Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ

ಪವಿತ್ರಾಗಾಗಿ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್​ನ ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ-ದರ್ಶನ್
Follow us
|

Updated on:Jun 12, 2024 | 7:36 AM

ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.

ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಈಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ.

ಇದನ್ನೂ ಓದಿ: ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ದರ್ಶನ್ ಜೈಲು ಸೇರಿದ ದುಃಖದಲ್ಲೇ ಈ ರೀತಿ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 12 June 24

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!