ಪತಿಗಾಗಿ ಠಾಣೆ ಮೆಟ್ಟಿಲೇರಿದ ವಿಜಯಲಕ್ಷ್ಮಿ ದರ್ಶನ್

ದರ್ಶನ್ ಬಂಧನವಾಗಿ ಇಂದಿಗೆ ಎಂಟು ದಿನವಾಗಿದೆ. ಇಂದು (ಜೂನ್ 19) ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿಯನ್ನು ಕಾಣಲು ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.

ಪತಿಗಾಗಿ ಠಾಣೆ ಮೆಟ್ಟಿಲೇರಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್-ವಿಜಯಲಕ್ಷ್ಮಿ
Follow us
ಮಂಜುನಾಥ ಸಿ.
|

Updated on:Jun 19, 2024 | 1:35 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ (Darshan Thoogudeepa) ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಇಂದಿಗೆ ಎಂಟು ದಿನವಾಗಿದೆ. ಇಂದು (ಜೂನ್ 19) ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಬಂದಿದ್ದು, ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾರೆ.

ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್​ಮೆಂಟ್​ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು. ವಿಜಯಲಕ್ಷ್ಮಿ ಮಾತ್ರವೇ ಠಾಣೆಗೆ ಆಗಮಿಸಿದ್ದಾರೆ, ಪುತ್ರ ವಿನೀಶ್ ಬಂದಿಲ್ಲ ಎನ್ನಲಾಗುತ್ತಿದೆ. ದರ್ಶನ್​ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್​ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು.

ಇದನ್ನೂ ಓದಿ:ದರ್ಶನ್ ಪತ್ನಿಗೆ ಸಂಕಷ್ಟ, ವಿಜಯಲಕ್ಷ್ಮಿ ಎ1, ದರ್ಶನ್ ಎ3

ಘಟನೆ ನಡೆದ ದಿನ ದರ್ಶನ್ ಮನೆಗೆ ಬಂದಾಗ ನಡೆದ ಘಟನೆಗಳು, ಆಡಿದ ಮಾತು, ನಡೆದುಕೊಂಡ ರೀತಿ ಸೇರಿದಂತೆ ದರ್ಶನ್​ರ ಇತರೆ ಕೆಲವು ವಿಷಯಗಳ ಬಗ್ಗೆಯೂ ಪೊಲೀಸರು ವಿಜಯಲಕ್ಷ್ಮಿ ಅವರನ್ನು ಪ್ರಶ್ನಿಸಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ವಿಜಯಲಕ್ಷ್ಮಿ ಅವರು ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶದಲ್ಲಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಒಂದರಲ್ಲಿ ಪುತ್ರನೊಂದಿಗೆ ವಾಸವಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲಿ ದರ್ಶನ್ ಒಬ್ಬರೇ ಇದ್ದಾರೆ. ಅದೇ ಏರಿಯಾದಲ್ಲಿ ಪವಿತ್ರಾ ಗೌಡ ಅವರು ದೊಡ್ಡ ಮನೆಯೊಂದರಲ್ಲಿ ಪುತ್ರಿಯೊಂದಿಗೆ ವಾಸವಿದ್ದಾರೆ. ದರ್ಶನ್ ಆಗಾಗ್ಗೆ ವಿಜಯಲಕ್ಷ್ಮಿ ವಾಸವಿರುವ ಮನೆಗೆ ಹೋಗಿ ಬಂದು ಮಾಡುತ್ತಿರುತ್ತಾರೆ.

ಪವಿತ್ರಾ ಜೊತೆಗಿನ ದರ್ಶನ್​ ಸಂಬಂಧವನ್ನು ಕಠುವಾಗಿ ವಿರೋಧಿಸುತ್ತಲೇ ಬಂದಿದ್ದರು ವಿಜಯಲಕ್ಷ್ಮಿ. ಆದರೆ ಇತ್ತೀಚೆಗೆ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ಸಂಬಂಧ ಸರಿ ಹೋಗಿದೆ ಎನ್ನಲಾಗಿತ್ತು. ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರನನ್ನು ಕರೆದುಕೊಂಡು ವಿದೇಶ ಪ್ರವಾಸ ಮಾಡಿದ್ದರು, ಕೆಲವು ದೇವಾಲಯಗಳಿಗೆ ಭೇಟಿ ನೀಡಿದ್ದರು. ಹುಟ್ಟುಹಬ್ಬವನ್ನು ಒಟ್ಟಿಗೆ ಸೆಲೆಬ್ರೇಟ್ ಮಾಡಿದ್ದರು. ಆದರೆ ಎಲ್ಲವೂ ಸರಿಹೋಯ್ತು ಎಂದುಕೊಂಡಿರುವಾಗಲೇ ದರ್ಶನ್ ಈಗ ಪವಿತ್ರಾ ಗೌಡಗೆ ಸಂಬಂಧಿಸಿದ ಪ್ರಕರಣದಲ್ಲಿಯೇ ಕೊಲೆ ಆರೋಪ ಹೊತ್ತುಕೊಂಡಿದ್ದಾರೆ. ಆದರೂ ಸಹ ವಿಜಯಲಕ್ಷ್ಮಿ ಮತ್ತೊಮ್ಮೆ ದರ್ಶನ್ ಮಾಡಿರುವ ತಪ್ಪನ್ನು ಮನ್ನಿಸಿ, ಪತಿಗಾಗಿ ಠಾಣೆ ಮೆಟ್ಟಿಲೇರಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Wed, 19 June 24

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ