ರಾಜ್ಯ-ರಾಷ್ಟ್ರ ಪ್ರಶಸ್ತಿ ಗೆದ್ದ ಕೋಡಳ್ಳಿ ಶಿವರಾಮ್ ನಿಧನ

|

Updated on: Sep 18, 2024 | 12:00 PM

ಕೋಡಳ್ಳಿ ಶಿವರಾಮ್ ಅವರು ಸೆಪ್ಟೆಂಬರ್ 17ರ ರಾತ್ರಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ‘ಗ್ರಹಣ’ ಚಿತ್ರದ ನಿರ್ಮಾಪಕರಲ್ಲಿ ಅವರು ಕೂಡ ಒಬ್ಬರಾಗಿದ್ದರು. ಹಲವು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿ ಅವರು ಹೆಸರು ಮಾಡಿದ್ದರು.   

ರಾಜ್ಯ-ರಾಷ್ಟ್ರ ಪ್ರಶಸ್ತಿ ಗೆದ್ದ ಕೋಡಳ್ಳಿ ಶಿವರಾಮ್ ನಿಧನ
ರಾಜ್ಯ-ರಾಷ್ಟ್ರ ಪ್ರಶಸ್ತಿ ಗೆದ್ದ ಕೋಡಳ್ಳಿ ಶಿವರಾಮ್ ನಿಧನ
Follow us on

ಕನ್ನಡ ಚಿತ್ರರಂಗದಲ್ಲಿ ಹಲವು ಭಿನ್ನ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಿಸಿ ನಂತರ ಬಣ್ಣದ ಲೋಕದಿಂದ ದೂರ ಉಳಿದ ಅನೇಕರು ಇದ್ದಾರೆ. ಅದೇ ರೀತಿ ಕೆಲವರು ಚಿತ್ರರಂಗದ ವಿವಿಧ ಕ್ಷೇತ್ರದಲ್ಲಿ ತೊಡಗಿಕೊಂಡವರಿದ್ದಾರೆ. ಈಗ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕೋಡಳ್ಳಿ ಶಿವರಾಮ್ ನಿಧನ ಹೊಂದಿದ್ದಾರೆ. ಇದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ.

1978ರಲ್ಲಿ ‘ಗ್ರಹಣ’ ಹೆಸರಿನ ಸಿನಿಮಾ ಬಂತು. ಈ ಚಿತ್ರಕ್ಕೆ ಕಥೆ ಬರೆದಿದ್ದು ಕೋಡಳ್ಳಿ ಶಿವರಾಮ್ ಅವರು. ಈ ಚಿತ್ರವನ್ನು ಟಿಎಸ್ ನಾಗಾಭರಣ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಕೋಡಳ್ಳಿ ಶಿವರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಅವರಿಗೆ ರಾಜ್ಯ ಹಾಗೂ ರಾಜ್ಯ, ರಾಷ್ಟ್ರ ಪ್ರಶಸ್ತಿಗಳು ಕೂಡ ಸಿಕ್ಕಿವೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲೂ ಅವರು ಇದ್ದರು.

ಇದನ್ನೂ ಓದಿ: ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ

ಕೋಡಳ್ಳಿ ಶಿವರಾಮ್ ಅವರು ಸೆಪ್ಟೆಂಬರ್ 17ರ ರಾತ್ರಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ‘ಗ್ರಹಣ’ ಚಿತ್ರದ ನಿರ್ಮಾಪಕರಲ್ಲಿ ಅವರು ಕೂಡ ಒಬ್ಬರಾಗಿದ್ದರು. ಹಲವು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿ ಅವರು ಹೆಸರು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.