Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ

Kichcha Sudeep: ಕಿಚ್ಚ ಸುದೀ​ಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿದೆ. ಹಲವಾರು ಚಿತ್ರಮಂದಿರಗಳಲ್ಲಿ ಬೆಳ್ಳಂಬೆಳಗ್ಗೆಯೇ ಪ್ರದರ್ಶನ ಆರಂಭ ಆಗಿದೆ.

Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ
ಕಿಚ್ಚ ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 28, 2022 | 7:17 AM

ಅಂದುಕೊಂಡಂತೆಯೇ ‘ವಿಕ್ರಾಂತ್​ ರೋಣ’ (Vikrant Rona) ಅದ್ದೂರಿಯಾಗಿ ರಿಲೀಸ್​ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರ ಎಂಟ್ರಿ ಸೀನ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ. ಅನೂಪ್​ ಭಂಡಾರಿ (Anup Bhandari) ಅವರ ಬತ್ತಳಿಕೆಯಿಂದ ಬಂದ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ವಿಶ್ವಾದ್ಯಂತ ಸಾವಿರಾರು ಸ್ಕ್ರೀನ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಪ್ರದರ್ಶನ ಆರಂಭ ಆಗಿದೆ.

ಕರ್ನಾಟಕದಲ್ಲಿ ಇಂದು (ಜುಲೈ 28) 325 ಸಿಂಗಲ್ ಸ್ಕ್ರೀನ್​, 65 ಮಲ್ಟಿಪ್ಲೆಕ್ಸ್​ನಲ್ಲಿವ ‘ವಿಕ್ರಾಂತ್​ ರೋಣ’ ತೆರೆಕಂಡಿದೆ. ಮೊದಲ ದಿನ ರಾಜ್ಯದಲ್ಲಿ ಅಂದಾಜು ಎರಡೂವರೆ ಸಾವಿರ ಶೋಗಳು ನಡೆಯಲಿವೆ. ಸುಮಾರು 900 ಸ್ಕ್ರೀನ್ಗಳಲ್ಲಿ​ 3ಡಿ ಹಾಗೂ 1600 ಸ್ಕ್ರೀನ್ಗಳಲ್ಲಿ 2ಡಿ ವರ್ಷನ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನ ಶಂಕರ್​ನಾಗ್​ ಚಿತ್ರಮಂದಿರ, ಊರ್ವಶಿ ಥಿಯೇಟರ್​ ಸೇರಿದಂತೆ ಅನೇಕ ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ‘ವಿಕ್ರಾಂತ್​ ರೋಣ’ ಶೋ ಶುರುವಾಗಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಸುದೀಪ್​ ಪತ್ನಿ ಪ್ರಿಯಾ ಅವರು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ಬಂದಿದ್ದಾರೆ. ಅವರ ಜೊತೆ ನಿರ್ದೇಶಕ ಅನೂಪ್​ ಭಂಡಾರಿ ಹಾಗೂ ಚಿತ್ರತಂಡದ ಅನೇಕರು ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಎಲ್ಲ ಜಿಲ್ಲೆಯಲ್ಲೂ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

Published On - 7:10 am, Thu, 28 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ