Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ

Vikrant Rona Release Date: ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ
ಕಿಚ್ಚ ಸುದೀಪ್
Follow us
ಆಯೇಷಾ ಬಾನು
| Updated By: Digi Tech Desk

Updated on:Apr 15, 2021 | 1:28 PM

ಬೆಂಗಳೂರು: ತಮ್ಮ ಫ್ಯಾನ್ಸ್​ಗಳಿಗೆ ನಟ ಕಿಚ್ಚ ಸುದೀಪ್ ಸಿಹಿ ಸುದ್ದಿ ನೀಡಿದ್ದಾರೆ. ಕೊರೊನಾ ಸಮಸ್ಯೆಯ ನಡುವೆಯೂ ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೊರೊನಾ, ಲಾಕ್ ಡೌನ್, ಕರ್ಫ್ಯೂ, 50% ಆಕ್ಯೂಪೆನ್ಸಿ ಆತಂಕದ ನಡುವೆಯೂ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 01ರಂದು ರಿಲೀಸ್ ಆಗಿತ್ತು. ಬಳಿಕ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಆಸನ ಮಿತಿ ಹೇರಿದ್ದರಿಂದ ಸಿನಿಮಾ ರಿಲೀಸ್​ ಆದ ಒಂದೇ ವಾರಕ್ಕೆ ಚಿತ್ರ ಒಟಿಟಿ ಹಾದಿ ಹಿಡಿದಿತ್ತು. ಸಾಲುಸಾಲು ತೊಂದರೆ ಎದುರಿಸಿತ್ತು. ಈ ಬಗ್ಗೆ ನಟ ಪುನೀತ್ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದರು. ಸದ್ಯ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಏರುತ್ತಿದೆ.

ಹೀಗಾಗಿ ಸರ್ಕಾರ ಟರ್ಫ್ ರೂಲ್ಸ್​ಗಳನ್ನು ಜಾರಿ ಮಾಡುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ತಮ್ಮ  ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ಇನ್ನು ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್​ ರೋಣ ಸಿನಿಮಾದ ಟೈಟಲ್‌ ಪೋಸ್ಟರ್​ನ ಲಾಂಚ್ ಮಾಡಲಾಗಿತ್ತು. ವಿಕ್ರಾಂತ್ ರೋಣನಿಗೆ ನಿರ್ದೇಶಕ ಅನೂಪ್​ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ವಿಕ್ರಾಂತ್ ರೋಣ 3ಡಿ ವರ್ಷನ್ ಆ ಖುಷಿಯ ನಡುವೆಯೇ ಚಿತ್ರ 3ಡಿ ವರ್ಷನ್​ನಲ್ಲಿ ತೆರೆಕಾಣಲಿದೆ. ಕನ್ನಡದಲ್ಲಿ 3ಡಿ ಚಿತ್ರಗಳು ತೆರೆಕಂಡಿರುವುದು ಬೆರಳೆಣಿಕೆಯಷ್ಟು ಮಾತ್ರ ಆಗಿರುವುದರಿಂದ ಇಲ್ಲಿನ ಪ್ರೇಕ್ಷಕರು ಸಹಜವಾಗಿಯೇ ವಿಕ್ರಾಂತ್​ ರೋಣ ಬಿಡುಗಡೆಯನ್ನು ಸಂಭ್ರಮಿಸಲಿದ್ದಾರೆ.

ಇದನ್ನೂ ಓದಿ: ದುಬೈನ ಬುರ್ಜ್ ಖಲೀಫಾದ ಮೇಲೆ.. ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಟೈಟಲ್‌ ಪೋಸ್ಟರ್ ಲಾಂಚ್!

(Vikrant Rona Releasing on August 19th Announced By Kichcha Sudeep)

Published On - 1:05 pm, Thu, 15 April 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ