Hey Fakira: ಮತ್ತೊಂದು ಹಾಡಿನ ಮೂಲಕ ಸದ್ದು ಮಾಡಲು ಸಜ್ಜಾದ ‘ವಿಕ್ರಾಂತ್​ ರೋಣ’ ಸಿನಿಮಾ

Vikrant Rona: ಜುಲೈ 12ರಂದು ಸಂಜೆ 5 ಗಂಟೆಗೆ ‘ಹೇ ಫಕೀರಾ..’ ಹಾಡು ರಿಲೀಸ್​ ಆಗಲಿದೆ. ಈ ಸಾಂಗ್​ ಬಗ್ಗೆ ಅಭಿಮಾನಿಗಳಲ್ಲಿ ಕಾತರ ಮೂಡಿದೆ.

Hey Fakira: ಮತ್ತೊಂದು ಹಾಡಿನ ಮೂಲಕ ಸದ್ದು ಮಾಡಲು ಸಜ್ಜಾದ ‘ವಿಕ್ರಾಂತ್​ ರೋಣ’ ಸಿನಿಮಾ
ನಿರೂಪ್ ಭಂಡಾರಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 11, 2022 | 3:00 PM

ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ತಂಡದಿಂದ ಪ್ರತಿ ದಿನವೂ ಒಂದಿಲ್ಲೊಂದು ಅಪ್​ಡೇಟ್​ ಸಿಗುತ್ತಿದೆ. ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹಲವು ಕಾರಣಗಳಿಂದಾಗಿ ‘ವಿಕ್ರಾಂತ್​ ರೋಣ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಎರಡು ಹಾಡುಗಳು (Vikrant Rona Songs) ಗಮನ ಸೆಳೆದಿವೆ. ಈಗ ಇನ್ನೊಂದು ಹಾಡಿನ ಮೂಲಕ ಸದ್ದು ಮಾಡಲು ತಯಾರಿ ನಡೆದಿದೆ. ‘ಹೇ ಫಕೀರಾ..’ ಎಂಬ ಮೂರನೇ ಸಾಂಗ್​ ಬಿಡುಗಡೆಗೆ ಸಮಯ ನಿಗದಿ ಆಗಿದೆ. ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಟ್ವೀಟ್​ ಮಾಡಿದ್ದಾರೆ.

ನಿರ್ದೇಶಕ ಅನೂಪ್ ಭಂಡಾರಿ ಅವರು ಬಹಳ ಕಾಳಜಿಯಿಂದ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಅವರ ಕಲ್ಪನೆಯ ಲೋಕವನ್ನು ತೆರೆಗೆ ತರಲು ನಿರ್ಮಾಪಕ ಜಾಕ್​ ಮಂಜು ಹಣ ಹೂಡಿದ್ದಾರೆ. ಪ್ರಬಲವಾದ ತಂತ್ರಜ್ಞರ ತಂಡ ಈ ಚಿತ್ರಕ್ಕಾಗಿ ಶ್ರಮಿಸಿದೆ. ಅದರಲ್ಲೂ ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ರಾರಾ ರಕ್ಕಮ್ಮ..’ ಹಾಗೂ ‘ರಾಜಕುಮಾರಿ…’ ಹಾಡುಗಳು ಜನಮನ ಗೆದ್ದಿವೆ. ಈಗ ಮೂರನೇ ಗೀತೆ ಹೊರಬರುತ್ತಿದೆ.

ಇದನ್ನೂ ಓದಿ
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Jacqueline Fernandez: ಸೆನ್ಸೇಶನ್ ಸೃಷ್ಟಿಸಿದ ‘ರಾ ರಾ ರಕ್ಕಮ್ಮ’; ಕನ್ನಡದಲ್ಲೇ ಧನ್ಯವಾದ ಹೇಳಿದ ಜಾಕ್ವೆಲಿನ್​
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

ಜುಲೈ 12ರಂದು ಸಂಜೆ 5 ಗಂಟೆಗೆ ‘ಹೇ ಫಕೀರಾ..’ ಹಾಡು ರಿಲೀಸ್​ ಆಗಲಿದೆ. ಈ ಗೀತೆಯಲ್ಲಿ ನಟ ನಿರೂಪ್​ ಭಂಡಾರಿ ಹೈಲೈಟ್​ ಆಗಲಿದ್ದಾರೆ ಎಂಬುದಕ್ಕೆ ಪೋಸ್ಟರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಅವರ ಪಾತ್ರದ ಬಗ್ಗೆ ಹೆಚ್ಚಿನ ಸುಳಿವು ಸಿಗಬಹುದು ಎಂದು ಫ್ಯಾನ್ಸ್​ ನಿರೀಕ್ಷಿಸಿದ್ದಾರೆ. ಇನ್ನುಳಿದ ಹಾಡುಗಳನ್ನು ನೋಡಲು ಕೂಡ ಅಭಿಮಾನಿಗಳು ಕಾದಿದ್ದಾರೆ. ಜುಲೈ 28ರಂದು ‘ವಿಕ್ರಾಂತ್​ ರೋಣ’ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿಯಲ್ಲೂ ಕೂಡ ಚಿತ್ರ ರಿಲೀಸ್​ ಆಗಲಿದೆ.

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​, ನೀತಾ ಅಶೋಕ್​ ಮುಂತಾದವರು ಕೂಡ ನಟಿಸಿದ್ದಾರೆ. ಅದ್ದೂರಿ ಸೆಟ್​ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗಿದೆ. ಹಲವು ರಾಜ್ಯಗಳಿಗೆ ತೆರಳಿ ಚಿತ್ರತಂಡ ಭರ್ಜರಿಯಾಗಿ ಪ್ರಚಾರ ಮಾಡುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಮೂಡಿಬಂದಿರುವುದು ವಿಶೇಷ. ಹಾಗಾಗಿ ನಿರೀಕ್ಷೆ ಜೋರಾಗಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ