‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್
Jacqueline Fernandez: ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಕ್ರಾಂತ್ ರೋಣ’ ಸಿನಿಮಾ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಸೆಪ್ಟೆಂಬರ್ 25ರ ಒಳಗೆ ಹೇಳಿಕೆ ದಾಖಲಿಸಲು ಸೂಚಿಸಿದೆ. ಇತ್ತೀಚೆಗೆ ಅವರು ದೆಹಲಿಯ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ ಐದು ಗಂಟೆಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವಿಚಾರಣೆ ವೇಳೆ ಎರಡನೇ ಬಾರಿ ಮತ್ತೆ ಬರುವಂತೆ ಸಮನ್ಸ್ ನೀಡುತ್ತೇವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿತ್ತು.
ಸುಕೇಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.
ಬಾಲಿವುಡ್ನಲ್ಲಿ ಸಖತ್ ಫೇಮಸ್ ಆಗಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.
ಇದನ್ನೂ ಓದಿ: ಗಡಂಗ್ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್ ಫರ್ನಾಂಡಿಸ್; ವಿಕ್ರಾಂತ್ ರೋಣದಲ್ಲಿ ವಿಶೇಷ ಪಾತ್ರ
ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ