Vasishta Simha: ಬ್ಯಾಟ್ ಹಿಡಿದು ಫೀಲ್ಡ್​ಗೆ ಇಳಿದ ವಸಿಷ್ಠ ಸಿಂಹ; ಇದು ‘ವಿಐಪಿ’ ಕಥೆ

ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಸನ್ನನಾಥ ಸ್ವಾಮೀಜಿ ಅವರು ‘ವಿಐಪಿ’ ಚಿತ್ರದ ಮೊದಲ ಲುಕ್ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ವಸಿಷ್ಠ ಸಿಂಹ ಹಾಗೂ ಚಿತ್ರತಂಡ ಅಲ್ಲಿ ಉಪಸ್ಥಿತಿ ಇತ್ತು. ಈ ಪೋಸ್ಟರ್​ನಲ್ಲಿ ವಸಿಷ್ಠ ಸಿಂಹ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

Vasishta Simha: ಬ್ಯಾಟ್ ಹಿಡಿದು ಫೀಲ್ಡ್​ಗೆ ಇಳಿದ ವಸಿಷ್ಠ ಸಿಂಹ; ಇದು ‘ವಿಐಪಿ’ ಕಥೆ
ವಸಿಷ್ಠ ಸಿಂಹ
Follow us
|

Updated on: Mar 25, 2024 | 7:35 AM

ನಟ ವಸಿಷ್ಠ ಸಿಂಹ (Vasishta Simha) ಅವರು ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ವಿಲನ್ ಆಗಿ, ಹೀರೋ ಆಗಿ, ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಈಗ ‘ವಿಐಪಿ’ ಚಿತ್ರದ ಮೂಲಕ ಅವರು ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಸಖತ್ ಗಮನ ಸೆಳೆಯುತ್ತಿದೆ. ಈ ಪೋಸ್ಟರ್​ನಲ್ಲಿ ವಸಿಷ್ಠ ಸಿಂಹ ಬ್ಯಾಟ್ ಹಿಡಿದು ಫೀಲ್ಡ್​ಗೆ ಇಳಿದಿದ್ದಾರೆ. ಹಾಗಂತ ಇದು ಕ್ರಿಕೆಟ್ ಫೀಲ್ಡ್ ಕಥೆ ಅಲ್ಲ. ಅವರು ಬ್ಯಾಟ್ ಹಿಡಿದ್ದು ದುಷ್ಟರ ಸಂಹಾರಕ್ಕಾಗಿ.

ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಸನ್ನನಾಥ ಸ್ವಾಮೀಜಿ ಅವರು ‘ವಿಐಪಿ’ ಚಿತ್ರದ ಮೊದಲ ಲುಕ್ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ವಸಿಷ್ಠ ಸಿಂಹ ಹಾಗೂ ಚಿತ್ರತಂಡ ಅಲ್ಲಿ ಉಪಸ್ಥಿತಿ ಇತ್ತು. ಈ ಪೋಸ್ಟರ್​ನಲ್ಲಿ ವಸಿಷ್ಠ ಸಿಂಹ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಸನ್ನನಾಥ ಸ್ವಾಮೀಜಿ ತಂಡಕ್ಕೆ ಶುಭಕೋರಿದ್ದಾರೆ.

‘ವಿಐಪಿ’ ಚಿತ್ರಕ್ಕೆ ಈಗಾಗಲೇ ಎರಡು ಹಂತದಲ್ಲಿ ಶೂಟಿಂಗ್ ನಡೆದಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಮಾತಿನ‌ ಭಾಗದ ಚಿತ್ರೀಕರಣ ಹಾಗೂ ಆ್ಯಕ್ಷನ್ ಸನ್ನಿವೇಶಗಳನ್ನು ಇದು ಒಳಗೊಂಡಿದೆ. ‘ಕೆಜಿಎಫ್’ ಖ್ಯಾತಿಯ ವಿಕ್ರಂ ಮೋರ್ ಹಾಗೂ ‘ಯುವ’ ಚಿತ್ರಿ ಖ್ಯಾತಿಯ ಅರ್ಜುನ್ ಈ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಬ್ಯಾನರ್ ಮೂಲಕ ‘ವಿಐಪಿ’ ಸಿನಿಮಾ ಮೂಡಿ ಬಂದಿದೆ. ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ‘ಬ್ರಹ್ಮ’ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ತಮನ್ನಾ ಭಾಟಿಯಾ ಜೊತೆ ನಟ ವಸಿಷ್ಠ ಸಿಂಹ ನಟನೆ, ಸಿನಿಮಾ ಯಾವುದು?

‘ವಿಐಪಿ’ ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ಜೊತೆಯಾಗಿ ತೇಜಸ್ವಿನಿ ಶರ್ಮ ನಟಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಅಫ್ಜಲ್, ಬಲ ರಾಜವಾಡಿ, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಹನುಮಂತೇಗೌಡ, ರಣವೀರ್, ರಾಮ್ ಕಶ್ಯಪ್ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು