Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನಿ ಎತ್ತುವ ಸಮಯ ಬಂದಿದೆ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Vijayalakshmi Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ಪತಿಯೊಟ್ಟಿಗಿನ ಚಿತ್ರಗಳನ್ನು ಹಂಚಿಕೊಂಡ ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ದನಿ ಎತ್ತುವ ಸಮಯ ಬಂದಿದೆ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
Follow us
ಮಂಜುನಾಥ ಸಿ.
|

Updated on:Jan 25, 2024 | 8:38 AM

ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ ಸಾಗಬೇಕು’ ಎಂದು ಕ್ಯಾಪ್ಷನ್ ನೀಡಿದ್ದರು.

ಬಳಿಕ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ‘ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕಾರ್ಯ ಆಕೆಯ ನೈತಿಕತೆ ಮತ್ತು ಆದರ್ಶ ಎಂಥಹದ್ದು ಎಂದು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಸಹ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಮತ್ತು ಲಾಭಕ್ಕಾಗಿ ಹತ್ತಿರವಾಗುತ್ತಾಳೆ. ಖುಷಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ ಈ ಚಿತ್ರಗಳು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಪತಿ ಸಂಜಯ್ ಸಿಂಗ್​ರ ಹಳೆಯ ಚಿತ್ರಗಳನ್ನು ವಿಜಯಲಕ್ಷ್ಮಿ ದರ್ಶನ್ ತಮ್ಮ ಸಂದೇಶದೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಉಮಾಪತಿ ಶ್ರೀನಿವಾಸ್ ಗೌಡ-ದರ್ಶನ್: ಮತ್ತೆ ಒಂದಾಗ್ತಾರಾ ‘ಮಾಜಿ ಗೆಳೆಯರು’?

ಪವಿತ್ರಾ ಗೌಡ ಹಾಗೂ ದರ್ಶನ್ ಕಳೆದ ಕೆಲ ವರ್ಷಗಳಿಂದಲೂ ಆತ್ಮೀಯವಾಗಿದ್ದರೆಂಬುದು ಗುಟ್ಟಲ್ಲ. ಆದರೆ ಹೀಗೆ ಬಹಿರಂಗವಾಗಿ ಪವಿತ್ರಾ ಗೌಡ, ದರ್ಶನ್​ ಜೊತೆಗಿನ ತಮ್ಮ ಚಿತ್ರಗಳನ್ನು ಹಂಚಿಕೊಂಡಿರಲಿಲ್ಲ. ಪುತ್ರಿ ಖುಷಿ ಗೌಡ ಹುಟ್ಟುಹಬ್ಬದಂದು ದರ್ಶನ್​ ಜೊತೆಗೆ ತಮ್ಮ ಪುತ್ರಿ ಹುಟ್ಟುಹಬ್ಬ ಆಚರಿಸಿದ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆಗ ವಿಜಯಲಕ್ಷ್ಮಿ ದರ್ಶನ್ ಅವರು ಯಾವುದೇ ಪೋಸ್ಟ್ ಹಾಕಿರಲಿಲ್ಲ. ಆದರೆ ಈಗ ಪವಿತ್ರಾ, ತಮ್ಮ ಹಾಗೂ ದರ್ಶನ್​ರ ಚಿತ್ರಗಳನ್ನು ಹಂಚಿಕೊಂಡ ಬಳಿಕ ವಿಜಯಲಕ್ಷ್ಮಿ ಅಸಧಾನ ಸ್ಪೋಟಿಸಿದ್ದು, ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಹಿಂದೆ ದರ್ಶನ್​ರ ಹುಟ್ಟುಹಬ್ಬದಂದು, ನಟಿ ಮೇಘಾ ಶೆಟ್ಟಿ, ದರ್ಶನ್ ಜೊತೆಗೆ ತಾವು ಹಾಗೂ ಪವಿತ್ರಾ ಗೌಡ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆಗ ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣದ ಮೂಲಕ ಅಸಮಾಧಾನ ಹೊರಹಾಕಿದ್ದರು. ಕೂಡಲೇ ಮೇಘಾ ಶೆಟ್ಟಿ ಆ ಚಿತ್ರಗಳನ್ನು ಡಿಲೀಟ್ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:36 am, Thu, 25 January 24

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್