AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು

ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಹೊಸ ಹಾಡು ಬಿಡುಗಡೆಯಾಗಿದೆ. ಸಂಜಿತ್ ಹೆಗಡೆ ಕಂಠಸಿರಿಯಲ್ಲಿ ಮೂಡಿಬಂದ ‘ಕಂದಮ್ಮ’ ವಿಡಿಯೋ ಸಾಂಗ್ ಸಖತ್ ವೈರಲ್ ಆಗಿದ್ದು, ವಿನಯ್ ರಾಜ್‌ಕುಮಾರ್ ಹಾಗೂ ಮೋನಿಷಾ ಜೋಡಿ ಗಮನ ಸೆಳೆದಿದೆ. ಚರಣ್ ರಾಜ್ ಮ್ಯೂಸಿಕ್ ಮೆಚ್ಚುಗೆ ಪಡೆದಿದೆ.

ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು
ವಿನಯ್-ಮೋನಿಷಾ
ರಾಜೇಶ್ ದುಗ್ಗುಮನೆ
|

Updated on: Jul 20, 2026 | 11:37 AM

Share

ಮುಖ್ಯಾಂಶಗಳು

  • ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದಿಂದ ಹೊಸ ಹಾಡು ರಿಲೀಸ್
  • ಮಧುರ ಧ್ವನಿಯಲ್ಲಿ ಮೂಡಿಬಂದ ‘ಕಂದಮ್ಮ’ ಸಾಂಗ್
  • ಸಂಜಿತ್ ಹೆಗಡೆ ಕಂಠಸಿರಿಯಲ್ಲಿ ಅರಳಿದ ಪ್ರೇಮಗೀತೆ

ದುನಿಯಾ ವಿಜಯ್ (Duniya Vijay) ನಟನೆಯ ಜೊತೆಗೆ ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮೊದಲು ‘ಸಲಗ’ ಮತ್ತು ‘ಭೀಮ’ ಚಿತ್ರದ ಮೂಲಕ ರೌಡಿಸಂ ಹಾಗೂ ಡ್ರಗ್ಸ್ ಕಥೆ ಹೇಳಿದ್ದ ದುನಿಯಾ ವಿಜಯ್ ಈ ಬಾರಿ ಒಂದು ಸುಂದರ ಪ್ರೇಮಕಥೆ ಕಟ್ಟಿಕೊಡುವ ಪ್ರಯತ್ನದಲ್ಲಿ ಇದ್ದಾರೆ. ಈಗ ಈ ಚಿತ್ರದ ‘ಕಂದಮ್ಮ, ಕಂದಮ್ಮ..’ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ.

‘ಸಿಟಿ ಲೈಟ್ಸ್’ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಹೀರೋ ಆದರೆ, ದುನಿಯಾ ವಿಜಿ ಅವರ ಪುತ್ರಿ ಮೋನಿಷಾ ನಾಯಕಿ. ಇಬ್ಬರ ಸುಂದರ ಪ್ರೇಮಕಥೆಯನ್ನು ಈ ಹಾಡು ತೆರೆದಿಟ್ಟಿದೆ. ರಾಮ್ ಚರಣ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಹಾಡು ಗಮನ ಸೆಳೆದಿದೆ. ಈ ಮೊದಲು ರಿಲೀಸ್ ಆಗಿದ್ದ ‘ಬಾವ ಬಾವ’ ಹಾಡು ಗಮನ ಸೆಳೆದಿತ್ತು. ಈಗ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಆಗಿದ್ದು, ‘ಸಿಟಿ ಲೈಟ್ಸ್’ ಸಿನಿಮಾ ಮ್ಯೂಸಿಕಲಿ ಹಿಟ್ ಆಗುವ ಸೂಚನೆ ಸಿಕ್ಕಿದೆ.

‘ಕಂದಮ್ಮ ಕಂದಮ್ಮ..’ ಹಾಡನ್ನು ಸಂಜಿತ್ ಹೆಗಡೆ ಅವರು ಹಾಡಿದ್ದಾರೆ. ಅವರ ಕಂಠವು ಹಾಡಿನ ತೂಕ ಹೆಚ್ಚಿಸಿದೆ. ನಾಗಾರ್ಜುನ ಶರ್ಮ ಅವರ ಸಾಹಿತ್ಯ ಹಾಡನ್ನು ಮತ್ತಷ್ಟು ಮುದ್ದಾಗಿಸಿದೆ. ಆನಂದ್ ಆಡಿಯೋ ಯೂಟ್ಯೂಬ್​ ಚಾನೆಲ್ ಮೂಲಕ ವಿಡಿಯೋ ಸಾಂಗ್ ಬಿಡುಗಡೆ ಕಂಡಿದೆ.

ಇದನ್ನೂ ಓದಿ:  ‘ಸಿಟಿಲೈಟ್ಸ್‌’ ಹಾಡು ಬಿಡುಗಡೆ: ಹೊಸ ಪ್ರತಿಭೆಗೆ ದುನಿಯಾ ವಿಜಿ ಬೆಂಬಲ

ಹಳ್ಳಿಯಿಂದ ನಗರಕ್ಕೆ ವಲಸೆ ಬರುವ ಕಥಾ ನಾಯಕ ಹಾಗೂ ನಾಯಕಿ ಎದುರಿಸುವ ಸವಾಲುಗಳೇ ಚಿತ್ರದ ಕಥೆ. ‘ಸಿಟಿ ಲೈಟ್ಸ್’ ಚಿತ್ರಕ್ಕೆ ಶಿವಸೇನಾ ಅವರ ಛಾಯಾಗ್ರಹಣ ಇದೆ, ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ದೀಪು ಎಸ್. ಕುಮಾರ್ ಎಡಿಟಿಂಗ್ ಚಿತ್ರಕ್ಕಿದೆ. ದುನಿಯಾ ಟಾಕೀಸ್ ಮತ್ತು ಯಂತ್ರೋದ್ದಾರಕ ಬ್ಯಾನರ್ ಅಡಿಯಲ್ಲಿ ವಿಜಯ್ ಕುಮಾರ್ ಹಾಗೂ ವಿಕ್ರಂ ಆರ್ಯ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ