200 ಕೋಟಿ ರೂ. ವಂಚನೆ ಕೇಸ್​; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಂಕಷ್ಟ

ಕೆಲವೇ ದಿನಗಳ ಹಿಂದೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಈಗ ಅವರು ವಂಚನೆ ಪ್ರಕರಣದಲ್ಲಿ ವಿಚಾರಣೆ ಎದುರಿಸುವ ಪರಿಸ್ಥಿತಿ ಬಂದಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

200 ಕೋಟಿ ರೂ. ವಂಚನೆ ಕೇಸ್​; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಂಕಷ್ಟ
ಜಾಕ್ವೆಲಿನ್ ಫರ್ನಾಂಡಿಸ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 25, 2021 | 4:36 PM

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಜನಪ್ರಿಯ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಅಷ್ಟಕ್ಕೂ ಜಾಕ್ವೆಲಿನ್​ ಫರ್ನಾಂಡಿಸ್​ ಮಾಡಿರುವ ತಪ್ಪೇನು? ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಮೇಲೂ ಅನುಮಾನ ಎದುರಾಗಿದೆ. ಹಾಗಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಮೂಲಕ ಜಾಕ್ವೆಲಿನ್​ ಅವರು ಬಾಲಿವುಡ್​ನಲ್ಲಿ ಭಾರಿ ಬೇಡಿಕೆಯ ನಟಿಯಾಗಿದ್ದಾರೆ. ಸಲ್ಮಾನ್​ ಖಾನ್​ ವಲಯದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಈಗ ಅವರ ಮೇಲೆ ವಂಚನೆ ಆರೋಪ ಕೇಳಿಬಂದಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಜಾಕ್ವೆಲಿನ್​ ಅವರನ್ನು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಇಂದು (ಸೆ.25) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲ ಎಂಬುದು ತಿಳಿದುಬಂದಿದೆ. ಅವರ ವಿಚಾರಣೆ ದಿನಾಂಕ ಮುಂದೂಡಿಕೆ ಆಗಿದೆಯೋ ಅಥವಾ ಅವರು ವಿಚಾರಣೆಗೆ ಗೈರಾಗಿದ್ದಾರೋ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

ಜಾಕ್ವೆಲಿನ್ ಜೊತೆಗಿನ ನೆಚ್ಚಿನ ಚಿತ್ರಗಳನ್ನು ಹಂಚಿಕೊಂಡ ಕಿಚ್ಚ ಸುದೀಪ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ