‘ಮಹಾನ್’ ನಾಯಕನಾಗಿ ವಿಜಯ್ ರಾಘವೇಂದ್ರ, ಶುಭ ಕೋರಿದ ಶಿವಣ್ಣ
Vijay Raghavendra: ನಟ ವಿಜಯ್ ರಾಘವೇಂದ್ರ ಒಂದರ ಹಿಂದೊಂದರಂತೆ ಭಿನ್ನ ಕತೆಗಳುಳ್ಳ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಅವರ ನಟನೆಯ ಹೊಸ ಸಿನಿಮಾ ‘ಮಹಾನ್’ ಸೆಟ್ಟೇರುತ್ತಿದೆ. ಸಿನಿಮಾದ ಟೈಟಲ್ ಅನ್ನು ಇತ್ತೀಚೆಗಷ್ಟೆ ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ನಟ ವಿಜಯ್ ರಾಘವೇಂದ್ರ ಒಂದರ ಹಿಂದೊಂದು ಭಿನ್ನ ಕತೆಗಳ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ‘ರುದ್ರಾಭಿಷೇಕಂ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಅದರ ಬೆನ್ನಲ್ಲೆ ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರುದ್ರಾಭಿಷೇಕಂ’ ಹಳ್ಳಿ ಸೊಗಡಿನ, ಜನಪದ ಕತೆಯುಳ್ಳ ಥ್ರಿಲ್ಲರ್ ಸಿನಿಮಾ ಆಗಿದ್ದರೆ ಈಗ ‘ಮಹಾನ್’ ಎಂಬ ಭಿನ್ನ ಕತೆಯ ಸಿನಿಮಾ ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೆ ನಟ ಶಿವರಾಜ್ ಕುಮಾರ್ ಅವರು ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾಕ್ಕೆ ಶುಭ ಕೋರಿದ್ದಾರೆ.
ಕನ್ನಡದಲ್ಲಿ ಈಗಾಗಲೇ ಉತ್ತಮ ಸಿನಿಮಾ ನಿರ್ದೇಶಿಸಿರುವ ಪಿಸಿ ಶೇಖರ್ ನಿರ್ದೇಶನ ಮಾಡುತ್ತಿರುವ ಸಿನಿಮಾ ‘ಮಹಾನ್’ ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗಷ್ಟೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದ್ದಾರೆ.
‘ಮಹಾನ್’ ಸಿನಿಮಾ ರೈತರ ಕುರಿತಾದ ಕತೆಯನ್ನು ಒಳಗೊಂಡಿದೆ. ವಿಜಯ್ ರಾಘವೇಂದ್ರ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥ ಇದೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಹಾಗಾಗಿ ನಮ್ಮ ಸಿನಿಮಾಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಶೀಘ್ರದಲ್ಲಿಯೇ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಪಿ.ಸಿ ಶೇಖರ್ ಹೇಳಿದ್ದಾರೆ.
ಇದನ್ನೂ ಓದಿ:ಶೂಟಿಂಗ್ ಮುಗಿಸಿದ ‘ರುದ್ರಾಭಿಷೇಕಂ’, ವಿಭಿನ್ನ ಪಾತ್ರದಲ್ಲಿ ವಿಜಯ್ ರಾಘವೇಂದ್ರ
ನಿರ್ಮಾಪಕ ಪ್ರಕಾಶ್ ಮಾತನಾಡಿ, ‘ಮಹಾನ್’ ಸಿನಿಮಾ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಕತೆಯನ್ನು ಪ್ರತಿಬಿಂಬಿಸುತ್ತದೆ. ‘ಮಹಾನ್’ ಕೇವಲ ಸಿನಿಮಾ ಮಾತ್ರವೇ ಅಲ್ಲ, ಇದು ನಾವು ನಮ್ಮ ರೈತರಿಗೆ ನೀಡುವ ಗೌರವ. ನಮ್ಮ ನಿರ್ದೇಶಕ ಪಿಸಿ ಶೇಖರ್ ಅವರ ಕಲ್ಪನಾಶಕ್ತಿ ಹಾಗೂ ಕಥಾನಾಯಕತ್ವ ಈ ಚಿತ್ರದ ಶಕ್ತಿ ಮತ್ತು ನಮ್ಮ ಚಿತ್ರದ ನಾಯಕ ‘ಚಿನ್ನಾರಿ ಮುತ್ತ’ ವಿಜಯ್ ರಾಘವೇಂದ್ರ, ಈ ಪಾತ್ರಕ್ಕೆ ಇವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇರಲಾರರು. ಅವರ ಅಭಿನಯ, ಅವರ ಕನ್ನಡಿಗರ ಜೊತೆಗೆ ಇರುವ ಆತ್ಮೀಯತೆಯು ಈ ಪಾತ್ರಕ್ಕೆ ಜೀವ ತುಂಬಲಿದೆ ಎಂದು ನಿರ್ಮಾಪಕ ಪ್ರಕಾಶ್ ತಿಳಿಸಿದ್ದಾರೆ.
ವಿಜಯ್ ರಾಘವೇಂದ್ರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಎಫ್ಐಆರ್ 6 ಟು 6’, ‘ರಿಪ್ಪನ್ ಸ್ವಾಮಿ’, ‘ರುದ್ರಾಭಿಷೇಕಂ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಒಂದಕ್ಕಿಂತಲೂ ಒಂದು ಭಿನ್ನವಾದ ಕತೆಗಳಲ್ಲಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ