ಕೊವಿಡ್ ಕಷ್ಟದಲ್ಲೂ ಕೈಕಟ್ಟಿ ಕುಳಿತ ಕನ್ನಡದ ಸ್ಟಾರ್ ನಟರು; ಬಹಿರಂಗ ಪತ್ರ ವೈರಲ್

‘ಇಲ್ಲಿ ಜನರ ಜೀವಗಳು ಹೋಗ್ತಿವೆ. ನಿಜಕ್ಕೂ ಏನಾದ್ರೂ ಮಾಡುವುದಿದ್ದರೆ ನಿಮ್ಮ ಸಂಪರ್ಕ, ಪ್ರಭಾವ ಬಳಸಿ ಜನರ ಜೀವಗಳನ್ನು ಕಾಪಾಡಿ’ ಎಂದು ವೀರಕಪುತ್ರ ಶ್ರೀನಿವಾಸ್​ ಅವರು ಕನ್ನಡದ ಸ್ಟಾರ್​ ನಟರಿಗೆ ಮನವಿ ಮಾಡಿಕೊಂಡಿದ್ದಾರೆ.

ಕೊವಿಡ್ ಕಷ್ಟದಲ್ಲೂ ಕೈಕಟ್ಟಿ ಕುಳಿತ ಕನ್ನಡದ ಸ್ಟಾರ್ ನಟರು; ಬಹಿರಂಗ ಪತ್ರ ವೈರಲ್
ಸ್ಟಾರ್​ ನಟರಿಗೆ ಬಹಿರಂಗ ಪತ್ರ ಬರೆದ ವೀರಕಪುತ್ರ ಶ್ರೀನಿವಾಸ್​
Follow us
ಮದನ್​ ಕುಮಾರ್​
|

Updated on:Apr 22, 2021 | 8:19 AM

ದಿನದಿಂದ ದಿನಕ್ಕೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಪ್ರತಿದಿನ ಲಕ್ಷಾಂತರ ಜನರು ಈ ಮಹಾಮಾರಿಯ ಕಾಟದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಪರದಾಡುವವರು ಒಂದು ಕಡೆ. ಶವಾಗಾರದಲ್ಲಿ ಕುಟುಂಬದವರ ಅಂತ್ಯಸಂಸ್ಕಾರಕ್ಕೆ ಕಷ್ಟಪಡುತ್ತಿರುವವರ ನೋವು ಇನ್ನೊಂದು ಕಡೆ. ಈ ಸಂದರ್ಭದಲ್ಲಿ ಸಿನಿಮಾದ ಸ್ಟಾರ್​ ನಟರು ಸಹಾಯ ಮಾಡಲು ಮುಂದಾಗಬೇಕು ಎಂದು ವೀರಕಪುತ್ರ ಶ್ರೀನಿವಾಸ್​ ಒತ್ತಾಯಿಸಿದ್ದಾರೆ. ಎಲ್ಲ ಸ್ಟಾರ್ ನಟರನ್ನು ಉದ್ದೇಶಿಸಿ ಅವರೊಂದು ಬಹಿರಂಗ ಪತ್ರ ಬರೆದಿದ್ದಾರೆ. ಆ ಪತ್ರ ಈಗ ಸಖತ್​ ವೈರಲ್​ ಆಗುತ್ತಿದೆ.

‘ಸೋಂಕಿಗೆ ಒಳಗಾಗುತ್ತಿರುವ ಲಕ್ಷಾಂತರ ಜನರಲ್ಲಿ ನಿಮ್ಮ ಅಭಿಮಾನಿಗಳೂ ಇದ್ದಾರೆ. ಆದ್ರೆ ಅವರು ತಮ್ಮ ಕಷ್ಟವನ್ನು ನಿಮ್ಮ ತನಕ ತಲುಪಿಸಲಾರರು. ಏಕೆಂದರೆ ನೀವು ಅವರಿಗೆ ಗೊತ್ತೇ ವಿನಃ ಅವರು ನಿಮಗೆ ಗೊತ್ತಿಲ್ಲ. ನಿಮ್ಮ ಹುಟ್ದಬ್ಬಕ್ಕೆ ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ನಿಮ್ಗೆ ವಿಶ್ ಮಾಡಿ ಗೊತ್ತಿದೆಯೇ ಹೊರತು ನಿಮ್ಮ ಸಂಪರ್ಕದಲ್ಲಿರೋದು ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಪರವಾಗಿ ವರ್ಷಗಟ್ಟಲೆ ಪ್ರಚಾರ ಮಾಡೋದು, ಜಗಳ ಮಾಡೋದು ಗೊತ್ತೇ ವಿನಃ ನಿಮ್ಮಿಂದ ಏನನ್ನೂ ನಿರೀಕ್ಷಿಸಿ ಗೊತ್ತಿಲ್ಲ. ನಿಮ್ಮ ಸಿನಿಮಾ ಬಿಡುಗಡೆಯಾದಾಗ ಜಾತ್ರೆಯಂತೆ ಖರ್ಚು ಮಾಡಿ ಸಂಭ್ರಮಿಸುವುದು ಗೊತ್ತಿದೆಯೇ ವಿನಃ ಅಷ್ಟೇ ಸಲೀಸಾಗಿ ಕೊರೊನಾಗೆ ಚಿಕಿತ್ಸೆ ಪಡೆಯುವುದು ಹೇಗೆಂದು ಗೊತ್ತಿಲ್ಲ’ ಎಂದು ಜನರ ಪರವಾಗಿ ವೀರಕಪುತ್ರ ಶ್ರೀನಿವಾಸ್​ ಧ್ವನಿ ಎತ್ತಿದ್ದಾರೆ.

‘ಏನಾದ್ರೂ ಮಾಡ್ಬಹುದಾ ಈ ಸಂದರ್ಭದಲ್ಲಿ ನೋಡಿ ಪ್ಲೀಸ್. ಏಕೆಂದರೆ ಈ ಸಮಾಜ ನೀವು ಚೆನ್ನಾಗಿರಲು ಏನೆಲ್ಲಾ ಕೊಟ್ಟಿದೆ. ಅಂತಹ ಸಮಾಜ ಇಂದು ಕಷ್ಟದಲ್ಲಿರುವಾಗ Stay Home, Stay Safe ಅಂತ ಉಚಿತ ಸಲಹೆಯೊಂದನ್ನು ಕೊಟ್ಟು ನಮ್ಮಂತಹ ಸಾಮಾನ್ಯರಂತೆ ನೀವೂ ಗೂಡು ಸೇರಿ ಕೂತುಬಿಡೋದು ಯಾವ ನ್ಯಾಯ? ನಿಮಗೆ ಈ ಅಭಿಮಾನಿಗಳು ಮತ್ತು ಸಮಾಜ ನೀಡಿರುವ ಸ್ಥಾನಮಾನ ಸಾಮಾನ್ಯದಲ್ಲವಲ್ಲ. ಓಹ್ ಹೌದಾ.. ಹಾಗಾದ್ರೆ ಒಂದಷ್ಟು ಕುಟುಂಬಗಳಿಗೆ ಅಕ್ಕಿ ಕೊಡ್ತೀವಿ! ಒಂದಷ್ಟು ಹೊಟ್ಟೆಗಳಿಗೆ ಅನ್ನ ನೀಡ್ತೀವಿ! ಮಾಸ್ಕ್ ವಿತರಿಸ್ತೀವಿ.. ಒಂದಷ್ಟು ಜನರನ್ನು ಊರುಗಳಿಗೆ ತಲುಪಿಸೋಕೆ ಗಾಡಿ ಕಳಿಸ್ತೀವಿ.. ಅನ್ನೋ ಸಪ್ಪೆ ನಿರ್ಧಾರಗಳಿಗೆ ಬರಬೇಡಿ ಪ್ಲೀಸ್. ಇಲ್ಲಿ ಜನರ ಜೀವಗಳು ಹೋಗ್ತಿವೆ. ನಿಜಕ್ಕೂ ಏನಾದ್ರೂ ಮಾಡುವುದಿದ್ದರೆ ನಿಮ್ಮ ಸಂಪರ್ಕ, ಪ್ರಭಾವ ಬಳಸಿ ಜನರ ಜೀವಗಳನ್ನು ಕಾಪಾಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

‘ನಿಮ್ಮ ತೋಟದ ಮನೆಯಲ್ಲೋ, ನಿಮ್ಮ ಹೋಟೆಲ್​ಗಳಲ್ಲೋ ಅಥವಾ ನಿಮ್ಗೆ ಗೊತ್ತಿರುವ ಕಲ್ಯಾಣಮಂಟಪಗಳಲ್ಲೋ ಒಂದು ನೂರಿನ್ನೂರು ಬೆಡ್​​ಗಳ ಕೊವಿಡ್ ಕೇರ್ ಸೆಂಟರ್​​ಗಳನ್ನು ತೆರೆದಿಡಿ. ಎಷ್ಟೋ ಜನ ಸಣ್ಣ ಸಣ್ಣ ರೂಮುಗಳಲ್ಲಿ, ಸಿಂಗಲ್ ಬೆಡ್ ರೂಮ್ ಇರುವ ಮನೆಗಳಲ್ಲಿ ವಾಸಿಸ್ತಿದ್ದಾರೆ. ದುಡಿಯಲು ಹೊರಗಡೆ ಹೋಗುವ ಒಬ್ಬರಿಗೆ ಕೊರೊನಾ ಬಂದ್ರೆ ಮನೆಯವರೆಲ್ಲರೂ ಸೋಂಕಿಗೆ ಒಳಗಾಗಬೇಕಾದ ಪರಿಸ್ಥಿತಿ ಇದೆ. ಅಂತಹವರಿಗೆ ನಿಮ್ಮ ಕೊವಿಡ್ ಕೇರ್ ಸೆಂಟರ್ ಆದ್ಯತೆ ನೀಡಲಿ’ ಎಂದು ವೀರಕಪುತ್ರ ಶ್ರೀನಿವಾಸ್​ ಅವರು ಪತ್ರದಲ್ಲಿ ಸಲಗೆ ನೀಡಿದ್ದಾರೆ.

‘ಸರ್ಕಾರದ ಜೊತೆ ನಿರಂತರ ಸಂಪರ್ಕ ಸಾಧಿಸಿ ನಿಜಕ್ಕೂ ಅಗತ್ಯವಿರುವಂತಹವರಿಗೆ ಹಾಸಿಗೆ, ಆಕ್ಸಿಜನ್​ಗಳನ್ನು ದೊರಕಿಸಿಕೊಡಿ! ಕೊರೊನಾ ಬಂದಿದ್ದಕ್ಕೆ ಜನ ಸಾಯ್ತಿಲ್ಲ, ಸರ್ಕಾರ ಚಿಕಿತ್ಸೆ ನೀಡಲು ವಿಫಲವಾಗಿರುವ ಕಾರಣಕ್ಕೆ ಜನ ಸಾಯ್ತಿರೋದು. ಅಂತಹ ಅಸಹಾಯಕರಿಗೆ ತಮ್ಮ ಸಹಾಯಹಸ್ತ ಸಿಗಬಾರದೇಕೆ? ನಿಮ್ಮ ಮಾತನ್ನು ಅಷ್ಟು ಸಲೀಸಾಗಿ ಅಲ್ಲಗೆಳೆಯುವಂತಹ ಯಾವ ಮಂತ್ರಿಗಳೂ, ಆಸ್ಪತ್ರೆಗಳೂ ನಮ್ಮ ಕರ್ನಾಟಕದಲ್ಲಿಲ್ಲ. ಈ ನಿಟ್ಟಿನಲ್ಲಿ ಯೋಚಿಸಬಾರದೇಕೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ವೈರಸ್​ಗೆ ಬಲಿಯಾದ ಹಿರಿಯ ನಟ ಕಿಶೋರ್ ನಂದಲಸ್ಕರ್

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

Published On - 8:10 am, Thu, 22 April 21

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್