AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾರ್ಜ್​ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್​ ಭಾರದ್ವಾಜ್

‘ಹೈನಾ’ ಮತ್ತು ‘ಹೇ ಪ್ರಭು’ ಸಿನಿಮಾಗಳ ಬಿಡುಗಡೆ ನಂತರ ಇನ್ನೆರಡು ಸಿನಿಮಾಗಳಿಗೆ ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ‘ಜಾರ್ಜ್​ಶೀಟ್’ ಮತ್ತು ‘ರಕ್ಕಿ’ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿವೆ. ಆ ಬಗ್ಗೆ ಚಿತ್ರತಂಡಗಳ ಕಡೆಯಿಂದ ಮಾಹಿತಿ ನೀಡಲಾಗಿದೆ. ಕ್ರೈಂ ಕಥಾಹಂದರ ‘ಜಾರ್ಜ್​ಶೀಟ್​’ ಸಿನಿಮಾದಲ್ಲಿ ಇರಲಿದೆ. ರಿಯಲ್ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ.

‘ಚಾರ್ಜ್​ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್​ ಭಾರದ್ವಾಜ್
Rakky Suresh, Venkat Bharadwaj, Ashika Somashekar
ಮದನ್​ ಕುಮಾರ್​
|

Updated on: Dec 18, 2025 | 4:27 PM

Share

ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ಬ್ಯಾಕ್ ಟು ಬ್ಯಾಕ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. 2025ರಲ್ಲಿ ಅವರು ಸೂಪರ್ ಫಾಸ್ಟ್ ಆಗಿ ಕೆಲಸ ಮಾಡಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ 2 ಸಿನಿಮಾಗಳು 2025ರಲ್ಲಿ ಬಿಡುಗಡೆ ಆದವು. ಅಲ್ಲದೇ ಇದೇ ವರ್ಷ ಅವರು ಇನ್ನೆರಡು ಸಿನಿಮಾಗಳ ಶೂಟಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೌದು, ವೆಂಕಟ್ ಭಾರದ್ವಜ್ ಆ್ಯಕ್ಷನ್-ಕಟ್ ಹೇಳಿದ ‘ಹೈನಾ’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಯಿತು. ಬಳಿಕ ನವೆಂಬರ್ ತಿಂಗಳಲ್ಲಿ ‘ಹೇ ಪ್ರಭು’ ಸಿನಿಮಾ ತೆರೆಕಂಡಿತು. ಈ ನಡುವೆಯೇ ಅವರು ‘ಚಾರ್ಜ್​ಶೀಟ್’ (Chargesheet) ಹಾಗೂ ‘ರಕ್ಕಿ’ ಸಿನಿಮಾಗಳ ಶೂಟಿಂಗ್ ಮುಗಿಸಿದ್ದಾರೆ.

‘ಚಾರ್ಜ್‌ಶೀಟ್’ ಸಿನಿಮಾದಲ್ಲಿ ಕ್ರೈಮ್ ಕಥಾಹಂದರ ಇದರಲಿದೆ. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ಮಾಡಲಾಗುತ್ತಿದೆ. ‘ಅರ್ಜುನ್ ಫಿಲ್ಮ್ಸ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿರುವ ಈ ಸಿನಿಮಾಗೆ ಈ ವರ್ಷ ಆಗಸ್ಟ್ ತಿಂಗಳಲ್ಲಿ ಶೂಟಿಂಗ್ ಮುಗಿಸಲಾಯಿತು. ಅದರ ಜೊತೆಗೆ ವೆಂಕಟ್ ಭಾರದ್ವಾಜ್ ಅವರು ಇನ್ನೊಂದು ಸಿನಿಮಾ ಕೈಗೆತ್ತಿಕೊಂಡರು.

ವೆಂಕಟ್ ಭಾರದ್ವಾಜ್ ನಿರ್ದೇಶನದ ಇನ್ನೊಂದು ಸಿನಿಮಾ ‘ರಕ್ಕಿ’. ಈ ಸಿನಿಮಾವನ್ನು ‘ಎಸ್‌ಎನ್‌ಆರ್ ಪ್ರೊಡಕ್ಷನ್ಸ್’ ಸಹಯೋಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಮಾಡಲಾಗಿದೆ. ರಕ್ಕಿ ಸುರೇಶ್, ಆಶಿಕಾ ಸೋಮಶೇಖರ್ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

2003ರಲ್ಲಿ ಬೆಂಗಳೂರು ನಗರದಲ್ಲಿ ನಡೆದ ಒಂದು ನೈಜ ಘಟನೆಯನ್ನು ಆಧಾರಿಸಿ ‘ಚಾರ್ಜ್‌ಶೀಟ್’ ಸಿನಿಮಾ ಸಿದ್ಧವಾಗುತ್ತಿದೆ. ಆ ಘಟನೆಯ ಪ್ರತ್ಯಕ್ಷ ಸಾಕ್ಷಿಯಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಅವರ ಜೀವನಾನುಭವಗಳು ಮತ್ತು ಅವರ ಕಾದಂಬರಿಯನ್ನು ಆಧರಿಸಿ ಸಿನಿಮಾ ಮೂಡಿಬರುತ್ತಿದೆ. ವೆಂಕಟ್ ಭಾರದ್ವಾಜ್ ಅವರು ಚಿತ್ರಕಥೆ, ಸಂಭಾಷಣೆಗಳು ಮತ್ತು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಆಸ್ಕರ್​​ಗೆ ಶಾರ್ಟ್​​ಲಿಸ್ಟ್ ಆದ ಭಾರತೀಯ ಸಿನಿಮಾ ‘ಹೋಮ್​​ಬೌಂಡ್’: ಮುಂದೇನು?

‘ಚಾರ್ಜ್‌ಶೀಟ್’ ಸಿನಿಮಾದಲ್ಲಿ ಸುಂದರ್ ರಾಜ್, ಹರ್ಷ್ ಅರ್ಜುನ್, ಅಮರ್, ಸತ್ಯಾ ರಾಮ್, ಡಾ. ಪ್ರಮೋದ್, ಡಾ. ಸುಧಾಕರ್ ಶೆಟ್ಟಿ, ಚೇತನ ಖೋಟ್, ರೂಪೇಶ್ ಹಾಗೂ ವೆಂಕಟ್ ಭಾರದ್ವಾಜ್ ಅಭಿನಯಿಸಿದ್ದಾರೆ. ಸಮೀರ್ ಕುಲಕರ್ಣಿ ಅವರು ಸಂಗೀತ ನೀಡಿದ್ದಾರೆ. ಪ್ರಮೋದ್ ಭಾರತೀಯ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಮೀಕ್ ವಿ. ಭಾರದ್ವಾಜ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.