‘ಒಂದು ಸರಳ ಪ್ರೇಮಕತೆ’ಗೆ ವಿಜಯ್ ಸೇತುಪತಿ ಸಾಥ್

|

Updated on: Jan 22, 2024 | 10:31 PM

Vijay Sethupathi: ‘ಒಂದು ಸರಳ ಪ್ರೇಮಕತೆ’ ಸಿನಿಮಾಕ್ಕೆ ವಿಜಯ್ ಸೇತುಪತಿ ಬೆಂಬಲ ನೀಡಿದ್ದಾರೆ.

‘ಒಂದು ಸರಳ ಪ್ರೇಮಕತೆ’ಗೆ ವಿಜಯ್ ಸೇತುಪತಿ ಸಾಥ್
ಒಂದು ಸರಳ ಪ್ರೇಮಕತೆ
Follow us on

ವಿಜಯ್ ಸೇತುಪತಿ (Vijay Sethupathi) ಭಾರತದ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಡ ಸ್ಟಾರ್ ನಟರು ಸಹ ವಿಜಯ್ ಸೇತುಪತಿಯವರನ್ನು ತಮ್ಮ ಸಿನಿಮಾಗಳಿಗೆ ಹಾಕಿಕೊಳ್ಳಲು ಕಾಯುತ್ತಾರೆ. ಅವರಿಗಾಗಿ ತಮ್ಮ ಡೇಟ್ಸ್​ಗಳನ್ನು ಮುಂದು ಹಾಕಿಕೊಳ್ಳುತ್ತಾರೆ. ಅಂದಹಾಗೆ ವಿಜಯ್, ದೊಡ್ಡ ನಟನಾಗಿ ಹೆಸರು ಗಳಿಸುವ ಮುನ್ನವೇ ಕನ್ನಡದ ಸಿನಿಮಾ ಒಂದರಲ್ಲಿ ನಟಿಸಿದ್ದರು. ಇದೀಗ ಕನ್ನಡ ಸಿನಿಮಾ ಒಂದರ ಬೆಂಬಲಕ್ಕೆ ನಿಂತಿದ್ದಾರೆ ವಿಜಯ್ ಸೇತುಪತಿ.

ಸಿಂಪಲ್ ಸುನಿ ನಿರ್ದೇಶನ ಮಾಡಿ ವಿನಯ್ ರಾಜ್ ಕುಮಾರ್ ಹೀರೋ ಆಗಿ ನಟಿಸುತ್ತಿರುವ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಫೆಬ್ರವರಿ 8ಕ್ಕೆ ಈ ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಈಗಾಗಲೇ ಒಂದು ಸರಳ ಪ್ರೇಮಕಥೆ ಬಳಗ ಪ್ರಚಾರ ಆರಂಭಿಸಿದೆ. ಅದರ ಭಾಗವಾಗಿ ಇಂದು ನಾಯಕಿ ಸ್ವಾತಿಷ್ಠ ಕೃಷ್ಣನ್ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಲಾಗಿದೆ. ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಕ್ಯಾರೆಕ್ಟರ್ ಟೀಸರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

ಇದನ್ನೂ ಓದಿ:ನಾಯಕ ನಟನಾದ ವಿಜಯ್ ಸೇತುಪತಿ ಪುತ್ರ, ಈ ಹಿಂದೆ ನಟಿಸಿದ ಸಿನಿಮಾಗಳು ಯಾವುವು?

ಸ್ವಾತಿಷ್ಠ ಕೃಷ್ಣನ್, ಅನುರಾಗ ಎಂಬ ಪತ್ರಕರ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಾರಿಗೂ ಯಾವುದಕ್ಕೂ ಜಗ್ಗದೇ ಧೈರ್ಯವಾಗಿ ಮುನ್ನುಗ್ಗುವ ಪತ್ರಕರ್ತೆಯಾಗಿ ಪ್ರತ್ಯಕ್ಷರಾಗಿದ್ದಾರೆ ಕಾಣಿಸಿಕೊಂಡಿದ್ದಾರೆ. ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸೇರಿದಂತೆ ಒಂದಷ್ಟು ತಮಿಳು ಸಿನಿಮಾದಲ್ಲಿ ನಟಿಸಿರುವ ಸ್ವಾತಿಷ್ಠಗೆ ಒಂದು ಸರಳ ಪ್ರೇಮಕಥೆ ಮೊದಲ ಕನ್ನಡ ಸಿನಿಮಾ ಆಗಿದೆ.

ಇದೇ ಮೊದಲ ಬಾರಿಗೆ ದೊಡ್ಮನೆಯ ಹೀರೋ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ವಿನಯ್ ನಾಯಕನಾಗಿ ನಟಿಸಿರುವ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ನಾಯಕಿಯಾರಾಗಿ ನಟಿಸಿದ್ದಾರೆ.. ರಾಘವೇಂದ್ರ ರಾಜ್ ಕುಮಾರ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ. ಅಂದಹಾಗೇ ಈ ಸಿನಿಮಾಗೆ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ