‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ

VijayRaghavendra-SpandanaVijayRaghavendra Wedding Anniversary: ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಕೆಫೆ ಕಾಫಿ ಡೇದಲ್ಲಿ ಸ್ಪಂದನಾ ಅವರನ್ನು ವಿಜಯ್ ನೋಡಿದ್ದರು. ಮೊದಲ ನೋಟದಲ್ಲೇ ಅವರಿಗೆ ಸ್ಪಂದನಾ ಇಷ್ಟವಾದರು. ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಪರಿಚಯ ಪ್ರೀತಿ ಆಯಿತು. ಇಬ್ಬರೂ 2007ರ ಆಗಸ್ಟ್ 26ರಂದು ಮದುವೆ ಆದರು.

‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ
ವಿಜಯ್-ಶೌರ್ಯ-ಸ್ಪಂದನಾ
Follow us
ರಾಜೇಶ್ ದುಗ್ಗುಮನೆ
|

Updated on:Aug 26, 2023 | 12:45 PM

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ (Spandana) ದಂಪತಿಗೆ ಇಂದು (ಆಗಸ್ಟ್ 26) ವಿವಾಹ ವಾರ್ಷಿಕೋತ್ಸವ. ಈ ವಿಶೇಷ ದಿನವನ್ನು ಇಬ್ಬರೂ ಸೆಲೆಬ್ರೇಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ, ವಿಧಿಯ ಆಟ ಬೇರೆಯದೇ ಇತ್ತು. ಆಗಸ್ಟ್ 6ರಂದು ಸ್ಪಂದನಾ ಥೈಲ್ಯಾಂಡ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಈ ನೋವು ವಿಜಯ್ ರಾಘವೇಂದ್ರ (Vijay Raghavendra) ಅವರಿಗೆ ಎಂದಿಗೂ ಮರೆಯಾಗುವಂಥದ್ದಲ್ಲ. ವಿವಾಹ ವಾರ್ಷಿಕೋತ್ಸವ ಆಚರಿಸಲು ಪತ್ನಿಯೇ ಇಲ್ಲ ಎಂಬುದನ್ನು ನೆನೆದು ವಿಜಯ್​ಗೆ ಬೇಸರ ಆಗಿದೆ. ಅವರು ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಕೆಫೆ ಕಾಫಿ ಡೇದಲ್ಲಿ ಸ್ಪಂದನಾ ಅವರನ್ನು ವಿಜಯ್ ನೋಡಿದ್ದರು. ಮೊದಲ ನೋಟದಲ್ಲೇ ಅವರಿಗೆ ಸ್ಪಂದನಾ ಇಷ್ಟವಾದರು. ಬಳಿಕ ಧೈರ್ಯದಿಂದ ಅವರನ್ನು ಮಾತನಾಡಿಸಿದರು. ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಪರಿಚಯ ಪ್ರೀತಿ ಆಯಿತು. ಬಳಿಕ ಕುಟುಂಬದವರ ಒಪ್ಪಿಗೆ ಪಡೆದ ಇಬ್ಬರೂ 2007ರ ಆಗಸ್ಟ್ 26ರಂದು ಮದುವೆ ಆದರು.

ಹಲವು ವರ್ಷಗಳ ಕಾಲ ವಿಜಯ್ ಹಾಗೂ ಸ್ಪಂದನಾ ಸಂಸಾರ ನಡೆಸಿದರು. ಇವರಿಗೆ ಶೌರ್ಯ ಹೆಸರಿನ ಮಗನಿದ್ದಾನೆ. ಹಾಯಾಗಿ ಸಂಸಾರ ನಡೆಸಿಕೊಂಡಿದ್ದ ವಿಜಯ್ ರಾಘವೇಂದ್ರ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ನೋವಿನಿಂದ ಅವರು ಸ್ಪಂದನಾ ಬಗ್ಗೆ ಭಾವುಕರಾಗಿ ಸಾಲುಗಳನ್ನು ಬರೆದು ಓದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

‘ಚಿನ್ನಾ.. ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ

ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ

ಬದುಕನ್ನು ಕಟ್ಟಿ ಸರ್ವಸ್ವವಾದೆ

ಉಸಿರಲ್ಲಿ ಬೆರೆತು ಜೀವಂತವಾದೆ

ಮುದ್ದಾದ ನಗುವಿನಲ್ಲಿದ್ದಿದ್ದ ಶಕ್ತಿ ಪರ್ವತದಷ್ಟು

ಮರೆಯದೆ.. ತೊರೆಯದೆ ಎದೆಗೊತ್ತಿ ಪ್ರೀತಿಸುವೆ

ಶೌರ್ಯನಲ್ಲಿ ನಾನಿನ್ನ ಬಿಗಿದಪ್ಪುವಷ್ಟು..

ಇದನ್ನೂ ಓದಿ: ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ

ವಿಜಯ್ ರಾಘವೇಂದ್ರ ಹಂಚಿಕೊಂಡಿರುವ ಈ ವಿಡಿಯೋ ನೋಡಿ ಫ್ಯಾನ್ಸ್​​ ಕೂಡ ಭಾವುಕರಾಗಿದ್ದಾರೆ. ಅವರು ಬಗೆಬಗೆಯಲ್ಲಿ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ. ವಿಜಯ್ ರಾಘವೇಂದ್ರ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿರುವುದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:19 pm, Sat, 26 August 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್