ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್; ಬಂಧಿತರು ಯಾರು?
ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಅಶ್ಲೀಲ ಕಮೆಂಟ್‌ಗಳು ಮತ್ತು ಮೆಸೇಜ್‌ಗಳ ವಿರುದ್ಧ ಈಗ ಸಿಟ್ಟಿಗೆದ್ದಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನೀಡಿದ ದೂರಿನನ್ವಯ ಇಬ್ಬರನ್ನು ಬಂಧಿಸಲಾಗಿದೆ. ಐಪಿ ಅಡ್ರೆಸ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲಾಗಿದ್ದು, ಇಂತಹ ಸೈಬರ್ ಕಿರುಕುಳಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಇದು ನೀಡಿದೆ.

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬರೋ ಅಶ್ಲೀಲ ಕಮೆಂಟ್‌ಗಳು, ಮೆಸೇಜ್ಗಳನ್ನು ಸೆಲೆಬ್ರಿಟಿಗಳು ಮೊದಲು ಸಹಿಸಿಕೊಳ್ಳುತ್ತಿದ್ದರು. ಆದರೆ, ಈಗ ಇದರ ವಿರುದ್ಧ ಸಿಟ್ಟಿಗೇಳುತ್ತಿದ್ದಾರೆ. ಅನೇಕರು ಈ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಾರೆ. ರಮ್ಯಾ ಅವರು ಇದೇ ರೀತಿ ಮಾಡಿದ್ದರು. ಆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ಕೂಡ ಅಶ್ಲೀಲ ಕಮೆಂಟ್ ಬಗ್ಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು. ಇದರ ವಿರುದ್ಧ ಅವರು ಪೊಲೀಸರಿಗೆ ದೂರು ನೀಡಿದ್ದರು. ‘ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಆರೋಪಿಸಿದ್ದರು.ಈ ಬೆನ್ನಲ್ಲೇ ಇಬ್ಬರ ಬಂಧನ ನಡೆದಿದೆ.
ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಬಂಧಿತರು. ಇಬ್ಬರೂ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ್ದರು. ಇವರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ
ತಪ್ಪಿಸಿಕೊಳ್ಳಲು ನಡೆದಿತ್ತು ಪ್ರಯತ್ನ
ಅಶ್ಲೀಲ ಪದಗಳಿಂದ ನಿಂದನೆ ನೋಡಿ ಸಹಿಸದ ವಿಜಯಲಕ್ಷ್ಮೀ ಅವರು ದೂರು ದಾಖಲು ಮಾಡಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಇವರು, ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದರು. ಈ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ, ಐಪಿ ಅಡ್ರೆಸ್ ಮೂಲಕ ಇವರ ಮೂಲ ಪತ್ತೆ ಹಚ್ಚಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೆ ಇವರು ಯಾವ ನಟನ ಅಭಿಮಾನಿಗಳು ಎಂಬುದು ಇನ್ನೂ ತಿಳಿದಿಲ್ಲ.
(ವರದಿ: ಪ್ರಜ್ವಲ್ ಎನ್ವೈ)
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 12:20 pm, Fri, 2 January 26




