಎರಡು ಸಿನಿಮಾಗಳು ಬಿಡುಗಡೆ ಆಗಿದ್ದು, ಧನುಶ್ ನಾಯಕನಾಗಿ ನಟಿಸಿದ್ದಾರೆ. ಇದು ತಮಿಳು ಸಿನಿಮಾದ ರೀಮೇಕ್ ಆಗಿದೆಯೇ ಅಥವಾ ಅಲ್ಲವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ:ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ಎದುರು ದೀಪ ಹಚ್ಚಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ

ಬೆಂಗಳೂರಿನ ಸುತ್ತಮುತ್ತಾ ‘ವಿಐಪಿ’ ಸಿನಿಮಾದ ಚಿತ್ರೀಕರಣ ಸಾಗುತ್ತಿದೆ. ಕೊಡಗು, ಸಕಲೇಶಪುರದಲ್ಲೂ ಸಹ ಸಿನಿಮಾದ ಕೆಲ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಕಲಾಸೃಷ್ಠಿ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದು. ಈ ಚಿತ್ರಕ್ಕೆ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರಾಗಿಣಿ ಅಭಿನಯದ ‘ಸಾರಿ’ ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರ ಹಾಲಿವುಡ್ ಸ್ಟೈಲ್ ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮಾದರಿಯಲ್ಲಿ ಇರಲಿದೆಯಂತೆ. ಮೋಹನ್ ಕುಮಾರ್ “ವಿಐಪಿ” ಚಿತ್ರಕ್ಕೆ ಕಥೆ ಬರೆದಿದ್ದಾರೆ. ರಾಜೀವ್ ಗಣೇಶನ್ ಚಿತ್ರಕಥೆ ಬರೆದು ಛಾಯಾಗ್ರಾಹಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಕೆಜಿಎಫ್ ಖ್ಯಾತಿಯ ವಿಕ್ರಮ್ ಮೋರ್ ಸಾಹಸ ನಿರ್ದೇಶನ ಚಿತ್ರದಲ್ಲಿರಲಿದೆ.

ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ತಿಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ