AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Release Date: ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಟೀಸರ್​ ನೋಡಿ ಸುದೀಪ್​ ಫ್ಯಾನ್ಸ್​ ಖುಷ್​

Vikrant Rona Teaser: ಸುದೀಪ್​ ಅಭಿನಯದ ‘ವಿಕ್ರಾಂತ್​ ರೋಣ’ ಸಿನಿಮಾದ ಟೀಸರ್ ರಿಲೀಸ್​ ಆಗಿದೆ. ಈ ಟೀಸರ್​ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Vikrant Rona Release Date: ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಟೀಸರ್​ ನೋಡಿ ಸುದೀಪ್​ ಫ್ಯಾನ್ಸ್​ ಖುಷ್​
ಕಿಚ್ಚ ಸುದೀಪ್
TV9 Web
| Edited By: |

Updated on:Apr 02, 2022 | 10:31 AM

Share

ಕಿಚ್ಚ ಸುದೀಪ್ (Kichcha Sudeep)​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾದ ಹೊಸ ಟೀಸರ್​ ಬಿಡುಗಡೆ ಆಗಿದೆ. ಈ ಮೊದಲೇ ತಿಳಿಸಿದಂತೆ ಇಂದು (ಏ.2) ಬೆಳಗ್ಗೆ 9.55ಕ್ಕೆ ಟೀಸರ್​ ರಿಲೀಸ್​ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್​ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್​ ರೋಣ’ ಟೀಸರ್​ (Vikrant Rona Teaser) ರಿಲೀಸ್​ ಮಾಡಿದ್ದಾರೆ. ಈ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು.28ರಂದು ರಿಲೀಸ್​ ಆಗಲಿದೆ. ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಹೊಸ ಡೇಟ್​ ತಿಳಿಯಲು ಸುದೀಪ್​ ಫ್ಯಾನ್ಸ್​ ಕಾದು ಕುಳಿತಿದ್ದರು. ಅವರಿಗೆಲ್ಲ ಈ ಟೀಸರ್​ ಮೂಲಕ ಗುಡ್​ ನ್ಯೂಸ್​ ನೀಡಲಾಗಿದೆ. ಜು.28ರಂದು ‘ವಿಕ್ರಾಂತ್​ ರೋಣ’ (Vikrant Rona) ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್​ ಗೆಟಪ್​ನಲ್ಲಿ ಸುದೀಪ್​ ಕಾಣಿಸಿಕೊಂಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ 3ಡಿ ವರ್ಷನ್​ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್​ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್​ ಲಾಲ್​, ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ಇಂಗ್ಲಿಷ್​ನಲ್ಲಿ ವೀರೇಂದ್ರ ಸೆಹ್ವಾಗ್​ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಟೀಸರ್​ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಒಂದು ದೀರ್ಘವಾದ ಮತ್ತು ಸುಂದರ ಪಯಣದ ಬಳಿಕ ಈ ವಿಷಯ ತಿಳಿಸಲು ಖುಷಿ ಆಗುತ್ತಿದೆ. ವಿಕ್ರಾಂತ್​ ರೋಣ ಸಿನಿಮಾ ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ’ ಎಂದು ಬರೆದುಕೊಳ್ಳುವ ಮೂಲಕ ಕನ್ನಡ ಅವತರಣಿಕೆಯ ಟೀಸರ್ ಅನ್ನು ಕಿಚ್ಚ ಸುದೀಪ್​ ಅವರು ಬಿಡುಗಡೆ ಮಾಡಿದ್ದಾರೆ.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಅವರು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಬೃಹತ್​ ಸೆಟ್​ಗಳನ್ನು ನಿರ್ಮಿಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಕಾಡಿನ ಸೆಟ್​ನಲ್ಲಿ ಬಹುತೇಕ ಶೂಟಿಂಗ್​ ನಡೆದಿದೆ. ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸದ್ದು ಮಾಡುತ್ತಲೇ ಇದೆ. ದುಬೈನ ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡುವ ಮೂಲಕ ಎಲ್ಲರ ಗಮನ ಸೆಳೆಯಲಾಗಿತ್ತು. ಈಗ ಹೊಸ ಟೀಸರ್​ ನೋಡಿದ ಬಳಿಕ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುವಂತಾಗಿದೆ.

ಇದನ್ನೂ ಓದಿ:

ರಾಯರ ಸನ್ನಿಧಿಯಲ್ಲಿ ನಟ ‘ಕಿಚ್ಚ’ ಸುದೀಪ್​; ಇಲ್ಲಿದೆ ವಿಡಿಯೋ

‘ಯಾಕ್ರಿ ನಿಮಗೆ ಇಷ್ಟು ಗಾಂಚಲಿ ಅಂತ ಕೇಳ್ತಾರೆ, ಎಲ್ಲವೂ ಇವರಿಂದಾನೆ’: ವೇದಿಕೆಯಲ್ಲಿ ಸುದೀಪ್​ ಓಪನ್​ ಮಾತು

Published On - 10:06 am, Sat, 2 April 22

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ