‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ಪೋಸ್ಟರ್ ಬಿಡುಗಡೆ: ಚಂದನ್ ಶೆಟ್ಟಿ ಪಾತ್ರ ಗೌಪ್ಯ

Vidyarthi-Vidyarthiniyare: ನವ ಯುವಕ-ಯುವತಿಯರ ಕತೆ ಹೊಂದಿರುವ ‘ವಿದ್ಯಾರ್ಥಿ-ವಿದ್ಯಾರ್ಥಿನಿಯರೇ’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ಪೋಸ್ಟರ್ ಬಿಡುಗಡೆ: ಚಂದನ್ ಶೆಟ್ಟಿ ಪಾತ್ರ ಗೌಪ್ಯ

Updated on: Mar 01, 2024 | 10:20 PM

ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಮೋಷನ್ ಪೋಸ್ಟರ್ (Motion Poster) ಬಿಡುಗಡೆ ಮಾಡಲಾಗಿದೆ. ಕಲರ್​ಫುಲ್ ಆಗಿ, ಕ್ರಿಯಾತ್ಮಕವಾಗಿಯೂ ಇದೆ ಮೋಷನ್ ಪೋಸ್ಟರ್. ಹೆಸರೇ ಕೇಳಿದರೆ ಇದು ಯುವಕ-ಯುವತಿಯರ ಬಗೆಗಿನ ಪ್ರೀತಿ-ಪ್ರೇಮ, ಸ್ನೇಹದ ಕತೆಯುಳ್ಳ ಸಿನಿಮಾ ಎನಿಸುತ್ತದೆ. ಆದರೆ ನಿರ್ದೇಶಕರು ಹೇಳುವಂತೆ ನಿರೀಕ್ಷೆಗಳಿಗೆ ನಿಲುಕದ ವಸ್ತುವನ್ನು ಈ ಸಿನಿಮಾ ಒಳಗೊಂಡಿದೆಯಂತೆ. ಅಂದಹಾಗೆ ಈ ಸಿನಿಮಾ ನಿರ್ದೇಶನ ಮಾಡಿರುವುದು ಅರುಣ್ ಅಮುಕ್ತ.

ಈ ಹಿಂದೆ ಟೈಟಲ್ ಲಾಂಚ್ ಅನ್ನೂ ಸಹ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದ್ದ ಚಿತ್ರತಂಡ, ಇಂದು ಬೆಳಗ್ಗೆ ಪೋಸ್ಟರ್ ಹಾಗೂ ಸಂಜೆ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಇದುವರೆಗೂ ಈ ಸಿನಿಮಾದ ಪಾತ್ರವರ್ಗ ಕಾಣಿಸಿರಲಿಲ್ಲ. ಈ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಕೆಲ ಪಾತ್ರಗಳ ದರ್ಶನವಾಗಿದೆ. ಇದರಲ್ಲಿ ಚಂದನ್ ಶೆಟ್ಟಿ, ಭಾವನಾ ಅಪ್ಪು, ಅಮರ್, ಮನಸ್ವಿ, ವಿವಾನ್ ಸುನಿಲ್ ಪುರಾಣಿಕ್, ಅರವಿಂದ ರಾಜ್ ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇದರಲ್ಲಿ ನಾಲಕ್ಕು ಪಾತ್ರಗಳು ಈ ಪೋಸ್ಟರ್ ನಲ್ಲಿ ಕಾಣಿಸಿಕೊಂಡಿವೆ. ಅಂದಹಾಗೆ ಇದೊಂದು ಟೀನೇಜ್ ಕಲ್ಟ್ ಸಿನಿಮಾ. ಈಗಾಗಲೇ ಕಾಲೇಜು ಕೇಂದ್ರಿತವಾದ ಒಂದಷ್ಟು ಸಿನಿಮಾಗಳು ತೆರೆಗಂಡು ಗೆದ್ದಿವೆ. ಆ ಸಾಲಿನಲ್ಲಿ ಈ ಚಿತ್ರವನ್ನೂ ದಾಖಲಾಗುವಂತೆ ಮಾಡುವ ನಿಟ್ಟಿನಲ್ಲಿ ಚಿತ್ರತಂಡ ಶ್ರಮ ವಹಿಸುತ್ತಿದೆ.

ಇದನ್ನೂ ಓದಿ:ದಕ್ಷಿಣ ಭಾರತ ಸಿನಿಮಾದ ನಿರ್ಮಾಪಕನೊಟ್ಟಿಗೆ ಮಲಗಲು ಹೇಳಿದ್ದರು: ನಟಿ ಅಂಕಿತಾ

ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಲಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟದಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us