AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’

ಕಂಠೀರವ ಸ್ಟುಡಿಯೋದಲ್ಲಿ ಕೋರ್ಟ್ ಸೆಟ್ ಹಾಕಿ ‘ಪಾರ್ಥನ್ ಪರಪಂಚ’ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಶ್ರೀಹರ್ಷ ಎಂ.ಎನ್. ನಿರ್ದೇಶನದ ಈ ಸಿನಿಮಾದಲ್ಲಿ ವಿಕಾಶ್ ಉತ್ತಯ್ಯ, ಮಂದಾರಾ ಮುಂತಾದವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ರಂಗಾಯಣ ರಘು ಅವರು ಲಾಯರ್ ಪಾತ್ರ ಮಾಡುತ್ತಿದ್ದಾರೆ.

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’
Parthan Parapancha Movie Team
ಮದನ್​ ಕುಮಾರ್​
|

Updated on: Jan 26, 2026 | 7:29 PM

Share

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಪಾರ್ಥನ್ ಪರಪಂಚ’ ಸಿನಿಮಾಗೆ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೋರ್ಟ್ ಸೆಟ್ ಹಾಕಲಾಗಿದೆ. ಅದರಲ್ಲೇ ಸುದ್ದಿಗೋಷ್ಠಿ ಮಾಡಲಾಯಿತು. ಈ ವೇಳೆ ನಿರ್ದೇಶಕ ಶ್ರೀಹರ್ಷ ಮಾತನಾಡಿದರು. ‘ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಇರುವ ಕೋರ್ಟ್ ರೂಮ್ ಡ್ರಾಮಾ. ರಂಗಾಯಣ ರಘು ಅವರು ಡಿಫೆನ್ಸ್ ಲಾಯರ್ ಹಾಗೂ ಸೀತಾ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಪಾತ್ರ ಮಾಡುತ್ತಿದ್ದಾರೆ. ಇಡೀ ಚಿತ್ರದ ಕಥೆ ಬೆಂಗಳೂರಲ್ಲಿ ನಡೆಯುತ್ತದೆ’ ಎಂದು ಅವರು ಹೇಳಿದರು.

ಹೀರೋ ವಿಕಾಶ್ ಅವರು ಮಾತನಾಡಿ, ‘ಇಂದಿನ ಕಾಲಕ್ಕೆ ಹೊಂದುವ ಕಥೆ ಇದು. ರಿಯಾಲಿಟಿಗೆ ಹತ್ತಿರವಾದ ಕಂಟೆಂಟ್ ಹೊಂದಿದೆ. ಒಂದು ಕೇಸ್ ಹೇಗೆ ತಿರುವುಗಳನ್ನು ಪಡೆಯುತ್ತಾ ಹೋಗುತ್ತದೆ ಎಂಬುದನ್ನು ನಿರ್ದೇಶಕರು ಬಹಳ ಚೆನ್ನಾಗಿ ಹೇಳುತ್ತ ಹೋಗಿದ್ದಾರೆ’ ಎಂದರು. ‘ಬ್ಲ್ಯಾಂಕ್’ ಸಿನಿಮಾ ಖ್ಯಾತಿಯ ನಟಿ ಮಂದಾರ ಅವರು ಈ ಸಿನಿಮಾದಲ್ಲಿ ಜೆನ್​ ಜೀ ಹುಡುಗಿಯಾಗಿ ನಟಿಸುತ್ತಿದ್ದಾರೆ.

ರಂಗಾಯಣ ರಘು ಮಾತನಾಡಿ, ‘ನಿರ್ದೇಶಕ ಹರ್ಷ ಈವರೆಗೆ ಯಾರೂ ಗೆಸ್ ಮಾಡಿರದಂಥ ಘಟನೆಯನ್ನು ಯೋಚನೆ ಮಾಡಿದ್ದಾರೆ. ಒಂದು ಕ್ಲೂ ಹಿಂದೆ ಹೋದಾಗ ಏನೇನಾಗುತ್ತೆ ಅನ್ನೋದನ್ನು ಚೆನ್ನಾಗಿ ಹೇಳುತ್ತಿದ್ದಾರೆ. ಟಗರು, ಅಜ್ಞಾತವಾಸಿ, ಶಾಖಾಹಾರಿ ನಂತರ ಇದು ನನಗೆ ಬೇರೆ ರೀತಿಯ ಪಾತ್ರ’ ಎಂದು ಹೇಳಿದರು. ಛಾಯಾಗ್ರಹಾಕ ಜೈಆನಂದ್ ಮಾತನಾಡಿ, ‘45 ದಿನಗಳ ಶೂಟಿಂಗ್ ಪ್ಲಾನ್ ಇದೆ. 25 ದಿನ ಕೋರ್ಟ್ ಹಾಲ್​ನಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ’ ಎಂದರು.

ಇದನ್ನೂ ಓದಿ: ವಿಷ್ಣುಗೆ ವಿಶೇಷ ಗೌರವ ಸಲ್ಲಿಸಿದ ವಿಕಾಶ್ ಉತ್ತಯ್ಯ

‘ಪಾರ್ಥನ್ ಪರಪಂಚ’ ಸಿನಿಮಾಗೆ ಅನಂತ ಆರ್ಯನ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ನಾಲ್ಕು ಹಾಡುಗಳು ಈ ಸಿನಿಮಾದಲ್ಲಿ ಇರಲಿವೆ. ಇಂದೂ ನಾಗರಾಜ್, ಶ್ರೀಹರ್ಷ ಬೆಳ್ಮಣ್ಣು ಹಾಡಿದ್ದಾರೆ. ಜಸ್ಕರಣ್ ಸಿಂಗ್ ಸಹ ಒಂದು ಗೀತೆ ಹಾಡಲಿದ್ದಾರೆ’ ಎಂದು ಅನಂತ ಆರ್ಯನ್ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು
ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು