ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಅಶ್ಲೀಲ ಕಾಮೆಂಟ್‌ಗಳ ವಿರುದ್ಧದ ದೂರಿನಲ್ಲಿ, ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂದು ಬಯಲಾಗಿದೆ. ನಕಲಿ ಐಡಿ ಬಳಸಿ ಕಾಮೆಂಟ್‌ ಮಾಡಿರುವ ಆರೋಪದ ಮೇಲೆ ಬಂಧಿತರು ಸದ್ಯ ಜೈಲಿನಲ್ಲಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ
ದರ್ಶನ್-ವಿಜಯಲಕ್ಷ್ಮೀ
Edited By:

Updated on: Mar 12, 2026 | 8:47 AM

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ.

ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್​ನಲ್ಲಿ ಆರು ಆರೋಪಿಗಳ ಹೇಳಿಕೆ ದಾಖಲು ಮಾಡಲಾಗಿದೆ. ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂಬ ವಿಷಯ ಬಹಿರಂಗವಾಗಿದೆ.
ಎಲ್ಲರೂ ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಓಪನ್ ಮಾಡಿದ್ದರು ಎಂಬ ವಿಷಯ ಗೊತ್ತಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ಟಾರ್ಗೆಟ್ ಮಾಡಿ ಬಂಧಿತರು ಕೆಟ್ಟ ರೀತಿಯಲ್ಲಿ ಫೋಟೋ ಹಾಕಿ ಕಾಮೆಂಟ್ ಮಾಡಿದ್ದರು ಎಂಬುದು ತಿಳಿದು ಬಂದಿದೆ. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ಅನ್ನು ವಶಪಡಿಸಿಕೊಂಡು ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕಾಮೆಂಟ್ ಮಾಡಿದ 12 ಐಡಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಕಂಪನಿಗಳಿಗೆ ಪತ್ರ ಬರೆಯಲಾಗಿದ್ದು, ಇನ್ನಷ್ಟೇ ಅವರಿಂದ ಉತ್ತರ ಬರಬೇಕಿದೆ. ಸದ್ಯ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸೋದಾಗಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ: 25 ವರ್ಷಗಳಲ್ಲಿ ದರ್ಶನ್ ಅಭಿಮಾನಿಗಳಿಗೆ ಎಂದಿಗೂ ಆ ಮಾತು ಹೇಳಿಲ್ಲ; ವಿಜಯಲಕ್ಷ್ಮೀ

ಇತ್ತ ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಜಾಮೀನು ಸಲ್ಲಿಕೆ ಮಾಡಿದ್ದಾರೆ. ಮಾರ್ಚ್ 24ಕ್ಕೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕಾಮೆಂಟ್ ಮಾಡಿದ ತಪ್ಪಿಗೆ 66 ದಿನಗಳಿಂದ ಆರು ಆರೋಪಿಗಳು ಜೈಲಿನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 8:45 am, Thu, 12 March 26

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us