AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B Saroja Devi Passes Away: ನಟಿ ಬಿ. ಸರೋಜಾದೇವಿ ನಿಧನ; ಆರೂವರೆ ದಶಕ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ

ಬಿ ಸರೋಜಾದೇವಿ ನಿಧನ: ಪ್ರಸಿದ್ಧ ಕನ್ನಡ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ತಮ್ಮ 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 'ನಟಸಾರ್ವಭೌಮ' ಅವರ ಕೊನೆಯ ಚಿತ್ರ. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

B Saroja Devi Passes Away: ನಟಿ ಬಿ. ಸರೋಜಾದೇವಿ ನಿಧನ; ಆರೂವರೆ ದಶಕ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ
ಸರೋಜಾ ದೇವಿ
ರಾಜೇಶ್ ದುಗ್ಗುಮನೆ
|

Updated on:Jul 14, 2025 | 10:30 AM

Share

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (B Saroja Devi) ಅವರು ಇಂದು (ಜುಲೈ 14) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.

ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು.  ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್​ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

ಇದನ್ನೂ ಓದಿ
Image
ಈ ನಟಿ ಜೊತೆ ಕದ್ದು ಮುಚ್ಚಿ ಓಡಾಡಿದ್ದ ಸಲ್ಮಾನ್ ಖಾನ್?
Image
ಸೂತಕದ ಮನೆಯಲ್ಲೂ ಸೆಲ್ಫಿ ಹುಚ್ಚು; ತಾಳ್ಮೆ ಕಳೆದುಕೊಂಡು ಕೂಗಾಡಿದ ರಾಜಮೌಳಿ
Image
ಕೋಟಾ ಶ್ರೀನಿವಾಸ್ ರಾವ್ ಕನ್ನಡದಲ್ಲಿ ನಟಿಸಿದ್ದ ಸಿನಿಮಾಗಳು ಯಾವುವು ಗೊತ್ತೆ?
Image
ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ; ಅನಾರೋಗ್ಯದಿಂದ ವಿಧಿವಶ

1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆಗ ಅವರಿಗೆ 17 ವರ್ಷ. ಆ ಬಳಿಕ ಆಫರ್​ಗಳು ಅವರನ್ನು ಹುಡುಕಿ ಬಂದವು. ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

ಮೇರು ನಟರಾದ ರಾಜ್​ಕುಮಾರ್, ಕಲ್ಯಾಣ್​ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ‘ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ‘ಪಂಡರಿ ಭಕ್ತಲು’, ‘ದಕ್ಷಯಜ್ಞಂ’,  ಹಿಂದಿಯಲ್ಲಿ  ‘ಆಶಾ’, ‘ಮೆಹಂದಿ ಲಗಾ ಕೆ ರಖನಾ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದರು.

90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಪುನೀತ್ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾ ದೇವಿ ಆಗಿಯೇ ಅವರು ಸಿನಿಮಾದಲ್ಲಿ ಕಾಣಿಸಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:09 am, Mon, 14 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ