AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಕುಟುಂಬದ ಜೊತೆ ಊಟ ಸವಿದ ಬಿಗ್ ಬಾಸ್ ವಿನಯ್; ‘ನೀವೆ ಲಕ್ಕಿ’ ಎಂದ ಫ್ಯಾನ್ಸ್  

ವಿನಯ್ ಗೌಡ ಅವರ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಸುದೀಪ್ ಕುಟುಂಬದ ಜೊತೆ ಅವರು ಊಟ ಸವಿದಿದ್ದಾರೆ. ಸುದೀಪ್, ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜೊತೆ ಇರೋ ಫೋಟೋನ ವಿನಯ್ ಹಂಚಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಕುಟುಂಬದ ಜೊತೆ ಊಟ ಸವಿದ ಬಿಗ್ ಬಾಸ್ ವಿನಯ್; ‘ನೀವೆ ಲಕ್ಕಿ’ ಎಂದ ಫ್ಯಾನ್ಸ್  
ಸುದೀಪ್ ಕುಟುಂಬದ ಜೊತೆ ವಿನಯ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 12:17 PM

Share

ವಿನಯ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ (BBK 10) ಸ್ಪರ್ಧಿಸಿದ್ದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಕಿಚ್ಚ ಸುದೀಪ್ ಜೊತೆಯೂ ಅವರು ಆಪ್ತತೆ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್. ವಿನಯ್ ಅವರನ್ನು ಸುದೀಪ್ ಅವರು ಮೆಚ್ಚಿದ್ದರು. ಈಗ ಸುದೀಪ್ ಕುಟುಂಬದ ಜೊತೆ ವಿನಯ್ ಅವರು ಊಟ ಸವಿದಿದ್ದಾರೆ. ಈ ಸಂದರ್ಭದ ಫೋಟೋನ ವಿನಯ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯುಲ್ಲಿ ಸಖತ್ ಅಗ್ರೆಸ್ ಆಗಿ ಕಾಣಿಸಿಕೊಂಡಿದ್ದರು. ಇದು ಅನೇಕರಿಗೆ ಇಷ್ಟ ಆಗಿತ್ತು. ವಿನಯ್ ಗೌಡ ಅವರ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಸುದೀಪ್ ಕುಟುಂಬದ ಜೊತೆ ಅವರು ಊಟ ಸವಿದಿದ್ದಾರೆ. ಸುದೀಪ್, ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜೊತೆ ಇರೋ ಫೋಟೋನ ವಿನಯ್ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ‘ಹಂಬಲ್ ಫ್ಯಾಮಿಲಿ. ಅದ್ಭುತ ಊಟಕ್ಕೆ ಧನ್ಯವಾದ. ಡೆಸರ್ಟ್​ ಅತ್ಯುತ್ತಮವಾಗಿತ್ತು’ ಎಂದು ಬರೆದಿದ್ದಾರೆ ವಿನಯ್. ಈ ಪೋಸ್ಟ್​ಗೆ ಸಾನ್ವಿ ಅವರು ರಿಪ್ಲೈ ಮಾಡಿದ್ದು, ಹಾರ್ಟ್ ಎಮೋಜಿ ಹಾಕಿದ್ದಾರೆ. ಅನೇಕರು ಕಿಚ್ಚ ಅವರ ವಿನಮ್ರತೆ ನೋಡಿ ಖುಷಿ ಪಟ್ಟಿದ್ದಾರೆ. ‘ನೀವೇ ಲಕ್ಕಿ’ ಎಂದು ಅನೇಕರ ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳನ್ನು ಮನೆಯವರಂತೆ ಟ್ರೀಟ್ ಮಾಡುತ್ತಾರೆ. ಅವರ ಬಗ್ಗೆ ಯಾರಾದರೂ ತಪ್ಪಾಗಿ ಮಾತನಾಡಿದರೆ ಅದನ್ನು ಖಂಡಿಸುತ್ತಾರೆ. ಬಿಗ್ ಬಾಸ್ ಸ್ಪರ್ಧಿಗಳು ಕಷ್ಟದಲ್ಲಿದ್ದಾಗ ಅವರಿಗೆ ಸಹಾಯ ಮಾಡಿದ್ದೂ ಇದೆ. ಈಗ ವಿನಯ್ ಗೌಡ ಜೊತೆ ಅವರು ಊಟ ಮಾಡಿರೋದು ವಿಶೇಷ. ವಿನಯ್ ಗೌಡ ಅವರು ‘ಹರ ಹರ ಮಹದೇವ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. ‘ಬಿಗ್ ಬಾಸ್’ ಬಂದ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಿತು. ಒಂದು ವರ್ಗದ ಜನರು ಅವರನ್ನು ಬಹುವಾಗಿ ಇಷ್ಟಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್