AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಲವಾರ’ ಸಿನಿಮಾ ನೋಡಲು ಹೋಗಿ: ‘ಯಾವ ನಾಯಿಗೆ ಬೇಕು ನಿನ್ನ ಟಿಕೆಟ್’ ಎನ್ನಿ

Valavara Kannada movie: ಕನ್ನಡದ ಕೆಲಸಗಳು ಹಾಗೂ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಹೋರಾಟಗಳಿಂದ ಗುರುತಿಸಿಕೊಂಡಿರುವ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್​​ಬುಕ್​​ನಲ್ಲಿ ‘ವಲವಾರ’ ಸಿನಿಮಾ ಬಗ್ಗೆ ಪೊಸ್ಟ್ ಒಂದನ್ನು ಹಂಚಿಕೊಂಡಿದ್ದು, ಆ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ. ‘ವಲವಾರ’ ಸಿನಿಮಾ ವೀಕ್ಷಿಸಿರುವ ವೀರಕಪುತ್ರ ಶ್ರೀನಿವಾಸ್ ಅವರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದು, ಸಿನಿಮಾಕ್ಕೆ ತಾವೇ ಟಿಕೆಟ್ ಕೊಡಿಸುವುದಾಗಿ ಸಹ ಹೇಳಿದ್ದಾರೆ. ಆದರೆ ಅವರಿಂದ ಟಿಕೆಟ್ ಪಡೆಯುವ ಮುನ್ನ ಅವರ ಫೇಸ್​​ಬುಕ್​​ನಲ್ಲಿ ಬರೆದಿರುವ ಪೋಸ್ಟ್ ಒಮ್ಮೆ ಓದಿಕೊಳ್ಳಿ..

‘ವಲವಾರ’ ಸಿನಿಮಾ ನೋಡಲು ಹೋಗಿ: ‘ಯಾವ ನಾಯಿಗೆ ಬೇಕು ನಿನ್ನ ಟಿಕೆಟ್’ ಎನ್ನಿ
Valavara Movie
ಮಂಜುನಾಥ ಸಿ.
|

Updated on:Feb 11, 2026 | 3:57 PM

Share

‘ಕನ್ನಡದಲ್ಲಿ ಒಳ್ಳೆ ಸಿನಿಮಾಗಳು ಬರಲ್ಲ’ ಪರಭಾಷೆ ಸಿನಿಮಾಗಳನ್ನು ನೋಡುವ ಕನ್ನಡಿಗರ ಕಾಮನ್ ಡೈಲಾಗ್ ಇದು. ಆದರೆ ಒಳ್ಳೆ ಕನ್ನಡ ಸಿನಿಮಾಗಳು ಬಂದಾಗ ಈ ‘ಸಿನಿಮಾ ಪ್ರೇಮಿ’ಗಳು ಜಾಣ ಕುರುಡು ಪ್ರದರ್ಶಿಸುತ್ತಾರೆ. ಈಗ ಮತ್ತೊಮ್ಮೆ ಇದು ಸಾಬೀತಾಗಿದೆ. ಕನ್ನಡದಲ್ಲಿ ‘ವಲವಾರ’ ಹೆಸರಿನ ಸುಂದರ, ಅಪ್ಪಟ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿದೆ. ಆದರೆ ಮತ್ತದೆ ಸಮಸ್ಯೆ, ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ. ಆದರೆ ಕೆಲವು ನಿಜವಾದ ಸಿನಿಮಾ ಪ್ರೇಮಿಗಳು, ಕನ್ನಡ ಮನಸುಗಳು, ಅಪ್ಪಟ ಕನ್ನಡ ಸಿನಿಮಾಕ್ಕೆ ಎಂದಿನಂತೆ ಈ ಬಾರಿಯೂ ಬೆಂಬಲಿಸುತ್ತಿದ್ದು, ಜನರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ.

ತಮ್ಮ ಕನ್ನಡದ ಕೆಲಸಗಳು ಹಾಗೂ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಹೋರಾಟಗಳಿಂದ ಗುರುತಿಸಿಕೊಂಡಿರುವ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್​​ಬುಕ್​​ನಲ್ಲಿ ‘ವಲವಾರ’ ಸಿನಿಮಾ ಬಗ್ಗೆ ಪೊಸ್ಟ್ ಒಂದನ್ನು ಹಂಚಿಕೊಂಡಿದ್ದು, ಆ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ. ‘ವಲವಾರ’ ಸಿನಿಮಾ ವೀಕ್ಷಿಸಿರುವ ವೀರಕಪುತ್ರ ಶ್ರೀನಿವಾಸ್ ಅವರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದು, ಸಿನಿಮಾಕ್ಕೆ ತಾವೇ ಟಿಕೆಟ್ ಕೊಡಿಸುವುದಾಗಿ ಸಹ ಹೇಳಿದ್ದಾರೆ. ಆದರೆ ಅವರಿಂದ ಟಿಕೆಟ್ ಪಡೆಯುವ ಮುನ್ನ ಅವರ ಫೇಸ್​​ಬುಕ್​​ನಲ್ಲಿ ಬರೆದಿರುವ ಪೋಸ್ಟ್ ಒಮ್ಮೆ ಓದಿಕೊಳ್ಳಿ..

ವೀರಕಪುತ್ರ ಶ್ರೀನಿವಾಸ್ ಅವರ ಫೇಸ್​​ಬುಕ್ ಪೋಸ್ಟ್

ಯಾವ ನಾಯಿಗೆ ಬೇಕೋ ನಿನ್ನ ಟಿಕೇಟ್…

ಈ ಸಿನಿಮಾವನ್ನು ಗೆಲ್ಲಿಸಿಕೊಳ್ಳದಿದ್ದ ಮೇಲೆ, ಉತ್ತಮ ಸಿನಿಮಾಗಳು ಬರುತ್ತಿಲ್ಲ ಎಂದು ಆರೋಪಿಸುವ ಹಕ್ಕು ನಮಗಿಲ್ಲ. ಇದು ಸಿನಿಮಾವಲ್ಲ; 70-90 ರ ನಡುವಿನಲ್ಲಿ ಹಳ್ಳಿಯಲ್ಲಿ ಹುಟ್ಟಿದ ಪ್ರತಿ ಬಡವನ ಕತೆ! ಇಲ್ಲಿ ನಿಮ್ಮ ಅಮ್ಮ ನಿಮಗೆ ಹೊಸ ರೂಪದಲ್ಲಿ ಸಿಗುತ್ತಾರೆ. ನೀವಾಕೆಯನ್ನು ಅಪ್ಪಿ ಅಳುವಿರಿ. ನಿಮ್ಮ ಬಾಲ್ಯ ನಿಮಗೆ ಟನ್ ಗಟ್ಟಲೆ ವಾಪಸ್ ಸಿಗುತ್ತದೆ. ನೀವದನ್ನು ಅಪ್ಪಿ ನಗುವಿರಿ. ಆ ಊರು, ಆ ಕೆರೆ, ಆ ಹಸು, ಆ ಹೊಲ, ಆ ಕೋಳಿ, ಅದೊಂದು ಪೊದೆ… ಎಲ್ಲವೂ ನಮ್ಮದೇ! ಒಂದು ಫೀಲ್ ಗುಡ್ ಮೂವಿ.

ಇವತ್ತು ಸಂಜೆ 7.30ಕ್ಕೆ ವೇಗ ಸಿಟಿ ಮಾಲ್ನಲ್ಲಿ ಈ ಸಿನಿಮಾವನ್ನು ನಾನು ಮತ್ತೊಮ್ಮೆ ನಿಮ್ಮ ಜೊತೆ ನೋಡಬೇಕೆನಿಸಿದೆ. ಬರ್ತೀರಾ ಪ್ಲೀಸ್…? ಟಿಕೆಟ್ ನಾನೇ ಕೊಡಿಸುವೆ.

ಅಥವಾ

ಸಂಪತ್ತಿಗೆ ಸವಾಲ್ ಸಿನಿಮಾದ ಡಾ.ರಾಜ್ ಅವರ ಸ್ಟೈಲಿನಲ್ಲಿ ಯಾವ ನಾಯಿಗೇ ಬೇಕೋ ನಿನ್ನ ಟಿಕೆಟ್! ಯಾವ ನಾಯಿಗೆ ಬೇಕೋ… ಅಂತ ಬೈದಾದರೂ ಬಂದು ನಿಮ್ಮದೇ ಹಣದಲ್ಲಿ ಸಿನಿಮಾ ನೋಡಿ. ಒಟ್ನಲ್ಲಿ ನೋಡಿ! ಏಕೆಂದರೆ ಇದು ಕನ್ನಡಕ್ಕಾಗಿ ಮಾತ್ರವಲ್ಲ; ನಮಗಾಗಿಯೂ ಹೌದು. ಬರ್ತೀರಾ?

ವೀರಕಪುತ್ರ ಶ್ರೀನಿವಾಸ್ ಅವರ ಈ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ. ಚಿತ್ರಸಾಹಿತಿ, ನಿರ್ದೇಶಕ ಕವಿರಾಜ್, ಮಾಜಿ ಬಿಗ್​​ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಇನ್ನೂ ಹಲವಾರು ಮಂದಿ ವೀರಕಪುತ್ರ ಶ್ರೀನಿವಾಸ್ ಅವರ ಈ ಪೋಸ್ಟ್​​ ಅನ್ನು ಹಂಚಿಕೊಳ್ಳುತ್ತಿರುವ ಜೊತೆಗೆ ಸಿನಿಮಾ ಬಗ್ಗೆ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಸಹ ದಾಖಲಿಸುತ್ತಿದ್ದಾರೆ.

ಇದನ್ನೂ ಓದಿ:‘ವಲವಾರ’ ಸಿನಿಮಾ ವಿಮರ್ಶೆ; ಹಾಸ್ಯ, ಭಾವನೆಗಳ ಮಿಶ್ರಣ; ಬಾಲ್ಯ ನೆನಪಿಸೋ ಪಯಣ

ವಲವಾರ ಸಿನಿಮಾ ಬಗ್ಗೆ

ಸುನತ್ ಗೌಡ ಎಂಬುವರು ನಿರ್ದೇಶಿಸಿರುವ ‘ವಲವಾರ’ ಸಿನಿಮಾ ಅಪ್ಪಟ ಹಳ್ಳಿಗಾಡಿನ ಆಪ್ತವಾದ ಸಿನಿಮಾ. ಒಂದು ಹಸು ಹಾಗೂ ಇಬ್ಬರು ಮಕ್ಕಳು ಹಾಗೂ ತಂದೆಯ ನಡುವಿನ ಕತೆಯನ್ನು ಸಿನಿಮಾ ಒಳಗೊಂಡಿದೆ. ಹಲವಾರು ಮಂದಿ ‘ವಲವಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಒಳ್ಳೆಯ ಕನ್ನಡ ಸಿನಿಮಾಕ್ಕೆ ಇದೀಗ ಕನ್ನಡಿಗರ ಬೆಂಬಲ ಬೇಕಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Wed, 11 February 26

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!