AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್

‘ವಿಕ್ರಾಂತ್​ ರೋಣ’ ಚಿತ್ರ ಇಷ್ಟೊಂದು ಹೈಪ್ ಪಡೆಯಲು ಹಲವು ಕಾರಣ ಇದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸುದೀಪ್ ಹೆಸರು ಮಾಡಿದ್ದಾರೆ. ಈ ಚಿತ್ರ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗುತ್ತಿದೆ.

Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್
TV9 Web
| Edited By: |

Updated on:Jun 23, 2022 | 5:27 PM

Share

ಸುದೀಪ್ ನಟನೆಯ (Kichcha Sudeep) ‘ವಿಕ್ರಾಂತ್​ ರೋಣ’ ಸಿನಿಮಾ  ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ರಂಗಿತರಂಗ’ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಕಿಚ್ಚ ಸುದೀಪ್ ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಸಿನಿಮಾ ಶೂಟಿಂಗ್ ಆರಂಭವಾದಾಗಲೇ ಸಾಕಷ್ಟು ನಿರೀಕ್ಷೆ ಇತ್ತು. ಈಗ ಟ್ರೇಲರ್ ನೋಡಿದ ಅಭಿಮಾನಿಗಳಿಗೆ ಈ ನಿರೀಕ್ಷೆ ದುಪ್ಪಟ್ಟಾಗಿದೆ. ‘ವಿಕ್ರಾಂತ್​ ರೋಣ’ ಚಿತ್ರದ ಟ್ರೇಲರ್ (Vikrant Rona Trailer) ಇಂದು (ಜೂನ್ 23) ರಿಲೀಸ್ ಆಗಿದೆ. ಚಿತ್ರ ಹೇಗಿರಲಿದೆ ಎನ್ನುವುದಕ್ಕೆ ಈ ಟ್ರೇಲರ್ ಸಾಕ್ಷ್ಯ ಒದಗಿಸಿದೆ.

‘ವಿಕ್ರಾಂತ್​ ರೋಣ’ ಚಿತ್ರ ಇಷ್ಟೊಂದು ಹೈಪ್ ಪಡೆಯಲು ಹಲವು ಕಾರಣ ಇದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸುದೀಪ್ ಹೆಸರು ಮಾಡಿದ್ದಾರೆ. ಈ ಚಿತ್ರ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗುತ್ತಿದೆ. ಈ ಚಿತ್ರ 3ಡಿಯಲ್ಲಿ ಮೂಡಿ ಬರುತ್ತಿದೆ. ಕನ್ನಡ ಚಿತ್ರರಂಗದ ಪಾಲಿಗೆ 3ಡಿ ಸಿನಿಮಾಗಳು ಅಪರೂಪವೇ. ಈ ಕಾರಣದಿಂದಲೂ ‘ವಿಕ್ರಾಂತ್​ ರೋಣ’ ವಿಶೇಷ ಎನಿಸಿಕೊಂಡಿದೆ.

ಇದನ್ನೂ ಓದಿ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
Image
‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

‘ಅದೊಂದು ವಿಚಿತ್ರ ಊರು. ಆ ಊರಿನ ಜನ ಭಯಾನಕ ಕಥೆಯನ್ನು ಮುಚ್ಚಿಡಲು ನೋಡುತ್ತಿದ್ದರು. ಕಥೆಯನ್ನು ಮುಚ್ಚಿಡಬಹುದು, ಆದರೆ ಭಯವನ್ನು ಅಲ್ಲ. ಆ ಕಥೆ ಮತ್ತೆ ಶುರುವಾಯಿತು. ಆ ಗುಮ್ಮ ಮತ್ತೆ ಬಂದ’ ಎಂಬ ಸಾಲುಗಳೊಂದಿಗೆ ‘ವಿಕ್ರಾಂತ್ ರೋಣ’ ಚಿತ್ರದ ಟ್ರೇಲರ್ ಆರಂಭ ಆಗುತ್ತದೆ. ಈ ವಿಚಿತ್ರ ಊರಿಗೆ ನಿರೂಪ್ ಭಂಡಾರಿ ಪಾತ್ರ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಿಚ್ಚ ಸುದೀಪ್ ಪಾತ್ರ ಎಂಟ್ರಿ ಆಗುತ್ತದೆ. ನಂತರ ಏನೆಲ್ಲ ಆಗುತ್ತದೆ ಎಂಬುದನ್ನು ಸಿನಿಮಾದಲ್ಲಿ ಕಣ್ತುಂಬಿಕೊಳ್ಳಬೇಕು.

ಸಿನಿಮಾದ ಟ್ರೇಲರ್ ಸಖತ್ ಥ್ರಿಲ್ಲಿಂಗ್ ಆಗಿದೆ. ಹಲವು ಸಸ್ಪೆನ್ಸ್​ ಅಂಶಗಳನ್ನು ಈ ಟ್ರೇಲರ್ ಒಳಗೊಂಡಿದೆ. ಈ ಟ್ರೇಲರ್ ನೋಡಿದ ಸುದೀಪ್ ಫ್ಯಾನ್ಸ್ ಜುಲೈ 28ಕ್ಕಾಗಿ ಕಾದು ಕೂರುವಂತಾಗಿದೆ. ಹಿನ್ನೆಲೆ ಸಂಗೀತ ಕೂಡ ಟ್ರೇಲರ್​ನಲ್ಲಿ ಗಮನ ಸೆಳೆದಿದೆ. ಒಟ್ಟಾರೆ ಸಿನಿಮಾ ಹೇಗೆ ಮೂಡಿ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್

Vikrant Rona: ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿ ಮನದ ಮಾತು ತೆರೆದಿಟ್ಟ ಕಿಚ್ಚ ಸುದೀಪ್

Published On - 5:10 pm, Thu, 23 June 22

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!