ದರ್ಶನ್ (Darshan) ಅವರು ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರಾಫೈಲ್ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.
ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಈಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ.
ಇದನ್ನೂ ಓದಿ: ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್ನಲ್ಲಿ ನಿದ್ದೆ ಮಾಡದೆ ಕಳೆದ ನಟ
ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ದರ್ಶನ್ ಜೈಲು ಸೇರಿದ ದುಃಖದಲ್ಲೇ ಈ ರೀತಿ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:30 am, Wed, 12 June 24