ಆ.15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು (75th Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ (National Anthem) ಹಾಡಿ, ಸಿಹಿ ಹಂಚುವ ಮೂಲಕ ಆಚರಣೆ ಜೋರಾಗಿತ್ತು. ಅನೇಕ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್ (Kichcha Sudeep) ಅವರು ರಾಷ್ಟ್ರಗೀತೆ ಹಾಡಿ, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಅದಕ್ಕೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸುದೀಪ್ ಅವರು ಭಕ್ತಿ-ಭಾವದಿಂದ ಹಾಡಿದ ಪರಿ ಕಂಡು ಅಭಿಮಾನಿಗಳು ಕೂಡ ಸೆಲ್ಯೂಟ್ ಮಾಡಿದರು. ಆದರೆ ಕೆಲವರಿಗೆ ಅದರಲ್ಲೊಂದು ತಪ್ಪು ಕಾಣಿಸಿತು!
ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್ ಒಳಗೆ ಹಾಡಬೇಕು. ಆದರೆ ಸುದೀಪ್ ಅವರು ಅಂದಾಜು 65 ಸೆಕೆಂಡ್ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್ ಮಾಡಿದ್ದಾರೆ. ‘ಸರಿಯಾಗಿ ರಾಷ್ಟ್ರಗೀತೆ ಹಾಡಿ ಸರ್. ನಿಮ್ಮನ್ನು ತುಂಬಾ ಜನ ಫಾಲೋ ಮಾಡುತ್ತಾರೆ. ನೀವು ಟಾಪ್ ನಟ ಆಗಿರಬಹುದು. ಆದರೆ 48-52 ಸೆಕೆಂಡ್ಗಳ ಒಳಗೆ ಹಾಡಬೇಕು ಎನ್ನುವ ಕಾಮನ್ ಸೆನ್ಸ್ ಕೂಡ ಇಲ್ವಾ?’ ಎಂಬ ಕಮೆಂಟ್ ಬಂದಿದೆ. ಅದಕ್ಕೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
‘ಇದು (ಕಮೆಂಟ್) ತುಂಬ ಒರಟಾಗಿದೆ. ಆದರೂ ಒಪ್ಪಿಕೊಳ್ಳುತ್ತೇನೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ಏನು ಅನಿಸಿತೋ ಅದನ್ನು ಮಾಡಿದ್ದೇನೆ. ಜೈ ಹಿಂದ್’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ತಪ್ಪು ಒಪ್ಪಿಕೊಂಡ ಅವರ ನಡೆಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಇದು ನಿಮ್ಮ ದೊಡ್ಡ ಗುಣ. ನೀವು ನಿಜವಾದ ಜಂಟಲ್ಮನ್’ ಎಂದು ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.
Harsh,,, but accepted… I did what i felt with luv towards my country..
Jai hind?? https://t.co/aMbsp0e3wb— Kichcha Sudeepa (@KicchaSudeep) August 15, 2021
Happy 75th Independence Day to every Indian.
Salutes,,,,, ?? pic.twitter.com/CNy8n3CiKq— Kichcha Sudeepa (@KicchaSudeep) August 15, 2021
ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಟ್ವಿಟರ್ನಲ್ಲಿ ಅವರಿಗೆ 25 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಟ್ವೀಟ್ಗಳ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಾರೆ. ‘ನೆಗೆಟಿವ್ ಕಮೆಂಟ್ ಮಾಡುವವರಿಗೆ ಪ್ರತಿಕ್ರಿಯೆ ನೀಡಬೇಡಿ ಸರ್’ ಎಂದು ಹಲವು ಅಭಿಮಾನಿಗಳು ಕಿಚ್ಚನ ಬಳಿ ಮನವಿ ಮಾಡಿಕೊಂಡಿದ್ದಾರೆ.
ಸಿನಿಮಾ ವಿಚಾರಕ್ಕೆ ಬರುವುದಾದರೆ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಕೊರೊನಾ ವೈರಸ್ ಕಾಟ ಕಡಿಮೆ ಆಗಲಿ ಎಂದು ಇಡೀ ಚಿತ್ರರಂಗ ಕಾಯುತ್ತಿದೆ. ಮೂರನೇ ಅಲೆ ಭಯದಿಂದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಆಗಿದೆ.
ಇದನ್ನೂ ಓದಿ:
ನಿಮ್ಮದು ಸುದೀಪ್ ಜಾತಿಯೇ ಆಗಿದ್ರಿಂದ ಬಿಗ್ಬಾಸ್ ಟ್ರೋಫಿ ಸಿಕ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಮಂಜು ಪಾವಗಡ