AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Love…ಲಿ’ ಮೂಡ್​ನಲ್ಲಿ ವಸಿಷ್ಠ ಸಿಂಹ; ಹೊಸ ಚಿತ್ರಕ್ಕೆ ನೆರವೇರಿತು ಮುಹೂರ್ತ

‘Love...ಲಿ’ ಚಿತ್ರದ ಶೀರ್ಷಿಕೆ ನೋಡಿ ಅಭಿಮಾನಿಗಳ ವಲಯದಲ್ಲಿ ಕುತೂಹಲ ಹುಟ್ಟಿದೆ. ಬೆಂಗಳೂರಿನ ಸರ್ಕಲ್ ಮಾರಮ್ಮ ದೇಗುಲದಲ್ಲಿ ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿದೆ.

‘Love...ಲಿ’ ಮೂಡ್​ನಲ್ಲಿ ವಸಿಷ್ಠ ಸಿಂಹ; ಹೊಸ ಚಿತ್ರಕ್ಕೆ ನೆರವೇರಿತು ಮುಹೂರ್ತ
ವಸಿಷ್ಠ ಸಿಂಹ
TV9 Web
| Edited By: |

Updated on:Apr 22, 2022 | 9:23 PM

Share

ನಟ ವಸಿಷ್ಠ ಸಿಂಹ (Vasishta N. Simha) ವಿಲನ್ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡವರು. ಹಾಗಂತ ಅವರು ಆ ರೀತಿಯ ಪಾತ್ರಕ್ಕೆ ಪಾತ್ರ ಸೀಮಿತವಾಗಿಲ್ಲ. ಚಿತ್ರದಿಂದ ಚಿತ್ರಕ್ಕೆ ಹಲವು ಭಿನ್ನ ಪಾತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ‘ಟಗರು’ ಸಿನಿಮಾದಲ್ಲಿ (Tagaru Movie) ಅವರು ನಟಿಸಿದ ಚಿಟ್ಟೆ ಪಾತ್ರ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತ್ತು. ‘ಕೆಜಿಎಫ್’ ಸರಣಿಯಲ್ಲೂ ವಸಿಷ್ಠ ಸಿಂಹ ನಟಿಸಿ ಗಮನ ಸೆಳೆದಿದ್ದಾರೆ. ಅವರ ಕಂಚಿನ ಕಂಠದಿಂದ ಸಾಕಷ್ಟು ಹಾಡುಗಳು ಮೂಡಿ ಬಂದಿವೆ. ಸದ್ಯ, ವಸಿಷ್ಠ ನಾಯಕನಾಗಿ ನಟಿಸಿರುವ ‘ಕಾಲಚಕ್ರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ ಅವರು ಮತ್ತೊಂದು ಸಿನಿಮಾದಲ್ಲಿ ಹೀರೋ ಆಗಿ ನಟಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ‘Love…ಲಿ’ (Love Li) ಎನ್ನುವ ಶೀರ್ಷಿಕೆ ಇಡಲಾಗಿದೆ.

‘Love…ಲಿ’ ಚಿತ್ರದ ಶೀರ್ಷಿಕೆ ನೋಡಿ ಅಭಿಮಾನಿಗಳ ವಲಯದಲ್ಲಿ ಕುತೂಹಲ ಹುಟ್ಟಿದೆ. ಬೆಂಗಳೂರಿನ ಸರ್ಕಲ್ ಮಾರಮ್ಮ ದೇಗುಲದಲ್ಲಿ ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿದೆ. ಚಿತ್ರತಂಡ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದು, ವಸಿಷ್ಠ ಸಿಂಹ ಅವರು ಬೈಕ್ ಮೇಲೆ ಕುಳಿತು ಧಮ್ ಹೊಡೆಯುತ್ತಿದ್ದಾರೆ. ಸಖತ್ ಸ್ಟೈಲಿಶ್ ಲುಕ್​​ನಲ್ಲಿ ಅವರು ಮಿಂಚಿದ್ದಾರೆ.

‘Love…ಲಿ’ ಚಿತ್ರದಲ್ಲಿ ​ ಲವ್ ಸ್ಟೋರಿ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರೌಡಿಸಂ ಕಥೆಯನ್ನೂ ಸಿನಿಮಾ ಒಳಗೊಂಡಿದೆ. ‘ಮಫ್ತಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಚಿತ್ರವನ್ನು ನರ್ತನ್ ನಿರ್ದೇಶನ ಮಾಡಿದ್ದರು. ಅವರ ಜತೆ ಕೆಲಸ ಮಾಡಿದ ಅನುಭವ ಇರುವ ಚೇತನ್ ಕೇಶವ್ ‘Love…ಲಿ’ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ವಸಿಷ್ಠ ಸಿಂಹ ಹಾಗೂ ಚೇತನ್​ ಕೇಶವ್​​ಗೆ ಮೊದಲಿನಿಂದಲೂ ಪರಿಚಯ ಇತ್ತು. ಈಗ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡುತ್ತಿರುವುದು ವಿಶೇಷ. ಮೇ 4ರಿಂದ ಸಿನಿಮಾ ಶೂಟಿಂಗ್​ ಆರಂಭಗೊಳ್ಳಲಿದ್ದು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ವಸಿಷ್ಠ ಸಿಂಹ ಬತ್ತಳಿಕೆಯಲ್ಲಿ ಸಾಕಷ್ಟು ಪ್ರಾಜೆಕ್ಟ್​​ಗಳಿವೆ. ಜಯರಾಜ್​ ಅವರ ಜೀವನ ಆಧರಿಸಿ ಸಿದ್ಧಗೊಳ್ಳುತ್ತಿರುವ ‘ಹೆಡ್ ಬುಷ್’ ಸಿನಿಮಾದಲ್ಲಿ ವಸಿಷ್ಠ ಅವರು ಬಣ್ಣ ಹಚ್ಚುತ್ತಿದ್ದಾರೆ. ‘ಸಿಂಬಾ’, ‘ಓದೆಲಾ ರೈಲ್ವೇ ಸ್ಟೇಷನ್’ ಸೇರಿ ಹಲವು ಸಿನಿಮಾಗಳಲ್ಲಿ ವಸಿಷ್ಠ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ‘ಹೆಡ್ ​ಬುಷ್​’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ

‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ

Published On - 6:19 pm, Fri, 22 April 22

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!